ಯುಗಾದಿಗೆ ರಾಜ್ಯದಲ್ಲಿ ಸಿಎಂ ಬದಲಾಗುತ್ತಾರೆ ಎಂದು ಯತ್ನಾಳ್ ಹೇಳಿದ ವಿಚಾರವಾಗಿ ಸಚಿವ ಲಕ್ಷ್ಮಣ್ ಸವದಿ ಪ್ರತಿಕ್ರಿಯಿಸಿದ್ದಾರೆ. ಮುಂದಿನ ದಿನದಲ್ಲಿ ಎಲ್ಲಾ ಸರಿಯಾಗುತ್ತದೆ ಎಂದಿದ್ದಾರೆ. 

ಬಂಟ್ವಾಳ (ಫೆ.01): ಯುಗಾದಿ ಬಳಿಕ ಸಿಎಂ ಬದಲಾವಣೆ ಆಗುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಹೇಳಿಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಂಟ್ವಾಳದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

 ಯಾವುದೇ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ. ಮುಂದಿನ ಎರಡೂವರೆ ವರ್ಷಗಳವರೆಗೆ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಮಾಜಿ MLAಗೆ ಬಿಜೆಪಿ ಗಾಳ, ಚರ್ಚೆಯಾಗಿದೆ ಎಂದ ಡಿಸಿಎಂ ...

ಇನ್ನು ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವ ಪ್ರಯತ್ನ ಆಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಅವರು ಪ್ರತಿಕ್ರಿಯಿಸಿದರು.

ನಿರಂತರವಾಗಿ ಬಿಜೆಪಿ ವಿರುದ್ಧ ಹಾಗೂ ಸಿಎಂ ವಿರುದ್ಧ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರದಲ್ಲಿ ಯಾವುದೇ ಹುರುಳಿಲ್ಲ ಎಂದು ಸಚಿವ ಸವದಿ ಹೇಳಿದರು.