ಬೊಮ್ಮಾಯಿಯದು ದೇಶ ಕಂಡ ಅತಿಭ್ರಷ್ಟ ಸರ್ಕಾರ: ಸಚಿವ ರಾಮಲಿಂಗಾರೆಡ್ಡಿ
ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನನ್ನ ರಾಜಕೀಯ ಜೀವನದಲ್ಲಿ ಎಂದೂ ನೋಡಿರದಷ್ಟು ಭ್ರಷ್ಟ ಸರ್ಕಾರ ಆಗಿತ್ತು ಎಂದು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಕಲಬುರಗಿ (ಫೆ.10): ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನನ್ನ ರಾಜಕೀಯ ಜೀವನದಲ್ಲಿ ಎಂದೂ ನೋಡಿರದಷ್ಟು ಭ್ರಷ್ಟ ಸರ್ಕಾರ ಆಗಿತ್ತು ಎಂದು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು. ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಸೇರಿ ಕೇವಲ 3 ವರ್ಷದಲ್ಲಿ ಮೂರು ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಆದರೆ, ನಾವು ರಾಜ್ಯದ ಜನರಿಗೆ ಅನುಕೂಲ ಆಗಲು ಐದು ಗ್ಯಾರಂಟಿಗಳನ್ನು ನೀಡಿದ್ದೇವೆ.
60 ವರ್ಷದಲ್ಲಿ ದೇಶದ ಸಾಲ ಕೇವಲ 54 ಕೋಟಿ ರೂ. ಇತ್ತು. ಪ್ರಧಾನಿ ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ 180 ಲಕ್ಷ ಕೋಟಿ ಸಾಲ ಮಾಡಿದೆ. ಆ ಮೂಲಕ ಮೋದಿಯವರು ದೇಶದ ಜನರಿಗೆ ಸಾಲದ ಗ್ಯಾರಂಟಿ ನೀಡಿದ್ದಾರೆ ಎಂದು ಟೀಕಿಸಿದರು. ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕು ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ಕಂಟ್ರಾಕ್ಟರ್ ಸಾವಿಗೆ ಕಾರಣರಾದರಲ್ಲ ಅವರಿಗೆ ಏನು ಮಾಡಬೇಕು ಎಂಬುದನ್ನು ಈಶ್ವರಪ್ಪ ಹೇಳಲಿ ನೋಡೋಣ ಎಂದು ಟಾಂಗ್ ನೀಡಿದರು.
ಶೋಷಿತರ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಮಜಾ: ಎಚ್.ಡಿ.ಕುಮಾರಸ್ವಾಮಿ
ಮಾರ್ಚ್ ಅಂತ್ಯಕ್ಕೆ 5 ಸಾವಿರ ಬಸ್ ಸಾರ್ವಜನಿಕ ಸೇವೆಗೆ: ಮಾರ್ಚ್ ಅಂತ್ಯಕ್ಕೆ 5800 ಬಸ್‌ಗಳ ಖರೀದಿ ಮಾಡುವ ಗುರಿ ಹೊಂದಲಾಗಿದ್ದು, ಕನಿಷ್ಠ 5 ಸಾವಿರ ಬಸ್ ಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಅವರು ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ನೂತನ 50 ಬಸ್‌ಗಳ ಲೋಕಾರ್ಪಣೆ, ಅಪಘಾತ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಣೆ, ನಗದು ರಹಿತ ಟಿಕೆಟ್ ಸೇವೆಗೆ ಚಾಲನೆ ನೀಡಿ ಮಾತನಾಡಿದರು. ಸದ್ಯದಲ್ಲಿಯೇ 325 ನೂತನ ಬಸ್ ಖರೀದಿಗೆ ಟೆಂಡರ್ ಜರುಗಿಸಿ ಬಸ್ ಖರೀದಿಸಾಗುವುದು ಎಂದರು.
ಈ ಮೂಲಕ ರಾಜ್ಯದ ಜನತೆಗೆ ಗುಣಮಟ್ಟದ ಸೇವೆ ಒದಗಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ. ಶಕ್ತಿ ಯೋಜನೆ ಜಾರಿಯಿಂದಾಗಿ ರಾಜ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಸಮಸ್ಯೆಯಾಗಿತ್ತು. ಅದನ್ನು ನೀಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಅಗತ್ಯ ನೆರವು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಳೆದ 7 ವರ್ಷಗಳಿಂದ ನೇಮಕಾತಿ ನಡೆದಿಲ್ಲ. ನಾನು ಸಚಿವನಾದ ನಂತರ 9 ಸಾವಿರ ಹುದ್ದೆ ನೇಮಕಾತಿಗೆ ಅನುಮತಿ ನೀಡಿದ್ದು, ನೇಮಕಾತಿ ವಿಷಯದಲ್ಲಿ ಆಯಾ ವಿಭಾಗೀಯ ಸಂಸ್ಥೆಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.
ಗದಗ ನಗರದಲ್ಲಿ 100 ಎಕರೆಗೂ ಅಧಿಕ ಜಮೀನು ನೀಡಿದರೆ ಪ್ರಸಕ್ತ ಸಾಲಿನಲ್ಲಿಯೇ ಟ್ರಕ್ ಟರ್ಮಿನಲ್ ಮಂಜೂರು ಮಾಡಲಾಗುವುದು. ಮುಂಬರುವ ಬಜೆಟ್‌ನಲ್ಲಿ ಈ ವಿಷಯ ಅಳವಡಿಸಲಾಗುವುದು. ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದ ವೇಳೆಯಲ್ಲಿಯೇ ಪ್ರತಿ ಜಿಲ್ಲೆಯಲ್ಲಿಯೂ ಡ್ರೈವಿಂಗ್ ಲೈಸೆನ್ಸ್ ನೀಡುವ ಕ್ಯಾಂಪ್ ಮಾಡಲಾಗುತ್ತಿತ್ತು. ಈಗ ಮತ್ತೆ ಅದನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಲೂಟಿಕೋರರನ್ನ ಲೋಕಸಭೆಗೆ ಕಳಿಸಿದರೆ ಇನ್ನೇನಾಗುತ್ತೆ?: ಡಿಕೆಸು ವಿರುದ್ಧ ಎಚ್‌ಡಿಕೆ ವಾಗ್ದಾಳಿ
ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನಗದು ರಹಿತ ಟಿಕೆಟ್ ಸೇವೆಗೆ ಚಾಲನೆ ನೀಡಿ ಮಾತನಾಡಿ, ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಪುಸ್ತಕ ವ್ಯವಸ್ಥೆ, ರೈಲ್ವೆ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಸೇರಿದಂತೆ ಅಗತ್ಯ ವಸ್ತುಗಳು ಇಲ್ಲೆ ಸಿಗುವಂತಾಗಬೇಕು. ವಿಮಾನ ನಿಲ್ದಾಣದಲ್ಲಿ ಸಿಗುವ ಎಲ್ಲ ವ್ಯವಸ್ಥೆಗಳು ಸಿಗುವಂತಾ ಮಾದರಿ ಬಸ್ ನಿಲ್ದಾಣವನ್ನಾಗಿ ಸಾರಿಗೆ ಇಲಾಖೆ ಅಭಿವೃದ್ಧಿ ಪಡಿಸಬೇಕು.