ಬಿಜೆಪಿಗರಿಗೆ ನಾನು ಮನೆದೇವ್ರು, ನನ್ನ ನೆನಪಿಲ್ಲದೆ ನಿದ್ದೆ ಬರಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ವಿಪಕ್ಷ ನಾಯಕ ಆರ್ ಅಶೋಕ್, ಪಕ್ಷದ ಅಧ್ಯಕ್ಷ ವಿಜಯೇಂದ್ರರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆ ದೇವರು ಇದ್ದಹಾಗೆ. ಬೆಳಗ್ಗೆಯಿಂದ ರಾತ್ರಿಯವರೆಗೂ ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ.
ಕಲಬುರಗಿ (ಮಾ.13): ವಿಪಕ್ಷ ನಾಯಕ ಆರ್ ಅಶೋಕ್, ಪಕ್ಷದ ಅಧ್ಯಕ್ಷ ವಿಜಯೇಂದ್ರರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆ ದೇವರು ಇದ್ದಹಾಗೆ. ಬೆಳಗ್ಗೆಯಿಂದ ರಾತ್ರಿಯವರೆಗೂ ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ. ನನ್ನ ನಾಮಜಪ ಮಾಡುತ್ತಿರುತ್ತಾರೆ. ಇಲ್ಲದಿದ್ದರೆ ಅವರಿಗೆ ಆಹಾರ ಜೀರ್ಣವಾಗುವುದಿಲ್ಲ, ನಿದ್ರೆನೇ ಹತ್ತೋದಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನನ್ನ ಹೆಸರು ಹಿಡಿದು ಸಲ್ಲದ ಆರೋಪ ಮಾಡುತ್ತಿರುತ್ತಾರೆ.
ತಾವು ಅದಕ್ಕೆಲ್ಲ ತಲೆ ಕೆಡೆಸಿಕೊಳ್ಳೋದಿಲ್ಲವೆಂದರು. ಈಚೆಗೆ ಕಲಬುರಗಿಯಲ್ಲಿ ನಡೆದ ನಮೋ ಬ್ರಿಗೆಡ್‌ನ ಸಮಾರಂಭಕ್ಕೆ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲೆ ಪ್ರವೇಶ ನಿರಾಕರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುವಾಗ ಸಿಡಿಮಿಡಿಗೊಂಡ ಸಚಿವರು, ನನಗೆ ಮಾಡಲು ಬಹಳಷ್ಟು ಕೆಲಸಗಳಿವೆ ಬಾಡಿಗೆ ಭಾಷಣಕಾರನ ಬಗ್ಗೆ ಮಾತನಾಡಲು ಸಮಯವಿಲ್ಲ. ಅವನು ಒಂದೇ ಒಂದು ಗ್ರಾಪಂ ಚುನಾವಣೆ ಗೆದ್ದಿಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಅಪ್ಪನ ಕೆರೆಗೆ ಕಾಂಗ್ರೆಸ್‌ನಿಂದ ಕಾಯಕಲ್ಪ: ಸಚಿವ ಪ್ರಿಯಾಂಕ್ ಖರ್ಗೆ
ಸಂವಿಧಾನ ಬದಲಿಸುವ ಬಗ್ಗೆ ಮಾತನಾಡಿರುವ ಸಂಸದ ಅನಂತಕುಮಾರ ಅವರಿಗೆ ತಲೆ ಕೆಟ್ಟಿದೆ, ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆಂದರು. ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೇಟ್ ಸಿಗೋದು ಅನುಮಾನವೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯಲ್ಲಿ ಯಾರಿಗೆ ಟಿಕೇಟ್ ನೀಡುತ್ತಾರೆ, ನಿರಾಕರಿಸುತ್ತಾರೆಂಬುದು ತಮಗೆ ಸಂಬಂಧವೇ ಇಲ್ಲವೆಂದರು.
ಸಂಸದರ ಅಪರಂಜಿ ಎಲ್ಲಿ?: ಚಿತ್ತಾಪುರದ ಅಪರಂಜಿ ಈಗ ಎಲ್ಲಿ ಎಂದು ಜಾಧವ್ ರನ್ನು ಪ್ರಶ್ನಿಸಿದ ಸಚಿವರು, ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲಾಗಿತ್ತು. ಪೊಲೀಸ್ ತನಿಖೆ ನಂತರ ಅದು ಸುಳ್ಳು ಎಂದು ಸಾಬೀತಾಗಿತ್ತು. ಆ ನಂತರ ಜಾಧವ್‌ರ ಅಪರಂಜಿ ನಾಪತ್ತೆಯಾಗಿದ್ದಾನೆ ಎಂದು ಕುಟುಕಿದರು.
ಪ್ರಿಯಾಂಕ್ ಖರ್ಗೆ ಮಂತ್ರಿಯಾಗಿದ್ರೂ ತಾಕತ್ತಿಲ್ಲ: ಚಕ್ರವರ್ತಿ ಸೂಲಿಬೆಲೆ
ನಮ್ಮ ಸರ್ಕಾರದಲ್ಲಿ ರೌಡಿಗಳನ್ನು ನಿಯಂತ್ರಣ ಮಾಡಿರುವುದಕ್ಕೆ ಬಿಜೆಪಿಗರಿಗೆ ಸಂಕಷ್ಟವಾಗಿದೆ ಎಂದ ಖರ್ಗೆ, ಕಾನೂನು ಸುವ್ಯವಸ್ಥೆ ಕುಸಿದಿಲ್ಲ ಎನ್ನುವುದಕ್ಕೆ ಹಲವಾರು ಉದಾಹರಣೆಗಳಿವೆ. ಸಂಸದರಾಗಿ ಜಾಧವ ಏನು ಅಭಿವೃದ್ಧಿ ಮಾಡಿದ್ದಾರೆ ಹೇಳಲಿ. ಸಿಯುಕೆಗೆ ಸುಣ್ಣ ಬಣ್ಣ ಬಳಿಸಿಲ್ಲ, ರೇಲ್ವೆ ವಲಯ, ನಿಮ್ಝ್, ಟೆಕ್ಸಟೈಲ್ ಪಾರ್ಕ್ ಮುಂತಾದ ಯೋಜನೆಗಳು ವಾಪಸ್ ಹೋಗಿವೆ, ಸಂಸದ ಜಾಧವ್ ವಾಸ್ತವದ ಮೇಲೆ ಮಾತನಾಡಲಿ ಎಂದು ಕುಟುಕಿದರು.