ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿ: ಪ್ರಿಯಾಂಕ್ ಖರ್ಗೆ
ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದ ಸಚಿವ ಪ್ರಿಯಾಂಕ್ ಖರ್ಗೆ
ಮೈಸೂರು(ನ.04): ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು ಎಂದು ಕುಟುಕಿದರು.
ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಬಸ್ ಮಾತ್ರ ಓಡ್ತಿದೆ ಉಳಿದವು ಠುಸ್: ಕೆಎಸ್ ಈಶ್ವರಪ್ಪ ವಾಗ್ದಾಳಿ
ಜೆಡಿಎಸ್ ಕುಟುಂಬದ ಮೈತ್ರಿ
ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಕುಟುಂಬದವರು ಹೋಗಿ ಮಾಡಿಕೊಂಡು ಬಂದ ಮೈತ್ರಿ ಇದು. ರಾಜ್ಯದ ಬಿಜೆಪಿ ನಾಯಕರು ಸಹ ಹೋಗಿಲ್ಲ. ರೇಣುಕಾಚಾರ್ಯ, ಮಾಜಿ ಸಚಿವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಬಿಜೆಪಿಯವರು ತಮ್ಮದನ್ನ ತಾವು ನೋಡಿಕೊಳ್ಳಲಿ. ಕಾಂಗ್ರೆಸ್ ನ ಚಿಂತೆ ಅವರಿಗೆ ಬೇಡ. ನಮ್ಮ ಆದ್ಯತೆ 5 ಗ್ಯಾರಂಟಿಗಳನ್ನ ಅನುಷ್ಠಾನ ಮಾಡುವುದು ಎಂದು ಅವರು ತಿಳಿಸಿದರು.