Asianet Suvarna News Asianet Suvarna News

ಮಾಧ್ಯಮದಲ್ಲಿ ಪ್ರಚಾರಕ್ಕಾಗಿ ಮಾತನಾಡುವ ಯತ್ನಾಳ್‌: ಸಚಿವ ಸಂತೋಷ್‌ ಲಾಡ್

ಬಿಜೆಪಿ ಬಸವನಗೌಡ ಪಾಟೀಲ ಯತ್ನಾಳ್ ಮೇಲೆ ಗೌರವವಿದೆ. ಮಾಧ್ಯಮದಲ್ಲಿ ಪ್ರಚಾರ ಸಿಗುತ್ತದೆ ಎಂದು ಮುಖ್ಯಮಂತ್ರಿಗಳ ಮೇಲೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್ ವಾಗ್ದಾಳಿ ನಡೆಸಿದರು. 

Minister Santosh Lad Slams On Basanagouda Patil Yatnal At Belagavi gvd
Author
First Published Dec 8, 2023, 11:30 PM IST

ಬೆಳಗಾವಿ (ಡಿ.08): ಬಿಜೆಪಿ ಬಸವನಗೌಡ ಪಾಟೀಲ ಯತ್ನಾಳ್ ಮೇಲೆ ಗೌರವವಿದೆ. ಮಾಧ್ಯಮದಲ್ಲಿ ಪ್ರಚಾರ ಸಿಗುತ್ತದೆ ಎಂದು ಮುಖ್ಯಮಂತ್ರಿಗಳ ಮೇಲೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ ಹಿರಿಯರು, ಯಾರ ಬಗ್ಗೆ ಮಾತಾಡುತ್ತಿದ್ದಾರೆ ಎನ್ನುವುದು ಬೇಕಲ್ಲ. 

ರಾಜ್ಯದ ಸಿಎಂ ಬಗ್ಗೆ ಅವರು ಮಾತಾಡುತ್ತಿದ್ದಾರೆ. ಏನಾದರೂ ಹಿಡಿತ ಬೇಕಲ್ಲ. ಮಾಧ್ಯಮದಲ್ಲಿ ಪ್ರಚಾರ ಸಿಗುತ್ತದೆ ಎಂದು ಮಾತಾಡುವುದು, ನೇರವಾಗಿ ಈ ರೀತಿ ಆರೋಪ ಮಾಡಿದ್ದರೆ ಅವರಿಗೆ ಏನು ಸಿಗುತ್ತದೆ‌. ಸ್ವಲ್ಪ ನೈತಿಕತೆ ಇಟ್ಟುಕೊಳ್ಳಿ. ಇಲ್ಲವಾದರೆ ಸುಮ್ಮನೆ ಮಾತಾಡುತ್ತೇನೆ ಎಂದಾದರೇ ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದರು. ಯಾರೋ ವ್ಯಕ್ತಿ ಹೋದರೆ, ಸಿಎಂಗೆ ಯಾಕೆ ಲಿಂಕ್ ಮಾಡುತ್ತಾರೆ. ಅವರ ಬಳಿ ಮಾಹಿತಿ ಕೊಡಲಿ, ಕೇಂದ್ರದಲ್ಲಿ ಅವರದ್ದೆ ಸರ್ಕಾರ ಇದೆ ಬೇಕಿದ್ದರೇ ತನಿಖೆ ಮಾಡಿಸಲಿ ಎಂದು ಸವಾಲ ಹಾಕಿದರು.

ಮೆಕ್ಕೆಜೋಳ ಘಟಕ ದುರಂತ ಸಂತ್ರಸ್ತರಿಗೆ 5 ಲಕ್ಷ ರು. ಪರಿಹಾರ: ಸಚಿವ ಸಂತೋಷ್‌ ಲಾಡ್‌

ರಾಜ್ಯದಲ್ಲಿ ಹೊಸದಾಗಿ ಸಾರಿಗೆ ಸೆಸ್‌ ವಿಧಿಸಲು ಚಿಂತನೆ: ‘ರಾಜ್ಯದಲ್ಲಿನ ಗ್ಯಾರೇಜ್‌ ಕಾರ್ಮಿಕರು ಸೇರಿದಂತೆ ಸಾರಿಗೆ ಕ್ಷೇತ್ರದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ರೂಪಿಸುವ ಸಲುವಾಗಿ ಮೋಟಾರು ವಾಹನಗಳ ಖರೀದಿ ಮೇಲೆ ಸಾರಿಗೆ ಸೆಸ್‌ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಇದರಿಂದ 25 ರಿಂದ 40 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಗುರ್ಮೆ ಸುರೇಶ್‌ ಶೆಟ್ಟಿ, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಟೈಲರಿಂಗ್‌ ವೃತ್ತಿನಿರತ ಕಾರ್ಮಿಕರಿದ್ದಾರೆ. ಅವರಿಗೆ ಕಾರ್ಮಿಕ ಇಲಾಖೆಯು ಯಾವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜತೆಗೆ ಕಟ್ಟಡ ಕಾರ್ಮಿಕರ ಸೆಸ್‌ನಿಂದ ಟೈಲರ್‌ಗಳು, ನೇಕಾರರಂತಹ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸಂತೋಷ್‌ ಲಾಡ್‌, ಇ-ಶ್ರಮ್‌ ಪೋರ್ಟಲ್‌ ಮೂಲಕ 7.28 ಲಕ್ಷ ಟೈಲರ್‌ ಗಳು ಅಸಂಘಟಿತ ಕಾರ್ಮಿಕರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಇವರಿಗೆ ಅಂಬೇಡ್ಕರ್‌ ಕಾರ್ಮಿಕ ಸಹಾಯ ಹಸ್ತ ಯೋಜನೆ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌-ಧನ್‌ ಯೋಜನೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇನ್ನು ನೇಕಾರರಿಗೆ ನಮ್ಮ ಇಲಾಖೆಯಿಂದ ಕಟ್ಟಡ ಕಾರ್ಮಿಕರ ಸೆಸ್‌ ಹಣ ಬಳಸಿ ಕಾರ್ಯಕ್ರಮ ರೂಪಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಸಕ ಯತ್ನಾಳ್ ಮಹಾ ಸುಳ್ಳುಗಾರ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಆದರೆ, ಗಿಗ್‌ ಕಾರ್ಮಿಕರು, ಗ್ಯಾರೇಜ್‌ ಕಾರ್ಮಿಕರು ಸೇರಿದಂತೆ ಸಾರಿಗೆ ವಲಯದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಕಾರ್ಯಕ್ರಮಗಳನ್ನು ರೂಪಿಸಲು ಹೊಸದಾಗಿ ಸಾರಿಗೆ ಸೆಸ್‌ ಪ್ರಸ್ತಾಪಿಸಲಾಗುತ್ತಿದೆ. ಇದಕ್ಕೆ ಸದ್ಯದಲ್ಲೇ ಸಾರಿಗೆ ಇಲಾಖೆಯಿಂದ ಬಿಲ್‌ ಮಂಡಿಸಲು ಚಿಂತನೆ ನಡೆಸಲಾಗಿದೆ. ಇದಕ್ಕೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರೊಂದಿಗೂ ಚರ್ಚಿಸಲಾಗಿದೆ ಎಂದರು.

Latest Videos
Follow Us:
Download App:
  • android
  • ios