ರಾಜ್ಯದಲ್ಲಿ ಜಾಸ್ತಿಯಾಗ್ತಿದೆ ಶಕುನಿ ರಾಜಕೀಯ: ಸಚಿವೆ ಹೆಬ್ಬಾಳಕರ್
ಯತ್ನಾಳ ಅವರ ಬಗ್ಗೆ ಗೌರವವಿದೆ. ಅವರಿಗೆ ಇಂಥ ಹೇಳಿಕೆಗಳು ಶೋಭೆ ತರುವುದಿಲ್ಲ. ಬೇಕಿದ್ದರೆ ತಮ್ಮ ಪಕ್ಷದ ಬಗ್ಗೆ ಮಾತಾಡಲಿ. ಆದರೆ, ಇನ್ನೊಂದು ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ. ಅನವಶ್ಯಕ ಹೇಳಿಕೆಗಳಿಂದ ಗೊಂದಲ ಸೃಷ್ಟಿಸಿ ಸಿಎಂ ಮತ್ತು ಡಿಸಿಎಂ ನಡುವೆ ತಂದಿಡುವ ಕೆಲಸವನ್ನು ಬಿಡಲಿ ಎಂದು ತಿರುಗೇಟು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ(ಜು.31): ಕರ್ನಾಟಕ ರಾಜಕಾರಣದಲ್ಲಿ ಶಕುನಿ ರಾಜಕೀಯ ಜಾಸ್ತಿಯಾಗುತ್ತಿದ್ದು, ಬಿಜೆಪಿಯ ಕೆಲ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ತಂದಿಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.
ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರು ಒಳ ಒಪ್ಪಂದದ ರಾಜಕೀಯ ಮಾಡುತ್ತಿದ್ದಾರೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಯತ್ನಾಳ ಅವರ ಬಗ್ಗೆ ಗೌರವವಿದೆ. ಅವರಿಗೆ ಇಂಥ ಹೇಳಿಕೆಗಳು ಶೋಭೆ ತರುವುದಿಲ್ಲ. ಬೇಕಿದ್ದರೆ ತಮ್ಮ ಪಕ್ಷದ ಬಗ್ಗೆ ಮಾತಾಡಲಿ. ಆದರೆ, ಇನ್ನೊಂದು ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ. ಅನವಶ್ಯಕ ಹೇಳಿಕೆಗಳಿಂದ ಗೊಂದಲ ಸೃಷ್ಟಿಸಿ ಸಿಎಂ ಮತ್ತು ಡಿಸಿಎಂ ನಡುವೆ ತಂದಿಡುವ ಕೆಲಸವನ್ನು ಬಿಡಲಿ ಎಂದು ತಿರುಗೇಟು ನೀಡಿದರು.
ಅಂತಿಮ ಘಟ್ಟದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಿಎಂ, ಡಿಸಿಎಂ ಇಬ್ಬರೂ ಮುತ್ಸದ್ಧಿ ರಾಜಕಾರಣಿಗಳು. ನಮ್ಮ ಪಕ್ಷದ ಶಾಸಕರು ಹಾಗೂ ಹೈಕಮಾಂಡ್ ಯಾರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ ಹೊರತು ಬಿಜೆಪಿ ರಾಜ್ಯಾಧ್ಯಕ್ಷರಲ್ಲ. ಒಳಒಪ್ಪಂದ ರಾಜಕಾರಣದ ಮಾತನ್ನು ಇನ್ನು ಮುಂದಾದರೂ ಯತ್ನಾಳ ನಿಲ್ಲಿಸಲಿ ಎಂದು ಹೇಳಿದರು.