ಚಿತ್ರದುರ್ಗ, (ಜ.11): ಇದೇ ಜನವರಿ 13ರಂದು ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಮಾಡಿಲಾಗಿದೆ. ಆದ್ರೆ, ಯಾರಿಗೆ ಸಚಿವ ಸ್ಥಾನ ನೀಡಬೇಕೆನ್ನುವ ಚರ್ಚೆಗಳು ಸಹ ನಡೆದಿವೆ.

ಬಿಜೆಪಿ ಸರ್ಕಾರ ಬರಲು ಕಾರಣರಾದವರಿಗೆ ಸಚಿವ ಸ್ಥಾನ ಫಿಕ್ಸ್ ಎನ್ನಲಾಗಿದೆ. ಅವರನ್ನ ಬಿಟ್ಟು ಇನ್ನುಳಿದವರಿಗೆ ಯಾರಿಗೆ ಕೊಡಬೇಕೆನ್ನುವ ಲೆಕ್ಕಾಚಾರಗಳು ಶುರುವಾಗಿದೆ. 

ಕೇವಲ ಸಚಿವ ಸಂಪುಟ ವಿಸ್ತರಣೆ ಮಾತ್ರವಲ್ಲ, ಪ್ರಮುಖ ಖಾತೆ ಬದಲಾವಣೆ ಖಚಿತ...!

ಇನ್ನು ಈ ಬಗ್ಗೆ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು,  ಸಂಪುಟ ವಿಸ್ತರಣೆ ವೇಳೆ ಸರ್ಕಾರ ರಚನೆಗೆ ಸಹಕಾರ ನೀಡಿದವರಿಗೆ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಂಪುಟಕ್ಕೆ ಸೇರುವವರ ಹೆಸರುಗಳು ಸದ್ಯದಲ್ಲೇ ಹೊರಬೀಳಲಿದ್ದು, ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಪಕ್ಷದ ಹಿರಿಯ ಶಾಸಕರಿಗೂ ಆದ್ಯತೆ ನೀಡಲಾಗುತ್ತದೆ ಎಂದರು.

ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಸಿಎಂ ಹುದ್ದೆಯಲ್ಲಿ ಅವರೇ ಮುಂದುವರಿಯುವಂತೆ ಶಾಸಕರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್‌ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದರು.