ಎಚ್‌ಡಿಕೆಯದ್ದು ಬ್ರಿಟಿಷರ ರೀತಿ ಒಡೆದಾಳುವ ನೀತಿ: ಸಚಿವ ಅಶೋಕ್
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹುಚ್ಚುಚ್ಚು ಹೇಳಿಕೆ ನೀಡುವುದು ಸರಿಯಲ್ಲ. ಜೆಡಿಎಸ್ ಕುಟುಂಬ ಆಧಾರಿತ ಪಕ್ಷವಾಗಿದ್ದು, ಪ್ರತಿಭಾನ್ವಿತರಿಗೆ ಅವಕಾಶ ನೀಡಬೇಕು ಎಂಬುದು ಅಲ್ಲಿ ಅನ್ವಯವಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರು (ಫೆ.09): ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹುಚ್ಚುಚ್ಚು ಹೇಳಿಕೆ ನೀಡುವುದು ಸರಿಯಲ್ಲ. ಜೆಡಿಎಸ್ ಕುಟುಂಬ ಆಧಾರಿತ ಪಕ್ಷವಾಗಿದ್ದು, ಪ್ರತಿಭಾನ್ವಿತರಿಗೆ ಅವಕಾಶ ನೀಡಬೇಕು ಎಂಬುದು ಅಲ್ಲಿ ಅನ್ವಯವಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದರೆ ಜೆಡಿಎಸ್ ಕುಟುಂಬ ಆಧಾರಿತ ಪಕ್ಷ. ನಮ್ಮಲ್ಲಿ ಮುಖ್ಯಮಂತ್ರಿ, ಪ್ರಧಾನಿ, ಸಚಿವರು ಆಗಬೇಕಾದರೆ ಪ್ರತಿಭೆಯನ್ನು ಗಮನಿಸಲಾಗುತ್ತದೆ.
ಆದರೆ, ಜೆಡಿಎಸ್‌ನಲ್ಲಿ ಅದಕ್ಕೆ ಅವಕಾಶ ಇಲ್ಲ. ಕುಟುಂಬದಲ್ಲಿಯೇ ಯಾರಿಗೆ ಯಾವ ಸ್ಥಾನ ಎಂಬುದನ್ನು ತೀರ್ಮಾನಿಸಲಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಮಾಧ್ಯಮಗಳ ಸಮೀಕ್ಷೆಗಳು ಜೆಡಿಎಸ್ 20 ಸ್ಥಾನಕ್ಕೆ ಸೀಮಿತ ಎನ್ನುತ್ತಿವೆ. ಆದರೆ, ಅವರು ಮಾತ್ರ 130 ಗುರಿ ಎನ್ನುತ್ತಾರೆ. ಅದು ಯಾವ ಪರಮಾತ್ಮನ ಸಮೀಕ್ಷೆಯೋ ಗೊತ್ತಿಲ್ಲ. ಮುಂದಿನ ಚುನಾವಣೆ ಬಳಿಕ ಸರ್ಕಾರ ರಚನೆ ವೇಳೆ ರಾಜಕೀಯ ಆಟವಾಡಬಹುದು ಎಂಬ ಭ್ರಮೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ಮಾತಿನಲ್ಲಿ ಹಿಡಿತ ತಪ್ಪಿ ಹುಚ್ಚುಚ್ಚು ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಕೆ.ಆರ್.ಪೇಟೆಯಲ್ಲಿ ರೇವಣ್ಣ ಸ್ಪರ್ಧೆ ಮಾಡಲ್ಲ: ಶಾಸಕ ಸಿ.ಎಸ್.ಪುಟ್ಟರಾಜು
ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಬೇಕಾದರೂ ಅವರ ಮನೆಯವರೇ ಆಗಬೇಕು. ಅವರದ್ದು ಕುಟುಂಬ ರಾಜಕೀಯ. ಡಿಎಂಕೆ, ಲಾಲುಪ್ರಸಾದ್ ಯಾದವ್ ಸೇರಿದಂತೆ ಕೆಲ ರಾಜ್ಯಗಳಲ್ಲಿನ ರಾಜಕೀಯ ಪಕ್ಷಗಳದ್ದು ಸಹ ಇದೇ ರೀತಿಯಾದ ಕುಟುಂಬಪ್ರೇಮ. ಬ್ರಿಟಿಷರು ಒಡೆದು ಆಳುವ ನೀತಿ ಅನುಸರಿಸಿದರು. ಅದೇ ರೀತಿಯಲ್ಲಿಯೇ ಕುಮಾರಸ್ವಾಮಿ ವರ್ತಿಸುತ್ತಿದ್ದಾರೆ. ಬ್ರಾಹ್ಮಣರ ಮೇಲೆ ಬೇರೆ ಜಾತಿ ಎತ್ತಿಕಟ್ಟಿ ಒಡಕು ಮೂಡಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಯಾದವರು ತಮ್ಮ ವರ್ಚಸ್ಸಿಗೆ ತಕ್ಕಂತೆ ನಡೆದುಕೊಳ್ಳಬೇಕು. ಅವರ ವರ್ಚಿಸ್ಸಿಕ್ಕಿಂತ ತಳಮಟ್ಟಕ್ಕೆ ಇಳಿಯುತ್ತಿದ್ದಾರೆ. ಎಸ್.ಎಂ.ಕೃಷ್ಣ ಸೇರಿದಂತೆ ಇತರೆ ಮಾಜಿ ಮುಖ್ಯಮಂತ್ರಿಗಳ ನಡವಳಿಕೆ ನೋಡಿ ಕಲಿಯಬೇಕು ಎಂದು ಕಿಡಿಕಾರಿದರು.
ಪೌತಿಖಾತೆ ಆಂದೋಲನದಡಿ 60 ಲಕ್ಷ ಕುಟುಂಬಕ್ಕೆ ದಾಖಲೆ ವಿತರಣೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಭಾಗವಾಗಿ ಕಡೂರು ತಾಲೂಕಿನ ಹುಲಿಕೆರೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಕಂದಾಯ ಸಚಿವ ಆರ್.ಅಶೋಕ್ ಅವರು ಭಾನುವಾರ ವಿಶೇಷ ಪೌತಿ ಖಾತೆ ಅಂದೋಲನ ಹಾಗೂ ವಿಶೇಷ ಗ್ರಾಮ ಸಭೆಯಲ್ಲಿ ಪಾಲ್ಗೊಂಡರು. ಇದಕ್ಕೂ ಮೊದಲು ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡಿದ ಅವರು, ಆ ಮನೆಯ ಮಗುವಿನ ವಿದ್ಯಾಭ್ಯಾಸಕ್ಕೆ .2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು.
ಪಿಎಫ್ಐ ಸಂಘಟನೆಯಿಂದ ಜೀವ ಬೆದರಿಕೆ: ಮೇಲುಕೋಟೆ ಯತಿರಾಜ ಜೀಯರ್‌ಗೆ ವೈ ಮಾದರಿ ಭದ್ರತೆ
ನಂತರ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ಪೌತಿ ಖಾತೆ ಆಂದೋಲನ ಕಾರ್ಯಕ್ರಮದಡಿ ಏಳೆಂಟು ತಿಂಗಳಿಂದ ಮನೆ ಬಾಗಿಲಿಗೆ ಕಂದಾಯ ದಾಖಲೆ ನೀಡುತ್ತಿದ್ದೇವೆ. ಜಾತಿ, ಆದಾಯ ಪ್ರಮಾಣಪತ್ರ ಹಾಗೂ ಸರ್ವೆ ಸ್ಕೆಚ್ ಅನ್ನು ರಾಜ್ಯದ ಸುಮಾರು 60 ಲಕ್ಷ ಕುಟುಂಬಗಳಿಗೆ ಈಗಾಗಲೇ ನೀಡಲಾಗಿದೆ ಎಂದರು. 5 ಎಕರೆಗಿಂತ ಕಡಿಮೆ ಜಮೀನು ಇದ್ದರೆ ಅಂಥ ರೈತರಿಗೆ ಕೇಂದ್ರ ಸರ್ಕಾರ ಪ್ರತಿ ವರ್ಷ 6 ಸಾವಿರ ಹಾಗೂ ರಾಜ್ಯ ಸರ್ಕಾರ 4 ಸಾವಿರ ರುಪಾಯಿ ಕೊಡುತ್ತಿದೆ. ಪೌತಿ ಖಾತೆ ಮಾಡಿಸಿಕೊಳ್ಳದೆ ಇರುವ ರೈತ ಕುಟುಂಬಗಳು ಈ ನೆರವಿನಿಂದ ವಂಚಿತರಾಗುತ್ತಿವೆ. ಇದನ್ನು ಮನಗಂಡು ರಾಜ್ಯದಲ್ಲಿ ಪೌತಿ ಖಾತೆ ಆಂದೋಲನ ನಡೆಸಲಾಗುತ್ತಿದೆ ಎಂದರು.