ಆರ್‌ಎಸ್‌ಎಸ್ ತತ್ವ ನಂಬಿ ಉದ್ಧಾರ ಆಗಿರುವವರ ತೋರಿಸಿ: ಸಚಿವ ಪ್ರಿಯಾಂಕ್ ಖರ್ಗೆ
ಆರ್‌ಎಸ್‌ಎಸ್ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ. ಅದರ ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ (ಸೆ.18): ಆರ್‌ಎಸ್‌ಎಸ್ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ. ಅದರ ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್ಎಸ್‌ನಿಂದ ಸಮಾಜಕ್ಕೆ ಏನೂ ಪ್ರಯೋಜನವಿಲ್ಲ. ದೇಶಭಕ್ತಿಯೂ ಇಲ್ಲ. ಆರ್‌ಎಸ್‍ಎಸ್ ಬಗ್ಗೆ ಮಾತನಾಡಲು ಭಯ ಪಡುವುದಿಲ್ಲ. ಅದರ ತತ್ವ ನಂಬಿ ಯಾರೂ ಉದ್ಧಾರ ಆಗಿಲ್ಲ ಎಂದರು. ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ, ಸಂವಿಧಾನದ ಪ್ರಕಾರ ಯಾವುದೇ ಕಾರ್ಯಕ್ರಮಗಳನ್ನು ಮಾಡಲಿ. ಅದನ್ನು ಬಿಟ್ಟು ಕೇಸರೀಕರಣ ಮಾಡೋದಾದರೆ ಅದು ನಡೆಯಲ್ಲ. ಅವರಿಗೆ ಅಷ್ಟೊಂದು ಆಸಕ್ತಿ ಇದ್ದರೆ ಶೈಕ್ಷಣಿಕ ಸಂಸ್ಥೆಗಳನ್ನು ಖಾಸಗಿಯಾಗಿ ನಡೆಸಲಿ ಎಂದು ಹೇಳಿದರು.
ಸುಳ್‌ಸುದ್ದಿ ತಡೆಗೆ ರಾಜ್ಯದಲ್ಲಿ 3 ತಂಡ ರಚನೆ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಹೊಸ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಶೀಘ್ರದಲ್ಲಿ ಪ್ರತ್ಯೇಕ ತಂಡ ರಚಿಸಿ ಆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹರಡುವ ಪ್ರಕ್ರಿಯೆ ಹೆಚ್ಚುತ್ತಿದೆ. ಅದನ್ನು ತಡೆಯಲು ಸರ್ಕಾರ ಹೊಸ ವ್ಯವಸ್ಥೆ ಜಾರಿಗೊಳಿಸುತ್ತಿದೆ.
3 ಡಿಸಿಎಂ ವರಿಷ್ಠರ ಮಟ್ಟದಲ್ಲಿ ಚರ್ಚೆಗೆ ಬಂದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ಪ್ರಮುಖವಾಗಿ ತಪ್ಪು ಮಾಹಿತಿ ಹರಡುವುದು, ಸಮಾಜದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹಂಚಿಕೊಂಡರೆ ಅದನ್ನು ಪತ್ತೆ ಹಚ್ಚಿ, ಅದರ ಬಗ್ಗೆ ಜನರನ್ನು ಎಚ್ಚರಿಸುವ ಕೆಲಸ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಈ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಿದ್ದು, ಜಾರಿಗೆ ಅನುಮತಿಸಿದ್ದಾರೆ. ಆದರೂ ಕೆಲ ಸಣ್ಣಪುಟ್ಟ ಕೆಲಸಗಳಿದ್ದು ಅದನ್ನು ಪೂರ್ಣಗೊಳಿಸಿ ಶೀಘ್ರದಲ್ಲಿ ಜಾರಿ ಮಾಡಲಾಗುವುದು ಎಂದರು.
3 ತಂಡಗಳ ರಚನೆ: ಸುಳ್ಳು ಸುದ್ದಿ ಪತ್ತೆ ಹಾಗೂ ಅದರ ಬಗ್ಗೆ ಜಾಗೃತಿ ಮೂಡಿಸಲು ಮೂರು ತಂಡಗಳನ್ನು ರಚಿಸಲಾಗುವುದು. ಸುಳ್ಳು ಸುದ್ದಿ ಪತ್ತೆ ಮಾಡಿ, ಅದರ ಸತ್ಯಾಸತ್ಯತೆ ಪರಿಶೀಲಿಸಲು ಫ್ಯಾಕ್ಟ್‌ಚೆಕ್ ತಂಡ, ಅದಾದ ನಂತರ ಫ್ಯಾಕ್ಟ್‌ಚೆಕ್ ತಂಡ ಸುಳ್ಳು ಸುದ್ದಿ ಪತ್ತೆ ಮಾಡಿರುವುದು ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಅನಾಲಿಟಿಕ್ ತಂಡ ಹಾಗೂ ಆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೆಪಾಸಿಟಿ ಬಿಲ್ಡಿಂಗ್ ತಂಡವನ್ನು ರಚಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಕಾಂಗ್ರೆಸ್ ಯಾವತ್ತೂ ಬಡವರ ಪರ: ಸಂಸದ ಡಿ.ಕೆ.ಸುರೇಶ್
3 ತಂಡಗಳ ಮೇಲುಸ್ತುವಾರಿಗೆ ಓವರ್‌ಸೈಟ್ ಸಮಿತಿ, ಆ ಸಮಿತಿ ಮಾಡುವ ಶಿಫಾರಸುಗಳನ್ನು ಪರಿಶೀಲಿಸಲು ರಿವ್ಯೂ ಎಸ್‌ಪಿಒಸಿ ಸಮಿತಿ ಹಾಗೂ ಉಳಿದೆರಡು ಸಮಿತಿಗಳು ಮಾಡುವ ಶಿಫಾರಸುಗಳನ್ನು ಸುಳ್ಳು ಸುದ್ದಿ ಪತ್ತೆ ಹಾಗೂ ಜಾಗೃತಿಗಾಗಿ ರಚಿಸಲಾಗಿರುವ ಮೂರು ತಂಡಗಳೊಂದಿಗೆ ಸಮನ್ವಯ ಸಾಧಿಸಲು ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದು ತಿಳಿಸಿದರು.