ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮೇಲೆ ಪ್ರೀತಿ ಇದ್ದು, ಅವರು ಬಿಜೆಪಿಗೆ ಬಂದರೆ ಒಳ್ಳೆಯದಾಗುತ್ತದೆ. ಕಾಂಗ್ರೆಸ್‌ನಲ್ಲಿ ಅವರು ಮುಖ್ಯಮಂತ್ರಿಯಾಗುವುದು ಅನುಮಾನ ಇರುವ ಹಿನ್ನೆಲೆಯಲ್ಲಿ ನಮ್ಮ ಪಕ್ಷ ಬಿಜೆಪಿ ಸೇರುವಂತೆ ಆಹ್ವಾನ ಮಾಡುತ್ತೇವೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ನ.08): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮೇಲೆ ಪ್ರೀತಿ ಇದ್ದು, ಅವರು ಬಿಜೆಪಿಗೆ ಬಂದರೆ ಒಳ್ಳೆಯದಾಗುತ್ತದೆ. ಕಾಂಗ್ರೆಸ್‌ನಲ್ಲಿ ಅವರು ಮುಖ್ಯಮಂತ್ರಿಯಾಗುವುದು ಅನುಮಾನ ಇರುವ ಹಿನ್ನೆಲೆಯಲ್ಲಿ ನಮ್ಮ ಪಕ್ಷ ಬಿಜೆಪಿ ಸೇರುವಂತೆ ಆಹ್ವಾನ ಮಾಡುತ್ತೇವೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿರುಗೇಟು ನೀಡಿದ್ದಾರೆ. 

ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಸೇರಿದ ಶಾಸಕರಿಗೆ ಆಹ್ವಾನ ನೀಡಿದ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ತೊರೆದ 17 ಜನರ ಮೇಲೆ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರೀತಿ ಇರುವುದರಿಂದ ಆಹ್ವಾನ ನೀಡುತ್ತಿದ್ದಾರೆ. ನಮಗೂ ಅವರ ಮೇಲೆ ಪ್ರೀತಿ ಇದೆ. ಹೀಗಾಗಿ ಅವರು ಬಿಜೆಪಿಗೆ ಬಂದರೆ ಅವರಿಗೆ ಒಳ್ಳೆಯದಾಗುತ್ತದೆ. ನಾವು 17 ಜನರಲ್ಲಿ 18ನೇಯವರಾಗಿ ಶಿವಕುಮಾರ್‌ ಬಿಜೆಪಿಗೆ ಬರಲಿ ಎಂದು ಹೇಳಿದರು. ಶಿವಕುಮಾರ್‌ಗೆ ಕಾಂಗ್ರೆಸ್‌ನಲ್ಲಿ ಭವಿಷ್ಯ ಇಲ್ಲ. ಕಾಂಗ್ರೆಸ್‌ ಮುಖಂಡ ಜಿ.ಪರಮೇಶ್ವರ್‌ ಮುಂದಿನ ದಲಿತ ಮುಖ್ಯಮಂತ್ರಿ ನಾನೇ ಎನ್ನುತ್ತಿದ್ದಾರೆ. ಇನ್ನೊಂದೆಡೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. 

ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ: ನಿಖಿಲ್‌ ಕುಮಾರಸ್ವಾಮಿ

ಈ ಬಡಿದಾಟದಲ್ಲಿ ಶಿವಕುಮಾರ್‌ ಮುಖ್ಯಮಂತ್ರಿಯಾಗುವುದು ಅನುಮಾನ. ಹೀಗಾಗಿ ಅವರೇ ಬಿಜೆಪಿ ಬರಲಿ. ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ನಾವೇ ನಮ್ಮ ನಾಯಕರಿಗೆ, ಪ್ರಧಾನಿಗೆ ಹೇಳುತ್ತೇವೆ ಎಂದರು. ಸಿದ್ದರಾಮಯ್ಯ, ಶಿವಕುಮಾರ್‌, ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ನಮ್ಮ ಅವಶ್ಯಕತೆ ಇಲ್ಲ ಎಂದಿದ್ದರು. ಈಗ ಯಾಕೆ ಕರೆಯುತ್ತಿದ್ದಾರೆ. ನಮ್ಮ ಅವಶ್ಯಕತೆ ಬಿದ್ದಿದ್ದು ಹೇಗೆ ? ಬಿಜೆಪಿಯಲ್ಲಿ ನಮ್ಮನ್ನು ಗೌರವದಿಂದ ನೋಡಿಕೊಳ್ಳುತ್ತಿದ್ದಾರೆ. ಬಹಳ ಗೌರವವಿದ್ದು, ಇಲ್ಲಿ ನೆಮ್ಮದಿಯಾಗಿದ್ದೇವೆ. ಅವರಿಗೆ ವಾಪಸ್‌ ಆಹ್ವಾನ ನೀಡುತ್ತಿದ್ದೇವೆ ಎಂದರೆ, ಅವರ ಆಹ್ವಾನ ನಾವು ತಿರಸ್ಕರಿಸಿದ್ದೇವೆ ಎಂದರ್ಥ ಎಂದು ತಿಳಿಸಿದರು.

ಕೆಂಪೇಗೌಡ ಪ್ರತಿಮೆ ನಡಿಗೆ ಕಾರ್ಯಕ್ರಮ, ರಥಯಾತ್ರೆ: ಇದೇ ವೇಳೆ ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣ ಸಮಾರಂಭ ಪ್ರಯುಕ್ತ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕೆಂಪೇಗೌಡ ಪ್ರತಿಮೆ ನಡಿಗೆ ಕಾರ್ಯಕ್ರಮವನ್ನು ಸಚಿವ ಮುನಿರತ್ನ ನಡೆಸಿದರು. ಯಶವಂತಪುರ ಮತ್ತು ಜೆ.ಪಿ.ಪಾರ್ಕ್ ವಾಡ್‌ಗಳಲ್ಲಿ ಕಾರ್ಯಕ್ರಮ ನಡೆದಿದ್ದು, ರಸ್ತೆಯಲ್ಲಿ ಕೆಂಪೇಗೌಡರ ರಥಯಾತ್ರೆ ನಡೆಸಲಾಯಿತು. 

ಕೆಆರ್‌ಎಸ್‌ ಬಳಿ ಚಿರತೆ ಮತ್ತೆ ಪ್ರತ್ಯಕ್ಷ: ಕಳೆದ 20 ದಿನಗಳಿಂದ ಐದಾರು ಬಾರಿ ಪ್ರತ್ಯಕ್ಷ

ಈ ವೇಳೆ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದು, ನಮ್ಮ ಕ್ಷೇತ್ರದ ಒಂಭತ್ತು ವಾರ್ಡ್‌ಗಳಲ್ಲಿ ಸಂಚಾರ ಮಾಡಲಾಗುವುದು. ಕೆಂಪೇಗೌಡ ಅವರು ಎಲ್ಲಾ ಜಾತಿ ಧರ್ಮದವರನ್ನು ಒಟ್ಟಾಗಿ ಕರೆದುಕೊಂಡು ಹೋಗಿದ್ದರು. ಪ್ರಧಾನಿ ಸಮಾರಂಭಕ್ಕೆ ಆಗಮಿಸುತ್ತಿರು ವುದು ಸಂತಸದ ವಿಚಾರ. ಪ್ರಪಂಚದ ಯಾವುದೇ ಮೂಲೆಯಿಂದ ಬಂದರೂ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡ ಅವರ ದರ್ಶನ ಪಡೆಯಲಿದ್ದಾರೆ. ಇದು ಬೆಂಗಳೂರಿಗರಿಗೆ ಹೆಮ್ಮೆಯ ವಿಚಾರ ಎಂದು ಸಚಿವ ಮುನಿರತ್ನ ತಿಳಿಸಿದರು.