ತಳಮಟ್ಟದಲ್ಲಿ ಪಾರದರ್ಶಕ ಆಡಳಿತ ಜಾರಿಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷರನ್ನು ಉತ್ತರದಾಯಿಯಾಗಿಸಲು ಹಾಗೂ ಗ್ರಾಮ ಮಟ್ಟದಲ್ಲಿ ಆಡಳಿತ ಚುರುಕುಗೊಳಿಸಲು ನೀತಿ ರೂಪಿಸುವಂತೆ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ. 

ಬೆಂಗಳೂರು (ಜೂ.09): ತಳಮಟ್ಟದಲ್ಲಿ ಪಾರದರ್ಶಕ ಆಡಳಿತ ಜಾರಿಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷರನ್ನು ಉತ್ತರದಾಯಿಯಾಗಿಸಲು ಹಾಗೂ ಗ್ರಾಮ ಮಟ್ಟದಲ್ಲಿ ಆಡಳಿತ ಚುರುಕುಗೊಳಿಸಲು ನೀತಿ ರೂಪಿಸುವಂತೆ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಸಿಇಒಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆಯನ್ನು ಜನಸ್ನೇಹಿಗೊಳಿಸಲು ಹಲವು ಸಲಹೆ ಸೂಚನೆ ನೀಡಿದರು.

ಜನಸ್ನೇಹಿ ಆಡಳಿತಕ್ಕೆ ಕಂಟಕವಾಗಿರುವ ಭ್ರಷ್ಟಪಿಡಿಒಗಳು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ತಳಮಟ್ಟದಲ್ಲಿ ಜನರಿಗೆ ಸುಸ್ಥಿರ ಆಡಳಿತ ನೀಡಬೇಕಾದ ಪಿಡಿಒಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಉತ್ತರದಾಯಿಯಾಗಿಸಲು ಹಾಗೂ ಗ್ರಾಮ ಮಟ್ಟದಲ್ಲಿ ಆಡಳಿತ ಚುರುಕುಗೊಳಿಸಲು ನೀತಿ ರೂಪಿಸಲು ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳ ಜತೆ ಚರ್ಚೆ ನಡೆಸಿದರು.

ಹಜ್‌ ಭವನಕ್ಕೆ ಸಿದ್ದರಾಮಯ್ಯ 5000 ಕೋಟಿ ನೀಡಿಲ್ಲ: ಜಮೀರ್‌ ಅಹಮದ್‌ ಖಾನ್‌

ಜಿಲ್ಲಾ ಪಂಚಾಯತಿ ಸಿಇಒಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರ, ಉಪಾಧ್ಯಕ್ಷರ ನಡುವಿನ ಸಮನ್ವಯತೆ ಹೆಚ್ಚಿಸಲು ಇಲಾಖಾ ವತಿಯಿಂದಲೇ ಪ್ರತಿ ಹದಿನೈದು ದಿನಕ್ಕೊಮ್ಮೆ ಸಮನ್ವಯ ಸಭೆಗಳನ್ನು ನಡೆಸಲು ನಿರ್ದೇಶನ ನೀಡಿದರು. ಜತೆಗೆ ಸಿಇಒಗಳು ಗ್ರಾಮ ಮಟ್ಟದಲ್ಲಿ ಕಡ್ಡಾಯವಾಗಿ ವೈಯಕ್ತಿಕ ಪರಿಶೀಲನೆ ನಡೆಸಬೇಕು. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ತೀವ್ರಗೊಳಿಸಿ ಅಂತಹವರ ವಿರುದ್ಧ ಕಾನೂನುಬದ್ಧವಾಗಿ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.

ಇಬ್ಬರು ಎಂಜಿನಿಯರ್‌ಗಳ ಅಮಾನತು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಬೇಜವಾಬ್ದಾರಿ ಹಾಗೂ ಕರ್ತವ್ಯ ಲೋಪದಿಂದ ಕೋಟ್ಯಂತರ ರು. ನಷ್ಟಉಂಟಾಗಲು ಕಾರಣವಾಗಿರುವ ಇಬ್ಬರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ತುಮಕೂರಿನ ಪಂಚಾಯತ್‌ ರಾಜ್‌ ಎಂಜಿನಿಯರ್‌ ವಿಭಾಗದಲ್ಲಿ ವಿಳಂಬ ಧೋರಣೆ, ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷ್ಯತೆಯಿಂದ ಸುಮಾರು 2.76 ಕೋಟಿ ರು. ನಷ್ಟಕ್ಕೆ ನೇರ ಕಾರಣವಾಗಿದ್ದ ಕಾರ್ಯಪಾಲಕ ಎಂಜಿನಿಯರ್‌ ಎಸ್‌.ಆರ್‌.ಹರೀಶ್‌ ಅವರನ್ನು ಸೇವೆಯಿಂದ ಅಮಾನತು ಮಾಡಲು ಸಚಿವರು ಸೂಚಿಸಿದ್ದರು. 

ಶಿವರಾಮ ಕಾರಂತ ಲೇಔಟ್‌ಗೆ ಜಾಗ ಕೊಟ್ಟವರು, ಬಿಡಿಎಗೂ ಲಾಭ ಆಗುವಂತೆ ಕ್ರಮ: ಡಿಕೆಶಿ

ಇದರಂತೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಜತೆಗೆ ಯಾದಗಿರಿಯ ಪಂಚಾಯತ್‌ ರಾಜ್‌ ಎಂಜಿನಿಯರ್‌ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು 1.3 ಕೋಟಿ ರು. ನಷ್ಟಮಾಡಿದ್ದ ಕಾರ್ಯಪಾಲಕ ಎಂಜಿನಿಯರ್‌ ಬಸವರಾಜ. ಕೆ .ಹಲಚೇರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.