Asianet Suvarna News Asianet Suvarna News

ಬಿಜೆಪಿ ಸರ್ಕಾರಗಳಿಂದ ರಾಜ್ಯ ಸಾಲದ ಸುಳಿಗೆ: ಸಚಿವ ರಾಮಲಿಂಗಾರೆಡ್ಡಿ

ಕೇಂದ್ರ ಹಾಗೂ ರಾಜ್ಯವನ್ನು ಆಳಿದ ಬಿಜೆಪಿ ಸರ್ಕಾರ ಲಕ್ಷಾಂತರ ಕೋಟಿ ರು. ಸಾಲ ಮಾಡುವ ಮೂಲಕ ದೇಶ ಹಾಗೂ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು. 

Minister Ramalinga Reddy Slams On BJP At Hassan gvd
Author
First Published Nov 4, 2023, 6:23 AM IST

ಅರಸೀಕೆರೆ (ನ.04): ಕೇಂದ್ರ ಹಾಗೂ ರಾಜ್ಯವನ್ನು ಆಳಿದ ಬಿಜೆಪಿ ಸರ್ಕಾರ ಲಕ್ಷಾಂತರ ಕೋಟಿ ರು. ಸಾಲ ಮಾಡುವ ಮೂಲಕ ದೇಶ ಹಾಗೂ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು. ತಾಲೂಕಿನ ಕಣಕಟ್ಟೆ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, 1947ರಿಂದ 2014ರ ವರೆಗೆ ಆಳಿದ ಸರ್ಕಾರಗಳು 52 ಲಕ್ಷ ಕೋಟಿ ಸಾಲ ಮಾಡಿದ್ದರೆ ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರ ಒಂಬತ್ತು ವರ್ಷಗಳಲ್ಲಿ 160 ಲಕ್ಷ ರು. ಸಾಲ ಮಾಡಿದೆ. 

ಅದೇ ರೀತಿ ರಾಜ್ಯವನ್ನಾಳಿದ ಸರ್ಕಾರಗಳು 2018ರ ವರೆಗೆ ಎರಡುವರೆ ಲಕ್ಷ ಕೋಟಿ ರು. ಸಾಲ ಮಾಡಿದ್ದರೆ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರ್ಕಾರಗಳು ಕೇವಲ ನಾಲ್ಕು ವರ್ಷಗಳಲ್ಲಿ ಮೂರು ಲಕ್ಷ ಕೋಟಿ ರು. ಸಾಲ ಮಾಡುವ ಮೂಲಕ ಸಾಲದ ಪ್ರಪಾತಕ್ಕೆ ಮತದಾರರನ್ನು ನೂಕಿದೆ ಎಂದು ಜರಿದರು 1947ರಲ್ಲಿ ಸ್ವಾತಂತ್ರ್ಯ ಪಡೆದ ಭಾರತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ದೇಶದ ಅಭಿವೃದ್ಧಿಗಾಗಿ ರೈಲ್ವೆ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದು ರೈಲ್ವೆ ಸೇರಿದಂತೆ ದೊಡ್ಡ ದೊಡ್ಡ ಯೋಜನೆಗಳನ್ನು ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ಜನರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಿದೆ. 

ಇನ್ನು 3-4 ದಿನದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿ ಪಟ್ಟಿ: ಡಿಕೆಶಿ

ಆದರೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 160 ಲಕ್ಷ ಕೋಟಿ ಸಾಲ ಮಾಡುವ ಮೂಲಕ ಹುಟ್ಟುವ ಮಗುವಿನ ತಲೆಯ ಮೇಲೆ ಸಾಲವನ್ನು ಹೊರಿಸಿದೆ ಎಂದು ಎಂದು ಕಿಡಿಕಾರಿದರು ಶಿವಲಿಂಗೇಗೌಡ ಮಾತನಾಡಿ, ಅರಸೀಕೆರೆ ಬಸ್ ನಿಲ್ದಾಣದ ಸಮೀಪವೇ ರೈಲ್ವೆ ಜಂಕ್ಷನ್ ಇದ್ದು ರಾಜ್ಯದಲ್ಲಿ ಎಲ್ಲೂ ಇಲ್ಲದ ಅನುಕೂಲತೆಗಳು ಅರಸೀಕೆರೆ ಕೇಂದ್ರದಲ್ಲಿದ್ದು ಇದು ವಾಣಿಜ್ಯ ಕೇಂದ್ರವಾಗಿದೆ ಅರಸೀಕೆರೆ ಇತಿಹಾಸದಲ್ಲಿ ನಿಮ್ಮ ಹೆಸರು ಉಳಿಯುವಂತ ಕಾರ್ಯವಾಗಬೇಕಾಗಿದೆ ಸಚಿವರು ನೂತನ ಬಸ್ ನಿಲ್ದಾಣಕ್ಕೆ ಅನುಮೋದನೆ ನೀಡಬೇಕೆಂದು ಮನವಿ ಮಾಡಿದರು

ಶಕ್ತಿ ಯೋಜನೆ ಜಾರಿಗೆ ಬಂದಾಗ ಈ ಯೋಜನೆ ನಡೆಯಲು ಸಾಧ್ಯವೇ ಇಲ್ಲ ಎಂದು ವಿರೋಧಿ ಪಕ್ಷದವರು ಅಪಪ್ರಚಾರ ಮಾಡಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿ ಮಹಿಳೆಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು ಇದು ಭಾರತದಲ್ಲಿ ಪ್ರಥಮ. 10 ಕೆಜಿ ಅಕ್ಕಿ ಕೊಟ್ಟರೆ ಸಿದ್ದರಾಮಯ್ಯನವರ ಸರ್ಕಾರಕ್ಕೆ ಹೆಸರು ಬರುತ್ತದೆ ಎಂದು ಅಕ್ಕಿ ದಾಸ್ತಾನಿದ್ದರೂ ಕೇಂದ್ರ ಸರ್ಕಾರ ಅಕ್ಕಿನೀಡದೆ ಸತಾಯಿಸಿದ್ದು ಈಗ ಅದನ್ನು ಸಿಂಗಪೂರಕ್ಕೆ ಮಾರಲು ಹೊರಟಿದೆ ಎಂದು ಆರೋಪಿಸಿದರು.

ಬರದಿಂದ ರಾಜ್ಯದ ಜನರು ತತ್ತರಿಸಿದ್ದು ಇದುವರೆಗೆ ಕೇಂದ್ರ ಸರ್ಕಾರ ಒಂದು ರುಪಾಯಿಯನ್ನು ನೀಡಿಲ್ಲ, ರಾಜ್ಯದಿಂದ ಸಾವಿರಾರು ಕೋಟಿ ರೂಗಳ ತೆರಿಗೆಯನ್ನು ಪಡೆಯುವ ಕೇಂದ್ರ ಸರ್ಕಾರ ಇಂತಹ ಪರಿಸ್ಥಿತಿಯಲ್ಲಿ ನೆರವಿಗೆ ಬಾರದಿದ್ದರೆ ಕೇಂದ್ರ ಸರ್ಕಾರದ ವಿರುದ್ಧ ದೊಡ್ಡ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು

ರಾಮನಗರ ಜಿಲ್ಲೆ ಮರುನಾಮಕರಣ ನನಗೆ ಗೊತ್ತಿಲ್ಲ: ಸಚಿವ ರಾಮಲಿಂಗಾರೆಡ್ಡಿ

ತಹಸೀಲ್ದಾರ್ ಸಂತೋಷ್ ಕುಮಾರ್ ಕಣಕಟ್ಟೆ ಗ್ರಾಪಂ ಅಧ್ಯಕ್ಷ ಮೀನಾಕ್ಷಮ್ಮ, ಉಪಾಧ್ಯಕ್ಷ ಹೇ. ಸತೀಶ್, ಕರಾರಸಾನಿಗಮದ ಮುಖ್ಯ ಅಭಿಯಂತರರಾದ ಶಿವಕುಮಾರ್, ಕಾರ್ಯನಿರ್ವಾಹಕ ಅಭಿಯಂತರರಾದ ಎಚ್.ಕೆ.ಹವಾಲ್ದಾರ್, ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್.ಬಸವರಾಜು, ಹಾಸನ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕಕುಮಾರ್, ವಿಭಾಗೀಯ ಸಂಚಾರ ಅಧಿಕಾರಿ ಎಚ್.ಕೆ.ಚನ್ನಬಸಪ್ಪ, ಇಂಜಿನಿಯರ್ ಶ್ರೀಧರಸ್ವಾಮಿ, ಅರವಿಂದ, ಜಾವಗಲ್ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

Follow Us:
Download App:
  • android
  • ios