ಬಿಜೆಪಿಯ ಪಿತೂರಿ ಎದುರಿಸುವ ಸಾಮರ್ಥ್ಯ ಕಾಂಗ್ರೆಸ್ ಸರ್ಕಾರಕ್ಕಿದೆ: ಸಚಿವ ತಿಮ್ಮಾಪೂರ
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಮತ್ತು ರಾಜಕೀಯ ಪ್ರೇರಿತ ಕ್ರಮಗಳಿಂದಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪ್ರಮೇಯವನ್ನು ರಾಜ್ಯ ಸರ್ಕಾರ ನಿರಾಕರಿಸುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸಚಿವ ಆರ್.ಬಿ. ತಿಮ್ಮಾಪೂರ
ವರದಿ: ಮಲ್ಲಿಕಾರ್ಜುನ ಹೊಸಮನಿ, ಏಷಿಯಾನೆಟ್ ಸುವರ್ಣ ನ್ಯೂಸ್, ಬಾಗಲಕೋಟೆ
ಬಾಗಲಕೋಟೆ(ಆ.18): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಬಕಾರಿ ಸಚಿವ ತಿಮ್ಮಾಪೂರ ಆರೋಪಿಸಿದ್ದಾರೆ.
ಇಂದು(ಭಾನುವಾರ) ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಮತ್ತು ರಾಜಕೀಯ ಪ್ರೇರಿತ ಕ್ರಮಗಳಿಂದಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪ್ರಮೇಯವನ್ನು ರಾಜ್ಯ ಸರ್ಕಾರ ನಿರಾಕರಿಸುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಅರ್ಕಾವತಿ ಪ್ರಕರಣದಲ್ಲಿ ಪಾರಾಗಿದ್ದ ಸಿದ್ದರಾಮಯ್ಯ, ಈ ಬಾರಿ ಲಾಕ್: ಜಗದೀಶ ಶೆಟ್ಟರ್
ಬಿಜೆಪಿಯ ರಾಜಕೀಯ ಪಿತೂರಿ ವಿರುದ್ಧ ಕಾನೂನಾತ್ಮಕ ಹೋರಾಟ..
ಇನ್ನು ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಇಂತಹ ಬಿಜೆಪಿಯ ಪಿತೂರಿಗಳನ್ನು ಎದುರಿಸುವ ಸಾಮರ್ಥ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದೆ ಎಂದ ಅವರು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ರಾಜ್ಯದ ಜನರು ಹಾಗೂ ನಾವುಗಳು ಅವರನ್ನು ಬಿಡುವುದಿಲ್ಲ ಎಂದು ತಿಳಿಸಿದರು.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ, ಜೋಶಿ
ಇನ್ನು ಈಗಾಗಲೇ ನಿವೃತ್ತ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿ ಹೊರಬೀಳುವ ಮುನ್ನವೇ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಚಿವ ತಿಮ್ಮಾಪೂರ ಆರೋಪಿಸಿದರು.
ಬಿಜೆಪಿಯೇತರ ರಾಜ್ಯ ಸರ್ಕಾರಗಳೇ ಕೇಂದ್ರದ ಗುರಿ: ಸಚಿವ ಗರಂ
ಇತರ ರಾಜ್ಯಗಳಲ್ಲಿ ಇದೇ ರೀತಿಯ ಅಧಿಕಾರ ದುರುಪಯೋಗದ ಉದಾಹರಣೆಗಳನ್ನು ಉಲ್ಲೇಖಿಸಿ ಇಡಿ, ಐಟಿ ಮತ್ತು ರಾಜಭವನ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಚಾರವನ್ನು ಸಾರಾಸಗಟಾಗಿ ಸಚಿವ ಆರ್.ಬಿ. ತಿಮ್ಮಾಪೂರ ತಿರಸ್ಕರಿಸಿದರು.