Asianet Suvarna News Asianet Suvarna News

ಜೆಡಿಎಸ್‌ ಯಾರನ್ನೂ ನೆಮ್ಮದಿಯಿಂದ ಇರಲು ಬಿಡಲ್ಲ: ಚಲುವರಾಯಸ್ವಾಮಿ

ಬಿಜೆಪಿ ಹಾಗೂ ಜೆಡಿಎಸ್ ಹಗರಣಗಳನ್ನು ನಾವು ಬಿಡುವುದಿಲ್ಲ. ಆರು ತಿಂಗಳ ಒಳಗೆ ತನಿಖೆ ಮಾಡಿಸುತ್ತೇವೆ. ಜಂತಕಲ್ ಮೈನಿಂಗ್ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ತನಿಖೆ ಮಾಡಲು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ 9 ತಿಂಗಳು ಆಗಿದೆ. ಆದರೆ, ರಾಜ್ಯಪಾಲರ ಬಾಯಿ ಮುಚ್ಚಿಸಿದ್ದಾರೆ. ಜೊಲ್ಲೆ, ರೆಡ್ಡಿ, ನಿರಾಣಿ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿಲ್ಲ. ಮೋದಿ, ಅಮಿತ್ ಶಾ ಅವರಿಗೆ ನಾಚಿಕೆ ಆಗೋಲ್ವೆ ಎಂದು ಪ್ರಶ್ನಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ 

minister n chaluvarayaswamy slams jds leaders grg
Author
First Published Aug 20, 2024, 10:45 AM IST | Last Updated Aug 20, 2024, 10:45 AM IST

ಮಂಡ್ಯ(ಆ.20): ಕೇಂದ್ರದ ಬಿಜೆಪಿ ವಿರುದ್ಧ ಮಾತನಾಡುವ ಧಮ್ ಇರುವುದು ಸಿದ್ದರಾಮಯ್ಯ ಅವರಿಗೆ ಮಾತ್ರ. ಹೀಗಾಗಿ, ಮುಡಾ ಮೂಲಕ ಷಡ್ಯಂತ್ರ ರೂಪಿಸುತ್ತಿದ್ದಾರೆ. ಆದರೆ, ಪ್ರತಿಪಕ್ಷಗಳಿಗೆ ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರನ್ನು ಮುಟ್ಟಲೂ ಆಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ನಗರದಲ್ಲಿ ಮಾತನಾಡಿ, ಜೆಡಿಎಸ್‌ನವರು ಯಾರನ್ನೂ ಸಹಿಸುವುದಿಲ್ಲ. ಯಾರನ್ನೂ ನೆಮ್ಮದಿಯಿಂದ ಇರಲು ಬಿಡುವುದಿಲ್ಲ. 2023ರ ವಿಧಾನಸಭಾ ಚುನಾವಣೆ ಬಿಜೆಪಿ ಹಾಗೂ ಜೆಡಿಎಸ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ವೀರೇಂದ್ರ ಪಾಟೀಲ್ ಸರ್ಕಾರದ ನಂತರ ಕಾಂಗ್ರೆಸ್‌ಗೆ ಹೆಚ್ಚು ಬಹುಮತ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ 9 ಸ್ಥಾನಗಳು ಬಂದಿವೆ. ಇದು ಬಿಜೆಪಿ ಹಾಗೂ ಜೆಡಿಎಸ್‌ನವರ ನಿದ್ದೆಗೆಡಿಸಿದೆ. ಹೀಗಾಗಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನ ನಿದ್ರೆಗೆಡಿಸಬೇಕು ಎನ್ನುವುದು ಬಿಜೆಪಿ-ಜೆಡಿಎಸ್ ಉದ್ದೇಶವಾಗಿದೆ ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಮರ್ಯಾದೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ

ಬಿಜೆಪಿ ಹಾಗೂ ಜೆಡಿಎಸ್ ಹಗರಣಗಳನ್ನು ನಾವು ಬಿಡುವುದಿಲ್ಲ. ಆರು ತಿಂಗಳ ಒಳಗೆ ತನಿಖೆ ಮಾಡಿಸುತ್ತೇವೆ. ಜಂತಕಲ್ ಮೈನಿಂಗ್ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ತನಿಖೆ ಮಾಡಲು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ 9 ತಿಂಗಳು ಆಗಿದೆ. ಆದರೆ, ರಾಜ್ಯಪಾಲರ ಬಾಯಿ ಮುಚ್ಚಿಸಿದ್ದಾರೆ. ಜೊಲ್ಲೆ, ರೆಡ್ಡಿ, ನಿರಾಣಿ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿಲ್ಲ. ಮೋದಿ, ಅಮಿತ್ ಶಾ ಅವರಿಗೆ ನಾಚಿಕೆ ಆಗೋಲ್ವೆ ಎಂದು ಪ್ರಶ್ನಿಸಿದರು.

ರಾಜ್ಯಪಾಲರು ತಮ್ಮ ಹುದ್ದೆಗೆ ಗೌರವ ಕೊಟ್ಟು ಕುಮಾರಸ್ವಾಮಿ, ಜೊಲ್ಲೆ, ನಿರಾಣಿ, ರೆಡ್ಡಿ ವಿರುದ್ಧ ಬಾಕಿ ಇರುವ ಪ್ರಕರಣಗಳಿಗೆ ಪ್ರಾಸಿಕ್ಯೂಶನ್ ಗೆ ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದರು.

Latest Videos
Follow Us:
Download App:
  • android
  • ios