ತುಮಕೂರು, (ಅ.29):  ಹೈವೋಲ್ಟೇಜ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಸೋಲೊಪ್ಪಿಕೊಂಡು ಯುದ್ಧಕ್ಕೆ ಮುಂಚೆಯೇ ಶಸ್ತ್ರ ತ್ಯಾಗ ಮಾಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಡಿಕೆಶಿಗೆ ಸೋಲಿನ ರುಚಿ ತೋರಿಸುತ್ತೇವೆ ಎಂದರು.

 ಟ್ರಬಲ್ ಶೂಟರ್ ಎಂದು ಅಧಿಕಾರ ಇದ್ದಾಗ ಆಟ ಆಡಿದ್ದವರಿಗೆ ಸೋಲಿಗೆ ರುಚಿ ತೋರಿಸುತ್ತೇವೆ. ಕಾಂಗ್ರೆಸ್ ನಂಬಿಕೆ, ವಿಶ್ವಾಸವನ್ನು ಕಳೆದುಕೊಂಡಿದೆ. ವಿಷಯಾಧಾರಿತ ಚುನಾವಣೆ ಮಾಡುವ ಬದಲು ಪೋಸ್ಟ್ ಮಾರ್ಟಂ ಹೇಳಿಕೆ ನೀಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಬೈ ಎಲೆಕ್ಷನ್: ಕೈ ಹಿಡಿಯಲು, ಕಮಲ ಅರಳಿಸಲು, ದಳಪತಿಗಳು ದಾಳ ಉರುಳಿಸಲು ಹೈವೋಲ್ಟೇಜ್ ಪ್ರಚಾರ!

ಸಿದ್ದರಾಮಯ್ಯ, ಡಿಕೆಶಿ ನಡುವೆ ಹೊಂದಾಣಿಕೆ ಇದ್ದಿದ್ದರೆ ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಇಲ್ಲದ ಕುರ್ಚಿಗೆ ಟವೆಲ್ ಹಾಕುವುದರಲ್ಲಿ ಫೇಮಸ್ ಆಗಿರುವ ಡಿಕೆಶಿ ಸುಮ್ಮನೆ ಆರೋಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನೂ15 ವರ್ಷ ದೇಶದಲ್ಲಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುತ್ತದೆ. ಕಾಂಗ್ರೆಸ್ ಸುಮ್ಮನೆ ಪ್ರತಿಭಟನೆ ಮಾಡುತ್ತಿದೆ. ಡಿಜೆ ಹಳ್ಳಿ ಪ್ರಕರಣದಲ್ಲಿ ಜನರು ಭಯಭೀತರಾದಾಗ ಕಾಂಗ್ರೆಸ್ ಎಲ್ಲಿ ಹೋಗಿತ್ತು, ದಲಿತ ಶಾಸಕನ ಮನೆ ಸುಟ್ಟಾಗ ಕಾಂಗ್ರೆಸ್ ಎಲ್ಲಿ ಪ್ರತಿಭಟಿಸಿತ್ತು. ಈಗ ಚುನಾವಣೆಗಾಗಿ ಪ್ರತಿಭಟನೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.