ಈಗ ಪುಟ್ಟರಾಜು ಕತೆ ಏನಾಗಬೇಕು. ನಾನು ಹೇಗೋ ಕಾಂಗ್ರೆಸ್ ಸೇರಿ ಬಚಾವಾದೆ. ಆದರೆ, ಪುಟ್ಟರಾಜು ಕತೆ ಮುಗಿತು. ಮಕ್ಕಳಿಗೋಸ್ಕರ, ತಮ್ಮ ಕುಟುಂಬಕ್ಕೋಸ್ಕರ ಕುಮಾರಸ್ವಾಮಿಯವರು ಈಗ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಟೀಕಿಸಿದ ಸಚಿವ ಎನ್. ಚಲುವರಾಯಸ್ವಾಮಿ 

ಮಂಡ್ಯ(ಮಾ.27): ಪುಟ್ಟರಾಜುಗೆ ನೋಡಿದ ಹುಡ್ಗೀನಾ ಕುಮಾರಸ್ವಾಮಿಯವರು ಮದುವೆಯಾಗೋದು ಸರಿನಾ? ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕುಮಾರಸ್ವಾಮಿಯವರ ಮಂಡ್ಯ ಸ್ಪರ್ಧೆ ವಿರುದ್ಧ ಕಿಡಿ ಕಾರಿದರು. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಹೇಳಿ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅವರನ್ನು ಟೆಂಪಲ್ ರನ್ ಮಾಡಿಸಿ ಈಗ ಟಿಕೆಟ್ ತಪ್ಪಿಸಿದ್ದಾರೆ. ಈಗ ಯಾಕೋ ಆಗ್ತಾ ಇಲ್ಲ ಕಣಯ್ಯ. ನೀನು ನೋಡಿದ ಹುಡುಗಿ ಸ್ವಲ್ಪ ಚೆನ್ನಾಗಿದ್ದಾಳೆ. ಹಾಗಾಗಿ ನಾನೇ ಮದುವೆಯಾಗಬೇಕು ಅಂತ ಬಯಸಿದ್ದೇನೆ. ನಿನಗೆ ಮುಂದೆ ಒಳ್ಳೆಯ ಹುಡುಗಿ ನೋಡೋಣ ಅಂದಿದ್ದಾರಂತೆ. ಮಗನ ಮದುವೆ ಮಾಡೋಕೆ ಹೋಗಿ ಅಪ್ಪನೇ ಮದುವೆಯಾದ ಎಂಬಂತಾಗಿದೆ ಎಂದು ಕುಹಕವಾಡಿದರು.

ಲೋಕಸಭಾ ಚುನಾವಣೆ 2024: ಮಂಡ್ಯದಿಂದ ಲೋಕಸಭೆಗೆ ಕುಮಾರಸ್ವಾಮಿ ಸ್ಪರ್ಧೆ ಖಚಿತ..!

ಈಗ ಪುಟ್ಟರಾಜು ಕತೆ ಏನಾಗಬೇಕು. ನಾನು ಹೇಗೋ ಕಾಂಗ್ರೆಸ್ ಸೇರಿ ಬಚಾವಾದೆ. ಆದರೆ, ಪುಟ್ಟರಾಜು ಕತೆ ಮುಗಿತು. ಮಕ್ಕಳಿಗೋಸ್ಕರ, ತಮ್ಮ ಕುಟುಂಬಕ್ಕೋಸ್ಕರ ಕುಮಾರಸ್ವಾಮಿಯವರು ಈಗ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಟೀಕಿಸಿದರು.