Asianet Suvarna News Asianet Suvarna News

ಅರ್ಹರಿಗೆ ಸರ್ಕಾರಿ ಸವಲತ್ತು ತಲುಪಿಸಿ: ಸಚಿವ MTB

ಹೊಸಕೋಟೆ ತಾಲೂಕಿನಲ್ಲಿ 6 ತಿಂಗಳ ಒಳಗೆ 5 ಸಾವಿರ ನಿವೇಶನ ಹಂಚಿಕೆ ಮಾಡಲಾಗುವುದು. ಇದಕ್ಕೆ ಅ​ಧಿಕಾರಿಗಳು ಸನ್ನದ್ದರಾಗಬೇಕು ಎಂದ ಎಂಟಿಬಿ ನಾಗರಾಜ್‌ 

Minister MTB Nagaraj Talks Over Government Benefits grg
Author
First Published Sep 18, 2022, 11:30 AM IST

ಹೊಸಕೋಟೆ(ಸೆ.18):  ಸರ್ಕಾರದಿಂದ ಬರುವಂತಹ ಹಲವಾರು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಸಚಿವ ಎಂಟಿಬಿ ನಾಗರಾಜ್‌ ಹೇಳಿದರು. ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ​ಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕಮದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ಅಭಿವೃದ್ಧಿ ದೃಷ್ಟಿಯಿಂದ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಪ್ರಾಥಮಿಕ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ತಾಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ತಲಾ 5 ಎಕರೆ ಜಾಗ ಗುರುತಿಸಿ ಬಡವರಿಗೆ ನಿವೇಶನ ಹಂಚುವ ಕೆಲಸ ಮಾಡಲು ನಿರ್ಧರಿಸಲಾಗಿದೆ. ಜಾಗ ಗುರುತಿಸಲು ತಹಶೀಲ್ದಾರ್‌ ಅವರಿಗೆ ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿದ್ದು ಅಂತಹವರನ್ನು ಗುರುತಿಸಿ ಪಟ್ಟಿತಯಾರಿಸಬೇಕು. ಪಕ್ಷಾತೀತ, ಜಾತ್ಯತೀತವಾಗಿ ಸರ್ಕಾರಿ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಬೇಕು. ಪ್ರಸಕ್ತ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯತಿ ವಸತಿ ಯೋಜನೆಯಡಿ 100 ಮನೆಗಳನ್ನು ನೀಡಿದೆ. 2800 ಫಲಾನುಭವಿಗಳು ಇದರ ಪ್ರಯೋಜನ ಪಡೆಯಬಹುದು. ಹೊಸಕೋಟೆ ತಾಲೂಕಿನಲ್ಲಿ 6 ತಿಂಗಳ ಒಳಗೆ 5 ಸಾವಿರ ನಿವೇಶನ ಹಂಚಿಕೆ ಮಾಡಲಾಗುವುದು. ಇದಕ್ಕೆ ಅ​ಧಿಕಾರಿಗಳು ಸನ್ನದ್ದರಾಗಬೇಕು ಎಂದರು.

Karnataka Politics: ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಧಿಕಾರ ಖಚಿತ; ಎಂಟಿಬಿ ನಾಗರಾಜ್‌

ಆಡಳಿತದಲ್ಲಿ ಬದ್ದತೆ ಇರಲಿ:

ಜನ ಮತದಾನ ಮಾಡಿ ಗೆಲ್ಲಿಸೋದು ಜನಸೇವೆ ಮಾಡಲೇ ಹೊರತು, ಸರ್ಕಾರಿ ಜಮೀಗಳನ್ನು ಕಬಳಿಕೆ ಮಾಡುವುದಕ್ಕಲ್ಲ, ಬಡವರ ಜಮೀನನ್ನು ನಕಲಿ ದಾಖಲೆಗಳು ಸೃಷ್ಟಿಮಾಡಿಕೊಳ್ಳಲೂ ಅಲ್ಲ. ರಾಜಕಾರಣದಲ್ಲಿ ಬದ್ದತೆ ಇರಬೇಕು. ಉಪಚುನಾವಣೆಯಲ್ಲಿ ನಾನು ಸೋಲುಂಡರೂ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಸಣ್ಣ ಪುಟ್ಟವಿಚಾರಕ್ಕೂ ರಾಜಕಾರಣ ಮಾಡುವ ಮೂಲಕ ಶಾಂತಿ ಕದಡುವ ಕೆಲಸ ಮಾಡಲಾಗುತ್ತಿದೆ. ಅದ್ದರಿಂದ ಚುನಾವಣಾ ಸಂದರ್ಭಕ್ಕೆ ಮಾತ್ರ ರಾಜಕಾರಣ ಮಾಡಬೇಕು. ನಂತರದ ದಿನಗಳಲ್ಲಿ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು.

ತಹಸೀಲ್ದಾರ್‌ ಮಹೇಶ್‌ ಕುಮಾರ್‌ ಮಾತನಾಡಿ, ಸರ್ಕಾರಗಳು ಬಡವರ ಮನೆ ಬಾಗಿಲಿಗೆ ಸವಲತ್ತು ತಲುಪಿಸುವ ದೃಷ್ಟಿಯಿಂದ ಜಿಲ್ಲಾ​ಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮ ರೂಪಿಸಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಹಾಗೂ ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ಒದಗಿಸುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಬಿಎಸ್‌ವೈಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ, ಬಿಜೆಪಿಗೆ ಬಲ: ಎಂಟಿಬಿ ನಾಗರಾಜ್‌

ಕಾರ‍್ಯಕ್ರಮದಲ್ಲಿ ತಾಪಂ ಇಒ ಚಂದ್ರಶೇಖರ್‌, ಗ್ರಾಪಂ ಅಧ್ಯಕ್ಷ ಚಂದ್ರಶೇಖರ್‌, ಸಿಡಿಪಿಒ ವಿದ್ಯಾವಸ್ತ್ರದ್‌, ಹಿರಿಯ ಆರೋಗ್ಯ ನಿರೀಕ್ಷಣಾ​ಧಿಕಾರಿ ಗುರುರಾಜ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ನೀರಾವರಿ ಯೋಜನೆಗೆ 100 ಕೋಟಿ

ಅನುಗೊಂಡನಹಳ್ಳಿ ಹೋಬಳಿಯ 38 ಕೆರೆಗಳಿಗೆ ನೀರುಣಿಸುವ ಏತ ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ 100 ಕೋಟಿ ಮೀಸಲಿರಿಸಿದ್ದೆವು. ಈಗ ಹೆಚ್ಚುವರಿಯಾಗಿ 150 ಕೋಟಿ ಮಾಡಿದ್ದೇವೆ. ಕಾಮಗಾರಿ ಪ್ರಗತಿಯಲ್ಲಿದ್ದು ಇನ್ನು ನಾಲ್ಕು ತಿಂಗಳಲ್ಲಿ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲಿದ್ದಾರೆ. ಸುಮಾರು 29 ಕಿಮೀ ಪೈಪ್‌ ಲೈನ್‌ ಕಾಮಗಾರಿ ಮುಕ್ತಾಯಗೊಂಡಿದೆ. ಮಿಷನರಿಗಳು ಬಂದಿವೆ. ಇನ್ನು ಉಳಿದಂತೆ ಜಡಿಗೇನಹಳ್ಳಿ ಹಾಗೂ ಸೂಲಿಬೆಲೆ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಬಾಕಿ ಇದೆ. ಸಿಎಂ ಬಳಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದು, ತ್ವರಿತವಾಗಿ ಆಯೋಜನೆ ಸಾಕಾರ ಮಾಡುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು.
 

Follow Us:
Download App:
  • android
  • ios