ಯಾರೂ ಗಲಭೆಗೆ ಅವಕಾಶ ಕೊಡಬಾರದು: ಎಚ್‌ಡಿಕೆಗೆ ಸಚಿವ ಮಧು ಬಂಗಾರಪ್ಪ ಟಾಂಗ್
ಅಹಿತಕರ ಘಟನೆ ನಡೆದ ಸ್ಥಳಕ್ಕೆ ಹೋದಾಗ ಶಾಂತಿ ಕೇಳಬೇಕು. ಅದನ್ನು ಬಿಟ್ಟು ಗಲಭೆಗೆ ಅವಕಾಶ ಕೊಡಬಾರದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಟಾಂಗ್ ನೀಡಿದರು.
ಶಿವಮೊಗ್ಗ (ಸೆ.16): ಅಹಿತಕರ ಘಟನೆ ನಡೆದ ಸ್ಥಳಕ್ಕೆ ಹೋದಾಗ ಶಾಂತಿ ಕೇಳಬೇಕು. ಅದನ್ನು ಬಿಟ್ಟು ಗಲಭೆಗೆ ಅವಕಾಶ ಕೊಡಬಾರದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಟಾಂಗ್ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಮಾಡಲು ಕೆಲಸ ಇಲ್ಲ. ಕಾನೂನು ಬಾಹಿರವಾಗಿ ಯಾವುದೇ ಚಟುವಟಿಕೆ ನಡೆಯಬಾರದು ಎಂದರು.
ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಕಾನೂನು ಬಾಹಿರ ಹೇಳಿಕೆ ಚಟುವಟಿಕೆ ನೋಡಿದಾಗ ನಮ್ಮ ದೇಶದಲ್ಲಿ ಕಾನೂನು ಇದೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಮುಖ್ಯಮಂತ್ರಿ ಇದ್ದಾರೆ, ಅದನ್ನು ಗಮನಿಸುತ್ತಾರೆ. ರಾಹುಲ್ ಗಾಂಧಿ ವಿರುದ್ಧ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವಕ್ಕೆ ಗೌರವ ಕೊಡಲು ಬಾರದ ವ್ಯಕ್ತಿಯ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿ ರಾಷ್ಟ್ರದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ: ಬಿ.ಸಿ.ಪಾಟೀಲ್
ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ: ನಮ್ಮ ಶಾಲೆ ನಮ್ಮ ಜವಾಬ್ದಾರಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಸುವರ್ಣಸೌಧದಲ್ಲಿ ಜರುಗಿದ ನಮ್ಮಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ವನ್ನು ವಿದ್ಯಾರ್ಥಿಗಳಿಂದ ಅನಾವರಣಗೊಳಿಸಿ, ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಜೊತೆಗೆ ದಾನಿಗಳು ಕೈಜೋಡಿಸಿದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿ ರೂಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಸರ್ಕಾರ ಹಾಗೂ ಅನುದಾನಿತ ಶಾಲೆಗಳಲ್ಲಿ ಅಂದಾಜು ₹56 ಲಕ್ಷ ವಿದ್ಯಾರ್ಥಿಗಳಿದ್ದು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ ಅಂದಾಜು ₹1 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ಶೈಕ್ಷಣಿಕ ವರ್ಷದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮೂರು ಬಾರಿ ಅವಕಾಶ ನೀಡಲಾಗಿದ್ದು, ಇದರ ಸದುಪಯೋಗ ಪಡೆದುಕೊಂಡು 82 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜುಗಳಿಗೆ ಪ್ರವೇಶ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.
ಶಾಲಾ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಈ ಹಿನ್ನೆಲೆ ಅಜಿಂ ಪ್ರೇಮಜಿ ಫೌಂಡೇಶನ್ ಸಹಕಾರದಲ್ಲಿ ವಿದ್ಯಾರ್ಥಿಗಳಿಗೆ ವಾರದ ಎರಡು ದಿನ ಬದಲಾಗಿ ವಾರದ ಆರು ದಿನಗಳ ಕಾಲ ಮೊಟ್ಟೆ ವಿತರಿಸುವ ಕಾರ್ಯಕ್ಕೆ ಸೆ.25ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು ಎಂದರು. ಸರ್ಕಾರಿ ಶಾಲಾ ಮಕ್ಕಳಿಗೆ ಆರಂಭಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದೊಂದಿಗೆ 45 ಸಾವಿರ ಅತಿಥಿ ಶಿಕ್ಷಕರಿಗೆ ಶಾಲಾ ಪ್ರಾರಂಭಕ್ಕೂ ಮುನ್ನವೇ ನೇಮಕಾತಿ ಆದೇಶ ಪ್ರತಿ ನೀಡಲಾಗಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 1008 ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲಾಗಿದೆ. ಕ್ರಮೇಣ ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ವಿವರಿಸಿದರು.
ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಸರ್ಕಾರಿ ಶಾಲೆಗಳಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳು ಉನ್ನತ ಹುದ್ದೆ, ಸ್ಥಾನಮಾನ ಪಡೆದುಕೊಳ್ಳಲು ಅನುಕೂಲವಾಗುವಂತೆ ಸರ್ಕಾರದಿಂದಲೇ ನೀಟ್, ಸಿಇಟಿ ಕೋಚಿಂಗ್ ನೀಡುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ಮಹತ್ತರ ಬದಲಾವಣೆ ತರಲು ಶಿಕ್ಷಣ ಸಚಿವರು ಪ್ರಯತ್ನಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವ ಮೂಲಕ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನೀಡುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಪ್ರತಿಯೊಬ್ಬರು ಕೈಜೋಡಿಸಿದಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸಬಹುದಾಗಿದೆ ಎಂದರು.