ಬೆಂಗಳೂರು, (ಸೆ.01): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೂ ಕೊರೋನಾ ದೃಢಪಟ್ಟಿದೆ.

ಇದರಿಂದ  ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಅವರೇ ಇಂದು (ಮಂಗಳವಾರ) ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೂ ಕೊರೋನಾ: ಆಸ್ಪತ್ರೆಗೆ ದಾಖಲು

ಈ ಬಗ್ಗೆ ಟ್ವೀಟ್ ಮಾಡಿರುವ ಈಶ್ವರಪ್ಪ,  ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ  ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದಿದ್ದಾರೆ.

ಇದಕ್ಕೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಟ್ವೀಟ್ ಮಾಡಿದ್ದು, ಸನ್ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆತ್ಮೀಯರಾದ ಶ್ರೀ ಕೆ.ಎಸ್. ಈಶ್ವರಪ್ಪ ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ, ಎಂದಿನಂತೆ ನಾಡಿನ ಜನರ ಸೇವೆಯಲ್ಲಿ ನಿರತರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಹಾರೈಸಿದ್ದಾರೆ.