ಉಪಚುನಾವಣೆ ಹೊತ್ತಲ್ಲಿ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ! ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ತಾರಾ ಇನ್ನಷ್ಟು ಶಾಸಕರು?
ರಾಜ್ಯದ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ. ಅಭಿವೃದ್ಧಿ ಕಾರ್ಯಗಳೇ ನಮ್ಮ ಕೈಹಿಡಿಯಲಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕಲಬುರಗಿ (ನ.1): ರಾಜ್ಯದ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ. ಅಭಿವೃದ್ಧಿ ಕಾರ್ಯಗಳೇ ನಮ್ಮ ಕೈಹಿಡಿಯಲಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಚನ್ನಪಟ್ಟಣ, ಸಂಡೂರು, ಶಿಗ್ಗಾಂವ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ವಿಚಾರವಾಗಿ ಇಂದು ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆದ್ದೇ ಗೆಲ್ಲುತ್ತಾರೆ. ಕುಮಾರಸ್ವಾಮಿ ಎಷ್ಟೇ ಕಣ್ಣೀರು ಹಾಕಿದ್ರೂ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದರು.
ನಮ್ಮ ಸರ್ಕಾರ ಸರ್ವೇ ಜನಾಃ ಸುಖಿನೋ ಭವಂತು ಎಂದು ಕೆಲಸ ಮಾಡುತ್ತಿದೆ: ಶಕ್ತಿ, ವಕ್ಫ್ ವಿವಾದ ಬಗ್ಗೆ ಹೆಬ್ಬಾಳ್ಕರ್ ಮಾತು
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಉತ್ತಮ ಕೆಲಸ ಮಾಡಿದ್ದಾರೆ. ಕೆರೆಗೆ ನೀರು ತುಂಬಿಸುವುದು ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರ ಅಭಿವೃದ್ಧಿ ಕೆಲಸಗಳೇ ಅವರಿಗೆ ಕೈಹಿಡಿಯಲಿದೆ. ಅದೇ ರೀತಿ ಸಂಡೂರು ಮತ್ತು ಶಿಗ್ಗಾಂವಿಯಲ್ಲಿಯೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಸೇರಿದಂತೆ ಅಭಿವೃದ್ಧಿ ಕೆಲಸದಿಂದ ಜನ ನಮಗೆ ಆಶೀರ್ವಾದ ಮಾಡೇ ಮಾಡುತ್ತಾರೆ. ಈ ಉಪಚುನಾವಣೆಯ ನಂತರ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಹಾಗಂತ ಅವರ ಪಕ್ಷದ ಮುಖಂಡರುಗಳೇ ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದರು.
ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಅಭ್ಯರ್ಥಿಯಾಗಿದ್ದು ದೇವರ ನಿರ್ಧಾರ - ಹೆಚ್‌ಡಿಕೆ
ಇನ್ನು ಬಿಜೆಪಿಯ ಎಂಟು ಜನರು ಕಾಂಗ್ರೆಸ್ ಸೇರ್ಪಡೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬರೀ ಎಂಟು ಜನ ಮಾತ್ರವಲ್ಲ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ. ಎಸ್ ಟಿ ಸೋಮಶೇಖರ್ ಅವರು ಹೇಳಿದಂತೆ ಎಂಟು ಜನ ಮಾತ್ರ ಅಲ್ಲ ಇನ್ನು ಹೆಚ್ಚಿನ ಬಿಜೆಪಿ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಉಪಚುನಾವಣೆಯ ನಂತರ ಅವರೆಲ್ಲಾ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.