ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಕಾಣಿಸಿಕೊಂಡಿರುವುದು ರಾಜ್ಯ ರಾಜಕೀಯದಲ್ಲಿ ಹಲವು ರೀತಿಯ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. 

ಬೆಳಗಾವಿ : ಕಾಂಗ್ರೆಸ್ ನಾಯಕರೊಂದಿಗೆ ಹಲವು ಬಾರಿ ಮನಸ್ತಾಪ ವ್ಯಕ್ತಪಡಿಸಿದ್ದ ಸಚಿವ ರಮೇಶ್ ಜಾರಕಿಹೊಳೀಸಿ ಇದೀಗ ಬೆಳಗಾವಿಯಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಯಡಿಯೂರಪ್ಪ ಅವರ ಆಪ್ತ ಸಹಾಯಕ ಕೇಶವ್ ಅವರ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನವೆಂಬರ್ 1 ರಂದು ನಡೆದ ವಿವಾಹದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಹ್ಯಾಂಡ್ ಶೇಕ್ ಮಾಡಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. 

ಜಿಲ್ಲೆಯಲ್ಲಿ ಕಬ್ಬು ಬೆಳಗಾರರ ಸಮಸ್ಯೆ ಇದ್ದರೂ ಕೂಡ ಸಮಸ್ಯೆ ಆಲಿಸಬೇಕಿದ್ದ ಸಚಿವರು ಅತ್ತ ಸುಳಿದಿರಲಿಲ್ಲ. ಆದರೆ ಇದೀಗ ವಿವಾಹದಲ್ಲಿ ಕಾಣಿಸಿಕೊಂಡಿದ್ದರು. 

ಇದರಿಂದ ಸಮಸ್ಯೆ ಆಲಿಸಬೇಕಾದ ಸಮಯದಲ್ಲಿ ಜಿಲ್ಲೆಗೆ ಆಗಮಿಸದ ಸಚಿವರ ವಿರುದ್ಧ ಇದೀಗ ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.