Asianet Suvarna News Asianet Suvarna News

ಸದನದಿಂದ ಸಂಸದರು ಹೊರಕ್ಕೆ, ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಎಂ.ಬಿ.ಪಾಟೀಲ್‌

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದಿಂದ ಸಂಸದರನ್ನು ಹೊರಗೆ ಹಾಕುವುದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು. 

Minister MB Patil Slams On BJP At Koppal gvd
Author
First Published Dec 22, 2023, 5:43 AM IST

ಕುಷ್ಟಗಿ (ಡಿ.22): ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದಿಂದ ಸಂಸದರನ್ನು ಹೊರಗೆ ಹಾಕುವುದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ತಾವರಗೇರಾ ಪಟ್ಟಣದ ಬುದ್ಧ ವಿಹಾರದ ಹೆಲಿಪ್ಯಾಡ್‌ನಲ್ಲಿ ಇಳಿದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರದ್ದು ತಪ್ಪು ಇದ್ದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಅವರನ್ನು ಸದನದಿಂದ ಹೊರಗೆ ಹಾಕಿರುವುದು ಇದೇ ಮೊದಲು. ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ ಎಂದರು.

ತಾಲೂಕಿನ ಕ್ಯಾದಗುಂಪಿಯ ಕೈಗಾರಿಕೆ ಪ್ರದೇಶದಲ್ಲಿ ಅರ್ಹ ಉದ್ದಿಮೆದಾರರು ಕೈಗಾರಿಕೆ ಸ್ಥಾಪನೆಗೆ ಮುಂದಾದಲ್ಲಿ ಅಂಥವರಿಗೆ ಕೈಗಾರಿಕೆ ಸ್ಥಾಪಿಸಲು ಅನುಮತಿ ಕೊಡಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಖಾನೆಗಳು ನಡೆಯಬೇಕು. ಅದರಿಂದ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ ಎಂದರು. ಸದ್ಯ ಹಳೆ ಸರ್ಕಾರ ಮಂಡಿಸಿದ ಬಜೆಟ್‌ನ್ನು ನಿರ್ವಹಣೆ ಮಾಡಿಕೊಂಡು ಹೋಗುತ್ತಿದ್ದೇವೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಇಡೀ ದೇಶಕ್ಕೆ ಕರ್ನಾಟಕ ಪೊಲೀಸ್ ಮಾದರಿ: ಗೃಹ ಸಚಿವ ಪರಮೇಶ್ವರ್

ಭೂತ್ನಾಳ ಕೆರೆಗೆ ತಿಡಗುಂದಿ ಅಕ್ವಾಡಕ್ಟ್ ಮೂಲಕ ಬೇಗ ನೀರು: ನಗರಕ್ಕೆ ಕುಡಿಯುವ ನೀರು ಪೂರೈಸುವ ಪ್ರಮುಖ ಭೂತ್ನಾಳ ಕೆರೆಗೆ ತಿಡಗುಂದಿ ಅಕ್ವಾಡಕ್ಟ್ ಮೂಲಕ ಆದಷ್ಟು ಬೇಗ ನೀರು ತುಂಬಿಸಲು ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿದರು. ಸಚಿವರನ್ನು ಭೇಟಿ ಮಾಡಿದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಗುತ್ತಿಗೆ ಸಿಬ್ಬಂದಿ ತಮ್ಮ ಸೇವೆಯನ್ನು ಬೇರೊಂದು ಏಜೆನ್ಸಿಗೆ ವರ್ಗಾಯಿಸದಂತೆ ಮನವಿ ಮಾಡಿದರು.

ಆಗ ಸ್ಥಳದಲ್ಲಿಯೇ ಇದ್ದ ಎಕ್ಸಿಕ್ಯೂಟಿವ್ ಎಂಜಿನಿಯರ್‌ ಎಸ್.ಎಸ್. ಪಟ್ಟಣಶೆಟ್ಟಿ ಅವರಿಂದ ಸಚಿವರು ಸಮಸ್ಯೆ ಕುರಿತು ಮಾಹಿತಿ ಪಡೆದರು. ಅಲ್ಲದೇ, ಈ ಸಮಸ್ಯೆ ಕುರಿತು ಪರಿಶೀಲನೆ ನಡೆಸಿ ಸಭೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್‌ರಿಗೆ ಕರೆ ಮಾಡಿ ಸೂಚನೆ ನೀಡಿದರು. ಇದೇ ವೇಳೆ ವಿಜಯಪುರ ನಗರಕ್ಕೆ ನೀರು ಸರಬರಾಜು ಮಾಡುವ ಪ್ರಮುಖ ಜಲಮೂಲಗಳಲ್ಲಿ ಒಂದಾಗ ಐತಿಹಾಸಿಕ ಭೂತ್ನಾಳ ಕೆರೆಗೆ ತಿಡಗುಂದಿ ಅಕ್ವಾಡಕ್ಟ್ ಮೂಲಕ ನೀರು ತುಂಬಿಸುವ ಯೋಜನೆ ವಿಳಂಬದ ಹಿನ್ನೆಲೆಯಲ್ಲಿ ಕೆಬಿಜೆಎನ್ಎನ್ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿದ ಸಚಿವರು, ಆದಷ್ಟು ಬೇಗ ನೀರು ತುಂಬಿಸಲು ಎಲ್ಲ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ನಿಮ್ಮ ಮಿತ್ರಪಕ್ಷದಿಂದ ಮೇಕೆದಾಟು, ಮಹದಾಯಿ ಬಗೆಹರಿಸಿ: ಸಿದ್ದು, ಅಶೋಕ್ ಜಟಾಪಟಿ

ತಿಕೋಟಾ ಮತ್ತು ಬಬಲೇಶ್ವರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಹೇಳಿದರು. ಸಚಿವರನ್ನು ಭೇಟಿ ಮಾಡಿದ ಜಾಲಗೇರಿ ಸುತ್ತಮುತ್ತಲಿನ ಜನತೆ, ಕೆರೆಗೆ ನೀರು ತುಂಬಿಸುವಂತೆ ಮನವಿ ಮಾಡಿದರು. ಆಗ ಕೂಡಲೇ ಸ್ಪಂದಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಕೆರೆಗೆ ನೀರು ತುಂಬಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ ನೂರಾರು ಜನ ಸಮಸ್ಯೆಗಳಿಗೆ ಸಚಿವ ಎಂ. ಬಿ. ಪಾಟೀಲ ಅವರು ಸ್ಥಳದಲ್ಲಿಯೇ ಸ್ಪಂದಿಸುವ ಮೂಲಕ ಗಮನ ಸೆಳೆದರು.

Follow Us:
Download App:
  • android
  • ios