Asianet Suvarna News Asianet Suvarna News

ಬಿಜೆಪಿಯಿಂದ ಜಾತಿ, ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ: ಸಚಿವ ಪ್ರಿಯಾಂಕ್ ಖರ್ಗೆ

ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಪಕ್ಷಕ್ಕೆ ನೆರೆಯ ತೆಲಂಗಾಣದಲ್ಲಿ ಅಧಿಕಾರ ತಂದುಕೊಟ್ಟಿದೆ ಎಂದು ರಾಜ್ಯದ ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

Minister Priyank Kharge Slams On BJP Party At Kalaburagi gvd
Author
First Published Dec 5, 2023, 1:30 AM IST

ಕಲಬುರಗಿ (ಡಿ.05): ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಪಕ್ಷಕ್ಕೆ ನೆರೆಯ ತೆಲಂಗಾಣದಲ್ಲಿ ಅಧಿಕಾರ ತಂದುಕೊಟ್ಟಿದೆ ಎಂದು ರಾಜ್ಯದ ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಐಟಿಎಫ್ ಕಲಬುರಗಿ ಫೈನಲ್ ಪಂದ್ಯ ವೀಕ್ಷಣೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳು ಕೆಲಸ ಮಾಡಿವೆ. ಮಧ್ಯಪ್ರದೇಶ, ರಾಜಸ್ತಾನದಲ್ಲಿ ಸ್ವಲ್ಪ ಹಿನ್ನಡೆ ಆಗಿರುವುದು ನಿಜವಾದರೂ, ಪೂರ್ಣ ಫಲಿತಾಂಶದ ಬಳಿಕ ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಕುಳಿತು ಪರಾಮರ್ಶೆ ನಡೆಸಲಿದ್ದಾರೆ ಎಂದು ನುಡಿದರು.

ತೆಲಂಗಾಣದಲ್ಲಿ ಬಿಆರ್‌ಎಸ್‌ ಸರ್ಕಾರದ ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರದಿಂದ ಹಿನ್ನಡೆ ಆಗಿದೆ. ಮತ್ತೊಂದೆಡೆ, ಕಾಂಗ್ರೆಸ್ ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದೆ. ಜಾತಿ ಜಾತಿಗಳ ಮಧ್ಯೆ, ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿಯವರು ಮಾಡಿದರೆ ನಮ್ಮದು ಜನಪರ ನಿಲುವು ಎಂದರು. ರಾಜಸ್ತಾನದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಕಳೆದ ಬಾರಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಬಿಜೆಪಿ ಆಪರೇಷನ್ ಮಾಡಿ ಅಧಿಕಾರಕ್ಕೆ ಬಂದಿತ್ತು. ಕರ್ನಾಟಕದಲ್ಲಿ ಮಾಡಿದಂತೆಯೇ ಮಧ್ಯಪ್ರದೇಶಲ್ಲಿ ಬಿಜೆಪಿಯವರು ಆಪರೇಷನ್ ಮಾಡಿ ಅಧಿಕಾರ ಮಾಡಿದ್ದರು. ನಮ್ಮದು ಹಾಗಲ್ಲ. ನಮ್ಮದೇನಿದ್ದರೂ ಪ್ರಜಾಪ್ರಭುತ್ವದ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಎಂದು ಸಮರ್ಥಿಸಿಕೊಂಡರು.

ಮುಂಬರುವ ಲೋಕಸಭೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ: ರೇಣುಕಾಚಾರ್ಯ ಭವಿಷ್ಯ

ಲೋಕ ಚುನಾವಣೆಗೆ ದಿಕ್ಸೂಚಿ ಅಲ್ಲ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಾಖ್ಯಾನಿಸಿದರು. ರಾಜ್ಯಗಳ ಚುನಾವಣೆಯೇ ಬೇರೆ. ರಾಷ್ಟ್ರ ಚುನಾವಣೆಯೇ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಫಲಿತಾಂಶ ದಿಕ್ಸೂಚಿ ಎಂದು ಹೇಳಲಾಗದು ಎಂದು ಖರ್ಗೆ ಹೇಳಿದರು.

ನಮ್ಮದು ಆಳುವ ಸರ್ಕಾರವಲ್ಲ ಆಲಿಸುವ ಸರ್ಕಾರ: ನಮ್ಮದು ಆಳುವ ಸರ್ಕಾರವಲ್ಲ ಆಲಿಸುವ ಸರ್ಕಾರವಾಗಿದೆ. ವಿಕಲಚೇತನರಿಗೆ ನಮ್ಮ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು. 

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಬುರ್ಗಿ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಎಲ್ಲಾ ಸಂಘ ಸ್ವಯಂಸೇವೆ ಸಂಸ್ಥೆಗಳು ಹಾಗೂ ಎಂಆರ್ ಡಬ್ಲ್ಯೂಯು ಆಶ್ರಯದಲ್ಲಿ ನಗರದ ಎಸ್ಎಂ ಪಂಡಿತ ರಂಗ ಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ತುಂಬಾ ಎತ್ತರದ, ಜಗತ್ತು ಗೌರವಿಸುವ ನಾಯಕ: ಸಿ.ಟಿ.ರವಿ

ವಿಕಲಚೇತನರ ರಾಜಕೀಯ ಸಾಮಾಜಿಕ ಆರ್ಥಿಕ ಮತ್ತು ಸಾಂಸ್ಕೃತಿಕ ಜೀವನದ ಪ್ರತಿಯೊಂದು ಅಂಶಗಳಲ್ಲಿ ವಿಕಲಾಂಗ ವ್ಯಕ್ತಿಗಳ ಏಕೀಕರಣದಿಂದ ಪಡೆಯಬಹುದಾದ ಲಾಭಗಳ ಅರಿವನ್ನು ಹೆಚ್ಚಿಸಲು ವಿಶ್ವ ವಿಕಲಚೇತನರ ದಿನವನ್ನು ಆಚರಿಸಲಾಗುತ್ತಿದೆ. 2011 ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 66392 ವಿಕಲಚೇತನರಿದ್ದು ಅವರಲ್ಲಿ 53213 ವಿಕಲಚೇತನರು ಮಾಸಾಶನ ಪಡೆಯುತ್ತಿದ್ದಾರೆ. ಇಲಾಖೆಯವತಿಯಿಂದ ಈ ಸಾಲಿನಲ್ಲಿ 36 ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದೆ ಎಂದರು.

Follow Us:
Download App:
  • android
  • ios