ಬಡವರ ಅನ್ನಕ್ಕೆ ಕೇಂದ್ರ ಸರ್ಕಾರದಿಂದ ಅಡ್ಡಗಾಲು: ಸಚಿವ ತಿಮ್ಮಾಪುರ
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರ ಜೊತೆ ರಾಜಕಾರಣ ಮಾಡುತ್ತಿದೆ ಎಂದು ಅಬಕಾರಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಆರೋಪಿಸಿದರು.
ಲೋಕಾಪುರ (ಜೂ.19): ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರ ಜೊತೆ ರಾಜಕಾರಣ ಮಾಡುತ್ತಿದೆ ಎಂದು ಅಬಕಾರಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಆರೋಪಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ನೀಡುತ್ತೇವೆ ಎಂದರೂ ಅಕ್ಕಿ ನೀಡುತ್ತಿಲ್ಲ. ಬಡವರಿಗೆ ಅನ್ನ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಅಕ್ಕಿ ನೀಡದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದರ ವಿರುದ್ಧ ನಾವು ಧ್ವನಿಯೆತ್ತಲೇಬೇಕು. ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಜೂ. 20 ರಂದು ಜಿಲ್ಲಾಮಟ್ಟದಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ಪುಟ್ಟರಂಗಶೆಟ್ಟಿ
ಉಳಿದ ಗ್ಯಾರಂಟಿ ಶೀಘ್ರ ಆರಂಭ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಒತ್ತು ನೀಡಲಾಗಿದ್ದು, ಸರಕಾರ ಕೊಟ್ಟಭರವಸೆಗಳನ್ನು ಈಡೇರಿಸುವಲ್ಲಿ ಹೆಚ್ಚಿನ ಪ್ರಯತ್ನ ಮಾಡಲಾಗಿದೆ. ಉಚಿತ ಬಸ್ ಪ್ರಯಾಣ ಈಗಾಗಲೇ ಪ್ರಾರಂಭಗೊಂಡಿದೆ, ಗೃಹ ಲಕ್ಷ್ಮೀ ತಿಂಗಳಿಗೆ .2000ಗಳ ಯೋಜನೆ, ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಇರುವ ಕುಟುಂಬದ ಪ್ರತಿ ಸದಸ್ಯನಿಗೂ ತಿಂಗಳಿಗೆ 10 ಕೆಜಿ ಅಕ್ಕಿ ಸದ್ಯದಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮಳೆ ಬಾರದೇ ಕುಡಿಯುವ ನೀರು, ಜಾನುವಾರುಗಳಿಗೆ ನೀರಿನ ಬವಣೆ ತಪ್ಪಿಸಿಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ತಿಮ್ಮಾಪುರ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಸರ್ಕಾರ ಮಟ್ಟದಲ್ಲಿ ಅಧಿಕಾರಿಗಳ ಜೊತೆ ಎರಡು ಮೂರು ಬಾರಿ ಚರ್ಚಿಸಿದ್ದೇನೆ. ರೈತರಿಗೆ ಮತ್ತು ಕಾರ್ಮಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸಹಾಯ ಸಹಕಾರ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಈ ವೇಳೆ ಬಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ, ಲೋಕಣ್ಣ ಕೊಪ್ಪದ, ಗುರುರಾಜ ಉದಪುಡಿ, ಆನಂದ ಹಿರೇಮಠ, ಸುಭಾಸ ಗಸ್ತಿ, ಮಾಜಿ ತಾಪಂ ಸದಸ್ಯ ರಫೀಕ ಬೈರಕದಾರ, ಲಕ್ಷ್ಮಣ ಮಾಲಗಿ, ಗೋವಿಂದ ಕೌಲಗಿ, ಭೀಮನಗೌಡ ಪಾಟೀಲ, ಭೀಮನಗೌಡ ಅರಕೇರಿ, ಭೀರಪ್ಪಮಾಯನ್ನವರ, ಗೋಪಾಲಗೌಡ ಪಾಟೀಲ, ರಾಮಣ್ಣಾ ತುಬಾಕಿ, ವೆಂಕನಗೌಡ ಪಾಟೀಲ, ಎಂ.ಎಂ. ಹುಂಡೇಕಾರ, ಕುಮಾರ ಕಾಳಮ್ಮನವರ, ಕೃಷ್ಣಾ ಹೂಗಾರ, ಅಧಿಕಾರಿಗಳಾದ ತಹಶೀಲ್ದಾರ ವಿನೋದ ಹತ್ತಳ್ಳಿ, ತಾಪಂ ಇಒ ಸಂಜು ಹಿಪ್ಪರಗಿ, ತಾಲೂಕಾ ಮಟ್ಟದ ಅಧಿಕಾರಿಗಳಾದ ವೆಂಕಟೇಶಮಲಘಾಣ, ಮೊಹನ ಕೋರಡ್ಡಿ, ಎನ್.ಎಸ್. ಮೀಸಿ, ಎಸ್.ಎಂ. ಮುಲ್ಲಾ, ಶಿವಾನಂದ ಅಂಬಿಗೇರ, ಚನ್ನಬಸವ ಮಾಚಕನೂರ, ಮಹೇಶದಂಡನ್ನೆವರ, ವಿಜಯಕುಮಾರ, ವಿದ್ಯಾವತಿ ಬಿರಾದಾರ, ಲಕ್ಷ್ಮಣ ಉಪ್ಪಾರ, ಪಪಂ ಮುಖ್ಯಾಧಿಕಾರಿ ಮಾರುತಿ ನಡುವಿನಕೇರಿ, ಪಿಎಸ್‌ಐ ಸಿದ್ದಪ್ಪ ಯಡಹಳ್ಳಿ, ಡಾ.ಕವಿತಾ ಬೂದಿಹಾಳ, ಪಿಡಿಓ ಶಿವಾನಂದ ನರಸನ್ನವರಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಮತದಾರರ ಋುಣ ತೀರಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಶರತ್ ಬಚ್ಚೇಗೌಡ
5 ವರ್ಷದ ಅಧಿಕಾರವಧಿಯಲ್ಲಿ ಮುಧೋಳ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕುಡಿಯುವ ನೀರು, ರೈತರಿಗೆ ನೀರಾವರಿ ಯೋಜನೆ, ಶಿಕ್ಷಣ, ವಿದ್ಯುತ್, ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅರ್ಧಕ್ಕೆ ನಿಂತ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
-ಆರ್.ಬಿ. ತಿಮ್ಮಾಪುರ,ಅಬಕಾರಿ ಸಚಿವಮತ್ತು ಜಿಲ್ಲಾ ಉಸ್ತುವಾರಿ ಸಚಿವ