31 ಗ್ರಾಮಗಳಿಗೆ 96 ಟ್ಯಾಂಕರ್‌ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರು ಒದಗಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಮಾ.11): ರಾಜ್ಯದ 21 ಜಿಲ್ಲೆಗಳ 144 ತಾಲ್ಲೂಕುಗಳಲ್ಲಿನ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಈ ಪೈಕಿ 31 ಗ್ರಾಮಗಳಿಗೆ 96 ಟ್ಯಾಂಕರ್‌ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರು ಒದಗಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವ ಎದುರಿಸಲು ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯುವ ಜೊತೆಗೆ ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ರಾಜ್ಯದ ಎಲ್ಲ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ನೀರು ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಮೂಲಗಳನ್ನು ಹೆಚ್ಚಿಸಲಾಗುವುದು, ಅನಿವಾರ್ಯ ಸಂದರ್ಭಗಳಲ್ಲಿ ಕೊಳವೆಬಾವಿಗಳನ್ನು ಕೊರೆಯುವುದು ಅತ್ಯಗತ್ಯವೆಂದು ಕಂಡು ಬಂದಲ್ಲಿ, ಸಂಬಂಧಪಟ್ಟ ಭೂವಿಜ್ಞಾನಿಗಳ ವರದಿಯನುಸಾರ ಸೂಕ್ತ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂಕ್ತ ಕ್ರಮ

ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಗ್ರಾಪಂ ಹಾಗೂ ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಹಂತವಾಗಿ ಎಲ್ಲಾ ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು, ಪ್ರತಿ ಗ್ರಾಮದಲ್ಲಿ ಕನಿಷ್ಠ ಮೂರು ನಳ ನೀರು ಸಂಪರ್ಕಗಳ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೂಡಲೇ ಕೈಗೊಂಡು ಮಾಹಿತಿ ದಾಖಲಿಸಲು ಸೂಚಿಸಲಾಗಿದೆ. ಎಲ್ಲಾ ಕುಡಿಯುವ ನೀರಿನ ಮೇಲ್ಮಟ್ಟದ ಜಲಸಂಗ್ರಹಾರಗಳನ್ನು ಮಾರ್ಗಸೂಚಿಗಳ ಅನ್ವಯ ಶುಚಿಗೊಳಿಸಲು ಸೂಕ್ತ ಕ್ರಮವಹಿಸುವಂತೆಯೂ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.