ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪವರ ನಾಯಕತ್ವ ಬದಲಾವಣೆಗೆ ಎದ್ದಿರುವ ಕೂಗಿಗೆ ಕೇಂದ್ರ ಸಚಿವ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಬೆಂಗಳೂರು, (06): ಸಿಎಂ ಬಿಎಸ್ ಯಡಿಯೂರಪ್ಪನವರ ನಾಯಕತ್ವ ಬದಲಾವಣೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಬಿಜೆಪಿಯಲ್ಲಿಲ್ಲ, ಕಾಂಗ್ರೆಸ್ ನಲ್ಲಿ ಇರಬಹುದು. ಶಾಸಕರು ಯಾವುದೇ ನೋವು, ಗೊಂದಲ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿಯವರಲ್ಲಿ ಅಥವಾ ಕೇಂದ್ರದ ನಾಯಕರಲ್ಲಿ ಹೇಳಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದರು.
ಬಿಎಸ್‌ವೈ ಔತಣಕೂಟಕ್ಕೆ ಗೈರು: ಸ್ಪಷ್ಟ ಕಾರಣ ಕೊಟ್ಟ ಸಿ.ಟಿ.ರವಿ...!
ನಾಯಕತ್ವ ಬದಲಾವಣೆ ಮಾಡುವುದಿದ್ದರೆ ಮಾಧ್ಯಮಕ್ಕೆ ಮಾಹಿತಿ ನೀಡಿಯೇ ಮಾಡ್ತುತ್ತೇವೆ. ಆದರೆ ಸದ್ಯಕ್ಕಂತೂ ಯಾವುದೇ ಬದಲಾವಣೆ ಇಲ್ಲ. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಚೆನ್ನಾಗಿ ನಡೆದುಕೊಂಡು ಹೋಗುತ್ತಿದೆ ಯಾವುದೇ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾರೋ ಒಬ್ಬರು ಅಥವಾ ಇಬ್ಬರು ಹೇಳಿಕೆ ಕೊಡುತ್ತಿದ್ದಾರೆ. ಆ ಬಗ್ಗೆ ರಾಜ್ಯಾಕ್ಷರು ಹಾಗೂ ಸಂಬಂಧಿಸಿದ ನಾಯಕರು ಗಮನ ಹರಿಸಿದ್ದಾರೆ ಎಂದು ಹೇಳಿದರು.
ಇನ್ನು ಕೃಷಿ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಕಾಯ್ದೆಯ ಯಾವ ಸೆಕ್ಷನ್ ನಲ್ಲಿ ಲೋಪ ಇದೆ ಎಂದು ಹೇಳಲಿ ಅದನ್ನು ಸರಿಪಡಿಸಲು ಸಿದ್ಧರಿದ್ದೇವೆ ಎಂದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 6, 2021, 6:56 PM IST