Asianet Suvarna News Asianet Suvarna News

ಲೋಕಸಭಾ ಚುನಾವಣೆ 2024: ಈ ಬಾರಿ ಹೆಚ್ಚಿನ ಅಂತರದಲ್ಲಿ ನಾವು ಗೆಲ್ಲುತ್ತೇವೆ, ಮಧು ಬಂಗಾರಪ್ಪ

ನಾಳೆ ರಾಹುಲ್ ಗಾಂಧಿಯವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಎಲ್ಲಾ ತಾಲೂಕಿನಿಂದ ಜನ ಬರುತ್ತಾರೆ. ಫ್ರೀಡಂ ಫಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಹುಲ್ ಗಾಂಧಿಯವರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸುತ್ತಾರೆ: ಸಚಿವ ಮಧು ಬಂಗಾರಪ್ಪ 

Minister Madhu Bangarappa Talks Over Lok Sabha Elections 2024 grg
Author
First Published May 1, 2024, 5:44 PM IST

ಶಿವಮೊಗ್ಗ(ಮೇ.01):  ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಶಿವಮೊಗ್ಗ ಭೇಟಿ ನಂತರ ಮತ್ತಷ್ಟು ಸಂಚಲನ ಸೃಷ್ಟಿ ಆಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. 

ಇಂದು(ಬುಧವಾರ) ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ನಾಳೆ ರಾಹುಲ್ ಗಾಂಧಿಯವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಎಲ್ಲಾ ತಾಲೂಕಿನಿಂದ ಜನ ಬರುತ್ತಾರೆ. ಫ್ರೀಡಂ ಫಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಹುಲ್ ಗಾಂಧಿಯವರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. 

ಕಾಂಗ್ರೆಸ್ ಗ್ಯಾರಂಟಿ ಈಗ ವಾರಂಟಿ ಕಳೆದುಕೊಂಡಿದೆ: ಬಿ.ವೈ.ರಾಘವೇಂದ್ರ ಲೇವಡಿ

ಜಿಲ್ಲೆಯ ಎಲ್ಲ ಕಡೆ ಉತ್ತಮ ವಾತಾವರಣ ಕಂಡು ಬರುತ್ತಿದೆ. ನಮ್ಮ ಬೂತ್ ನಮ್ಮ ಜವಾಬ್ದಾರಿ ಒಳ್ಳೆಯ ರೀತಿಯಲ್ಲಿ ವರ್ಕೌಟ್ ಆಗುತ್ತಿದೆ.‌ ಕಾಂಗ್ರೆಸ್‌ನಲ್ಲಿ ಮೊದಲ ಬಾರಿಗೆ ಒಗ್ಗಟಾಗಿ ಕೆಲಸ ಆಗುತ್ತಿದೆ. ಹೆಚ್ಚಿನ ಅಂತರದಲ್ಲಿ ಈ ಬಾರಿ ನಾವು ಗೆಲ್ಲುತ್ತೇವೆ ಎಂದು ತಿಳಿಸಿದ್ದಾರೆ. 

ನಾಳೆ ರಾಹುಲ್ ಗಾಂಧಿಯವರ ಕಾರ್ಯಕ್ರಮಕ್ಕೆ ಒಂದು ಲಕ್ಷ ಜನ ಸೇರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಾಹುಲ್ ಗಾಂಧಿಯವರು ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ. ನಾಳೆಯ ಕಾರ್ಯಕ್ರಮಕ್ಕೆ ಸ್ಟಾರ್ ನಟರೂ ಸಹ ಭಾಗವಹಿಸುತ್ತಾರೆ. ನಮ್ಮ ಕಾರ್ಯಕ್ರಮಗಳಿಗೆ ಹೆಚ್ಚಿನ ಮಹಿಳೆಯರು ಸೇರುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. 

ಮತಕ್ಕಾಗಿ ಮಾಂಗಲ್ಯವನ್ನು ಮಧ್ಯೆ ತಂದ ಮೋದಿ ಅಪಾಯಕಾರಿ: ಮಧು ಬಂಗಾರಪ್ಪ

ಸಹೋದರ ಕುಮಾರ ಬಂಗಾರಪ್ಪ ವಾಗ್ದಾಳಿ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ ಅವರು, ಕುಮಾರ ಬಂಗಾರಪ್ಪ ಇಷ್ಟು ದಿನ ಎಲ್ಲಿದ್ದರು? ಯಾಕೇ ಸೋತರು? ಕೊಚ್ಚೆ ಬಗ್ಗೆ ಮಾತಾಡಲ್ಲ. ಕುಮಾರ ಬಂಗಾರಪ್ಪ ಈಗ ರೀಚಾರ್ಜ್ ಆಗಿ ಬಂದಿದ್ದಾರೆ ಎಂದು ಕುಮಾರ ಬಂಗಾರಪ್ಪ ವಿರುದ್ಧ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ.  

ಪ್ರಧಾನಿಗಳ ಹಾವಾಭಾವ ನೋಡಿದರೆ ಹತಾಶರಾಗಿ ಮಾತನಾಡುತ್ತಿದ್ದಾರೆ. ಮತದಾರರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದ ಮಧು ಬಂಗಾರಪ್ಪ ತಿಳಿಸಿದ್ದಾರೆ. 

Follow Us:
Download App:
  • android
  • ios