ಚುನಾವಣೆ ಸಂಧರ್ಭದಲ್ಲಿ ಶಾಸಕ ಶರತ್‌ ಬಚ್ಚೇಗೌಡರು ಕ್ಷೇತ್ರದಲ್ಲಿ ಮತದಾರರ ಅನುಕಂಪ ಗಿಟ್ಟಿಸಲು ಅನುದಾನದ ನೆಪದಲ್ಲಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ಗಾಂ​ಧಿ ಪ್ರತಿಮೆ ಬಳಿ ಪ್ರತಿಭಟನೆ ನಾಟಕ ಮಾಡುತ್ತಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು.

ಹೊಸಕೋಟೆ (ಮಾ.04): ಚುನಾವಣೆ ಸಂಧರ್ಭದಲ್ಲಿ ಶಾಸಕ ಶರತ್‌ ಬಚ್ಚೇಗೌಡರು ಕ್ಷೇತ್ರದಲ್ಲಿ ಮತದಾರರ ಅನುಕಂಪ ಗಿಟ್ಟಿಸಲು ಅನುದಾನದ ನೆಪದಲ್ಲಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ಗಾಂ​ಧಿ ಪ್ರತಿಮೆ ಬಳಿ ಪ್ರತಿಭಟನೆ ನಾಟಕ ಮಾಡುತ್ತಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಸಿಎಂ ಬೊಮ್ಮಾಯಿ ಅವರು ಕಾಂಗ್ರೆಸ್‌, ಜೆಡಿಎಸ್‌ ಸೇರಿದಂತೆ ಬಿಜೆಪಿ ಶಾಸಕರಿಗೂ ವಿಶೇಷವಾಗಿ 25 ಕೋಟಿ ಅನುದಾನ ಪಕ್ಷಾತೀತವಾಗಿ ಬಿಡುಗಡೆ ಮಾಡಿದ್ದಾರೆ. ಶಾಸಕ ಶರತ್‌ ಬಚ್ಚೇಗೌಡರು ಸುಮಾರು 48 ಕೋಟಿ ಅನುದಾನ ಬಿಜೆಪಿ ಸರ್ಕಾರದ ಅವ​ಧಿಯಲ್ಲಿ ತಂದಿದ್ದಾರೆ. ಆದರೂ 10 ಕೋಟಿ ಅನುದಾನ ಸಿಎಂ ಬೊಮ್ಮಾಯಿ ಅವರು ತಡೆ ಹಿಡಿದಿದ್ದಾರೆ. ಅದಕ್ಕೆ ಎಂಟಿಬಿ ನಾಗರಾಜ್‌ ಕಾರಣ ಎಂದು ವಿನಾಕಾರಣ ಆರೋಪ ಮಾಡುವುದರ ಮೂಲಕ ಕ್ಷೇತ್ರದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಅನುದಾನಕ್ಕೆ ಸಿಎಂ ಫೋಟೋ ಬಳಸಲ್ಲ: ಹೊಸಕೋಟೆ ಕ್ಷೇತ್ರದಲ್ಲಿ ಮಾಡುವ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸರ್ಕಾರದ ಅನುದಾನ ಆದರೂ ಬ್ಯಾನರ್‌ಗಳಲ್ಲಿ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ, ಸಂಬಂಧಪಟ್ಟಇಲಾಖೆ ಸಚಿವ, ಉಸ್ತುವಾರಿ ಸಚಿವರ ಫೋಟೊ ಬಳಸದೆ ಬಚ್ಚೇಗೌಡರ ಹಾಗೂ ತಮ್ಮ ಬೆಂಬಲಿಗರ ಫೋಟೋ ಹಾಕಿಕೊಂಡು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾರೆ. ಸಂಸದ ಬಚ್ಚೇಗೌಡ ಬಿಜೆಪಿ ಸರ್ಕಾರದಲ್ಲಿ ಒಬ್ಬ ಸಂಸದರಾಗಿ ಮಗನ ರಾಜಕೀಯ ಅಸ್ತಿತ್ವಕ್ಕಾಗಿ ರಾಜಕಾರಣ ಮಾಡುವುದು ಸಮಂಜಸವಲ್ಲ. ಮೊದಲು ಅವರು ರಾಜಿನಾಮೆ ಕೊಟ್ಟು ನಂತರ ನೇರವಾಗಿ ಮಗನ ಬೆಂಬಲಕ್ಕೆ ನಿಲ್ಲುವುದು ಸೂಕ್ತ ಎಂದು ಸಂಸದ ಬಚ್ಚೇಗೌಡ ವಿರುದ್ಧ ಸಚಿವ ಎಂಟಿಬಿ ನಾಗರಾಜ್‌ ಕಿಡಿಕಾರಿದರು.

ಕೆಎಸ್ಆರ್‌ಟಿಸಿ ನಿಗಮದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗೆ ಹಾಜರಾಗಲು ಉಚಿತ ಬಸ್‌ ಸೌಲಭ್ಯ

ಅಭಿವೃದ್ಧಿ ಶ್ವೇತ ಪತ್ರ ಹೊರಡಿಸಿ: ಬಿಜೆಪಿ ಸರ್ಕಾರದ ವಿವಿಧ ಇಲಾಖೆಗಳಿಂದ 48 ಕೋಟಿ ಅನುದಾನ ತಂದು ಪೂಜೆಗೆ ನಮ್ಮನ್ನೆ ಆಹ್ವಾನಿಸಲ್ಲ. ನಮ್ಮ ಅವ​ಧಿಯಲ್ಲಿ ನಾನು ಮಾಡಿರುವ ಅಭಿವೃದ್ಧಿ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತೇನೆ. ನೀವು ಕೂಡ ನಿಮ್ಮ ಅವ​ಧಿಯಲ್ಲಿ ಮಾಡಿರುವ ಅಭಿವೃದ್ಧಿ ಶ್ವೇತ ಪತ್ರ ಹೊರಡಿಸಿ ಎಂದು ಶಾಸಕ ಶರತ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರಸಭೆ ಅಧ್ಯಕ್ಷ ಡಿ.ಕೆ.ನಾಗರಾಜ್‌, ಸದಸ್ಯರಾದ ಅರುಣ್‌ ಕುಮಾರ್‌, ಕೆ.ದೇವರಾಜ್‌, ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್‌, ಯುವ ಮೋರ್ಚಾ ಅಧ್ಯಕ್ಷ ತವಟಹಳ್ಳಿ ರಾಮು, ಬಿಎಂಆರ್‌ಡಿಎ ಅಧ್ಯಕ್ಷ ಶಂಕರೇಗೌಡ, ಮಾಜಿ ಅಧ್ಯಕ್ಷ ಸಿ.ನಾಗರಾಜ್‌, ಟೌನ್‌ ಬ್ಯಾಂಕ್‌ ಅಧ್ಯಕ್ಷ ಬಾಲಚಂದ್ರ, ಯುವ ಮುಖಂಡರಾದ ಶೌರತ್‌ ಇತರರಿದ್ದರು.

ಶಿರಸಿಯಲ್ಲಿ ಅಬ್ಬರದ ಬೇಡರ ವೇಷದ ಸಂಭ್ರಮ: ರೌದ್ರರಮಣೀಯ ಬೇಡರ ವೇಷ ನೋಡಲು ಸಹಸ್ರಾರು ಜನ

ಮಂಜುನಾಥನ ಸನ್ನಿ​ಧಿಗೆ ಬರಲು ಸಿದ್ಧ: ಶಾಸಕ ಶರತ್‌ಗೆ ಬರಬೇಕಾದ 10 ಕೋಟಿ ಅನುದಾನ ನಾನು ತಡೆ ಹಿಡಿಸಿದ್ದೇನೆ ಎಂದು ಆರೋಪ ಮಾಡಿರುವ ಶರತ್‌ ಬಚ್ಚೇಗೌಡ ನನ್ನನ್ನು ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿ​ಧಿಗೆ ಬಂದು ಪ್ರಮಾಣ ಮಾಡಲು ಆಹ್ವಾನಿಸಿದ್ದು, ನಾನು ಈ ಕ್ಷಣದಲ್ಲೆ ಬರಲು ಸಿದ್ಧ. ಅವರು ಸೂಲಿಬೆಲೆಯ ಶಾಂತನಪುರ ದಲಿತರ ಜಮೀನನ್ನು ಕಬಳಿಕೆ ಮಾಡಿಲ್ಲ ಎಂದು ಮಂಜುನಾಥನ ಸನ್ನಿ​ಧಿಗೆ ಬಂದು ಪ್ರಮಾಣ ಮಾಡ್ತಾರಾ? ನಾನು ಒಂದೂವರೆ ವರ್ಷದಿಂದ ಈ ಕುರಿತು ಕೇಳುತ್ತಲೆ ಇದ್ದೇನೆ. ಅವರು ಬರುವುದಾದರೆ ನಾನು ಯಾವ ಕ್ಷಣದಲ್ಲಿ ಬೇಕಾದರೂ ಸಿದ್ಧ ಎಂದು ಶಾಸಕ ಶರತ್‌ ಬಚ್ಚೇಗೌಡಗೆ ಆಹ್ವಾನ ನೀಡಿದರು.