Asianet Suvarna News Asianet Suvarna News

ಗೃಹಲಕ್ಷ್ಮೀ ನೋಂದಣಿಗಾಗಿ ಇನ್ನು ಮೆಸೇಜ್‌ಗೆ ಕಾಯಬೇಕಿಲ್ಲ: ಸಚಿವೆ ಲಕ್ಷ್ಮೀ

ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆ ಮತ್ತಷ್ಟುಸರಳಗೊಂಡಿದ್ದು, ಅರ್ಹ ಫಲಾನುಭವಿಗಳು ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. 

Minister Laxmi Hebbalkar Talks Over Gruhalakshmi Yojana Scheme gvd
Author
First Published Jul 27, 2023, 3:00 AM IST

ಬೆಂಗಳೂರು (ಜು.27): ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆ ಮತ್ತಷ್ಟುಸರಳಗೊಂಡಿದ್ದು, ಅರ್ಹ ಫಲಾನುಭವಿಗಳು ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಅರ್ಹ ಮಹಿಳೆಯರಿಗೆ ಮಾಸಿಕ 2 ಸಾವಿರ ರು. ನೀಡುವ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದೆ. ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್‌ ಸಂಖ್ಯೆಗೆ ಮೆಸೇಜ್‌ ಬಂದು ಅದರಲ್ಲಿನ ದಿನಾಂಕದಂದು ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. 

ಆದರೆ ಈಗ ಎಸ್‌ಎಂಎಸ್‌ಗೆ ಕಾಯಬೇಕಿಲ್ಲ. ಹತ್ತಿರದ ನೋಂದಣಿ ಕೇಂದ್ರಗಳಿಗೆ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ವಿವರಿಸಿದ್ದಾರೆ. ಬುಧವಾರ 5,28,051 ಮಹಿಳೆಯರು ನೋಂದಣಿ ಮಾಡಿಸಿದ್ದು, ಒಟ್ಟಾರೆ ಇದುವರೆಗೂ 55,89,865 ಮಹಿಳೆಯರು ಅರ್ಜಿ ಸಲ್ಲಿಸಿದಂತಾಗಿದೆ. ಯೋಜನೆಯಡಿ ನೋಂದಣಿ ಮಾಡಲು ಯಾರಾದರೂ ಹಣ ಪಡೆದರೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು. ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಮಹದಾಯಿ ವಿಷಯದಲ್ಲಿ ರಾಜ್ಯದ ರೈತರಿಗೆ ಅನ್ಯಾಯವಾಗಲು ಬಿಡಲ್ಲ​​​​​: ಸಿದ್ದರಾಮಯ್ಯ

ಉಡುಪಿ ವಿಡಿಯೋ ಬಗ್ಗೆ ಕಠಿಣ ಕ್ರಮ: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಲಕ್ಷ್ಮೀಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕಾನೂನಿನಡಿ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನನಗೆ ಲಭಿಸಿದ ಮಾಹಿತಿ ಪ್ರಕಾರ ಯಾವುದೇ ವಿಡಿಯೋ ವೈರಲ್‌ ಆಗಿಲ್ಲ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 28 ಕೋಟಿ ರು. ಮಳೆ ಹಾನಿ: ಉಡುಪಿ ಜಿಲ್ಲೆಯಾದ್ಯಂತ ಮಳೆ ಆರ್ಭಟದಿಂದ ಇದುವರೆಗೂ 9 ಮಂದಿ ಮೃತಪಟ್ಟಿದ್ದು, ಸುಮಾರು 28 ಕೋಟಿ ರು. ಮೌಲ್ಯದ ಆಸ್ತಿಗೆ ನಷ್ಟಉಂಟಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ಹೇಳಿದ್ದಾರೆ. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು.

ವೈದ್ಯರೇ ರೋಗಿಗಳಿಗೆ ನಗುಮುಖದಿಂದ ಚಿಕಿತ್ಸೆ ನೀಡಿ: ಸಚಿವ ದಿನೇಶ್‌ ಗುಂಡೂರಾವ್‌

ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ. ಇನ್ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ತಿಳಿಸಿದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಶೀಘ್ರವೇ ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಸಚಿವರು ಹೇಳಿದರು.

Follow Us:
Download App:
  • android
  • ios