ಎಸ್‌ಡಿಪಿಐಯಂತಹ ಭಯೋತ್ಪಾದಕ ಸಂಘಟನೆಗಳು ಬ್ಯಾನ್ ಆಗಲೇಬೇಕು: ಸಚಿವ ಅಶೋಕ್
ಸಿದ್ದರಾಮಯ್ಯ ವಿಶ್ರಾಂತಿಯಲ್ಲಿ ಇದ್ದಾರೆ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸದಲ್ಲಿ ಇದ್ದಾರೆ| ಇಂತಹ ಘಟನೆ ನಡೆದಾಗಲೂ ಕಾಂಗ್ರೆಸ್ ನಾಯಕರು ಯಾಕೆ ಸೈಲೆಂಟಾಗಿದ್ದಾರೋ ಗೊತ್ತಿಲ್ಲ| ಆದರೆ ನನ್ನ ಅಭಿಪ್ರಾಯದ ಪ್ರಕಾರ ಎಸ್‌ಡಿಪಿಐ ಸಂಘಟನೆ ಬ್ಯಾನ್ ಆಗಲೇಬೇಕು|
ಬೆಂಗಳೂರು(ಆ.20): ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪುಲಕೇಶಿ ನಗರದ ಘಟನೆ ಬಗ್ಗೆ ಮಾತಾಡಬೇಡ ಅಂತ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ನಾನು ಈ ಘಟನೆ ಬಗ್ಗೆ ಮಾತಾಡಲೋ ಬೇಡವೋ ಎಂಬ ಗೊಂದಲದಲ್ಲಿ ಇದ್ದೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಟ್ವೀಟ್ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ವ್ಯಂಗ್ಯ ಮಾಡಿದ್ದಾರೆ.
"
ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿಶ್ರಾಂತಿಯಲ್ಲಿ ಇದ್ದಾರೆ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿ ಪ್ರವಾಸದಲ್ಲಿ ಇದ್ದಾರೆ. ಇಂತಹ ಘಟನೆ ನಡೆದಾಗಲೂ ಕಾಂಗ್ರೆಸ್ ನಾಯಕರು ಯಾಕೆ ಸೈಲೆಂಟಾಗಿದ್ದಾರೋ ಗೊತ್ತಿಲ್ಲ. ಆದರೆ ನನ್ನ ಅಭಿಪ್ರಾಯದ ಪ್ರಕಾರ ಎಸ್‌ಡಿಪಿಐ ಸಂಘಟನೆ ಬ್ಯಾನ್ ಆಗಲೇಬೇಕು. ಈ ಕುರಿತು ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದೇನಿದ್ರು ಏಕ್ ಮಾರ್ ದೋ ತುಕ್ಡ ಕ್ರಮ: ಸಿ.ಟಿ.ರವಿ
ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳನ್ನು ಕಲೆ ಹಾಕುವ ಕೆಲಸ ಮಾಡುತ್ತಿದ್ದೇವೆ. ಸೂಕ್ತ ದಾಖಲೆಗಳು ಸಿಕ್ಕ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಇಂತ ಭಯೋತ್ಪಾದಕ ಸಂಘಟನೆಗಳು ಬ್ಯಾನ್ ಆಗಲೇಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.