ಯತ್ನಾಳ್ ಬಳಿ ಬಿಜೆಪಿಯವರ ವೀಕ್ನೆಸ್ ಇದೆ, ಹಿಂದೆ ಹೇಳಿದ್ದೆಲ್ಲ ಸತ್ಯ ಆಗಿದೆ: ಸಚಿವ ಎಂ.ಬಿ.ಪಾಟೀಲ್
ಬಿಜೆಪಿ ಎಷ್ಟು ದುರ್ಬಲ ಆಗಿದೆ ಅಂದ್ರೆ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಲು ಆಗ್ತಿಲ್ಲ. ಯತ್ನಾಳ್ ವಿರುದ್ಧ ಕ್ರಮ ಆಗದೇ ಇರುವುದು ಬಿಜೆಪಿ ದೌರ್ಬಲ್ಯ. ನಿನ್ನೆ ಕೋರ್ ಕಮಿಟಿ ಮೀಟಿಂಗ್ ಮಾಡಿದ್ದಾರೆ, ಆದ್ರೂ ಯತ್ನಾಳ್ ಮೇಲೆ ಕ್ರಮ ಆಗ್ತಿಲ್ಲ. ಕಳೆದ ಐದು ವರ್ಷಗಳಲ್ಲಿ ಯತ್ನಾಳ್ ಹೇಳಿದ್ದೆಲ್ಲ ಸತ್ಯ ಆಗಿದೆ. ಅದಕ್ಕಾಗಿಯೇ ಬಿಜೆಪಿಯವರು ಹೆದರಿಕೊಂಡಿದ್ದಾರೆ: ಸಚಿವ ಎಂ.ಬಿ. ಪಾಟೀಲ್
ಬೆಂಗಳೂರು(ಡಿ.29): ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಅಲ್ಲ, ಯತ್ನಾಳ್‌ಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧ ಇಲ್ಲ. ಯತ್ನಾಳ್ ಬಳಿ ಬಿಜೆಪಿಯವರ ಎಲ್ಲ ವೀಕ್ನೆಸ್ ಇದ್ದಂಗೆ ಇದೆ. ಯತ್ನಾಳ್ ಹಿಂದಿನಿಂದ ಹೇಳುತ್ತ ಬಂದಿರುವುದು ಎಲ್ಲವೂ ಸತ್ಯವಾಗಿದೆ. ಹೀಗಾಗಿಯೇ ಯತ್ನಾಳ್ ವಿರುದ್ಧ ಬಿಜೆಪಿಯವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಯಾವುದೇ ಶಿಸ್ತು ಕ್ರಮ ಆಗದೇ ಇರುವುದನ್ನ ನೋಡಿದರೆ ಅವರ ಬಳಿ ಎಲ್ಲ ದಾಖಲೆ ಇದ್ದಂತೆ ಇದೆ. ಸರ್ಕಾರ ಕೂಡ ಈ ಬಗ್ಗೆ ತನಿಖೆ ಮಾಡ್ತಾ ಇದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಇಂದು(ಶುಕ್ರವಾರ) ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು, ಕೊರೋನಾ ಸಂದರ್ಭದಲ್ಲಿ ಗುತ್ತಿಗೆದಾರರ ಅಸೋಸಿಯೇಷನ್ ಆರೋಪ ಸೇರಿ ಎಲ್ಲ ತನಿಖೆ ಮಾಡ್ತೇವೆ. ಸರ್ಕಾರ ಸುಮ್ಮನೆ ಕುಳಿತಿಲ್ಲ. ಜಾತಿ ಜನಗಣತಿ ವಿಚಾರದಲ್ಲಿ ಪದೇ ಪದೇ ಹೇಳಿಸಬೇಡಿ. ಹಿಂದೂ ಲಿಂಗಾಯತ ಹಿಂದೂ ಬಣಜಿಗ, ಹಿಂದೂ ಸಾದರ ಎಂದು ಜಾತಿ ಜನಗಣತಿಯಲ್ಲಿ ಬರೆಸಿದ್ದಾರೆ. 2ಎ ಮೀಸಲಾತಿ ಸಲುವಾಗಿ ಬೇರೆ ಬೇರೆ ಬರೆಸಿದರೆ ಯಾವುದೇ ಪ್ರಯೊಜನ ಇಲ್ಲ. 17% - 22% ನಾವು ಲಿಂಗಾಯತರು ರಾಜ್ಯದಲ್ಲಿ ಇದ್ದೇವೆ. ಒಂದೇ ಸೂರಿನಡಿ ಎಲ್ಲ ಲಿಂಗಾಯತರನ್ನು ತರಬೇಕಿದೆ. ಜಾತಿ ಜನಗಣತಿಗೆ ನಮ್ಮ ವಿರೋಧವಿಲ್ಲ. ಗೊಂದಲಗಳನ್ನು ಸರಿಪಡಿಸಿ ಎಂಬುದಷ್ಟೇ ನಮ್ಮ ಆಗ್ರಹವಾಗಿದೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲಿಲ್ಲ: ಯತ್ನಾಳ
ಹೆಚ್ಚುವರಿ ಡಿಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಎಂ.ಬಿ. ಪಾಟೀಲ್ ಅವರು, ನಾನು ಬಹಿರಂಗವಾಗಿ ಏನೂ ಹೇಳುವುದಿಲ್ಲ. ನಮ್ಮ ಅಭಿಪ್ರಾಯವನ್ನ ನಮ್ಮ ಹೈಕಮಾಂಡ್ ಮುಂದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂದೆ ಹೇಳ್ತೇವೆ ಎಂದು ತಿಳಿಸಿದ್ದಾರೆ.
ಬಿಜೆಪಿ ಎಷ್ಟು ದುರ್ಬಲ ಆಗಿದೆ ಅಂದ್ರೆ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಲು ಆಗ್ತಿಲ್ಲ. ಯತ್ನಾಳ್ ವಿರುದ್ಧ ಕ್ರಮ ಆಗದೇ ಇರುವುದು ಬಿಜೆಪಿ ದೌರ್ಬಲ್ಯ. ನಿನ್ನೆ ಕೋರ್ ಕಮಿಟಿ ಮೀಟಿಂಗ್ ಮಾಡಿದ್ದಾರೆ, ಆದ್ರೂ ಯತ್ನಾಳ್ ಮೇಲೆ ಕ್ರಮ ಆಗ್ತಿಲ್ಲ. ಕಳೆದ ಐದು ವರ್ಷಗಳಲ್ಲಿ ಯತ್ನಾಳ್ ಹೇಳಿದ್ದೆಲ್ಲ ಸತ್ಯ ಆಗಿದೆ. ಅದಕ್ಕಾಗಿಯೇ ಬಿಜೆಪಿಯವರು ಹೆದರಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಏಜೆಂಟ್ ಆಗಿದ್ರೆ ಯಾಕೆ ಆ್ಯಕ್ಷನ್ ತೆಗೆದುಕೊಳ್ತಿಲ್ಲ. ಕಾಂಗ್ರೆಸ್‌ಗೂ ಯತ್ನಾಳ್‌ಗೂ ಯಾವುದೇ ಸಂಬಂಧ ಇಲ್ಲ. ಕೋಮು ಭಾವನೆ ಬಿತ್ತುವವರ ವಿರುದ್ಧ ಕಠಿಣ ಕ್ರಮ ಆಗಬೇಕು. ಕೋಮು ಭಾವನೆ ಹರಡುವವರು ಉದ್ದೇಶಪೂರ್ವಕವಾಗಿ ಮಾಡ್ತಾರೆ. ಅದು ಕಲ್ಲಡ್ಕ ಪ್ರಭಾಕರ್ ಭಟ್ ಆಗ್ಲಿ ಯಾರೇ ಆಗ್ಲಿ ಕಠಿಣ ಕ್ರಮ ಆಗಬೇಕು. ಕನ್ನಡ ಸಂಘಟನೆ ವಿಚಾರವೇ ಬೇರೆ, ಕೋಮುಭಾವನೆ ಕೆರಳಿಸುವವರ ವಿಚಾರವೇ ಬೇರೆ ಎಂದು ತಿಳಿಸಿದ್ದಾರೆ.