ಶಾಸಕ ಯತ್ನಾಳ ಸಾಹೇಬ್ರಿಗೆ ಪಬ್ಲಿಸಿಟಿ ಡಿಸೀಜ್ ಇದೆ: ಸಚಿವ ಸಂತೋಷ್ ಲಾಡ್
ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾಲಾವಕಾಶ ಕೊಡಲಾಗಿದೆ. ಬರುವ ವಾರದಲ್ಲಿ ಈ ಬಗ್ಗೆ ಮಾತನಾಡುತ್ತೇವೆ. ಸರ್ಕಾರ ಸಮರ್ಪಕವಾಗಿ ಉತ್ತರ ಕೊಡಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಬೆಳಗಾವಿ (ಡಿ.09): ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾಲಾವಕಾಶ ಕೊಡಲಾಗಿದೆ. ಬರುವ ವಾರದಲ್ಲಿ ಈ ಬಗ್ಗೆ ಮಾತನಾಡುತ್ತೇವೆ. ಸರ್ಕಾರ ಸಮರ್ಪಕವಾಗಿ ಉತ್ತರ ಕೊಡಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ ಹೇಳಿಕೆಗಳ ವಿರುದ್ಧ ಸಿಡಿಮಿಡಿಗೊಂಡ ಸಚಿವ ಲಾಡ್. ಯತ್ನಾಳ ಸಾಹೇಬ್ರಿಗೆ ಪಬ್ಲಿಸಿಟಿ ಡಿಸೀಜ್ ಇದೆ. ಮಾತನಾಡಲು ಹಲವಾರು ವಿಷಯಗಳಿವೆ. ಸಿಎಂ ಅಂದು ಕಾರ್ಯಕ್ರಮದಲ್ಲಿ ಮಾತನಾಡಿದ್ದು ಕೇವಲ ಮುಸ್ಲಿಂ ಪರವಾಗಿನಾ..? ಮಾಧ್ಯಮದವರನ್ನೆ ಪ್ರಶ್ನೆ ಮಾಡಿದರು.
ಮೊದಲಿನಿಂದಲೂ ಕಾಂಗ್ರೆಸ್ ಮುಸ್ಲಿಂ ತುಷ್ಟಿಕರಣ ಮಾಡಿದೆ ಎಂಬ ವಿಚಾರಕ್ಕೆ ಉತ್ತರಿಸಿದ ಅವರು, ನೆಹರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿಚಾರ ಬಿಡಿ. ಕಳೆದ ಹತ್ತು ವರ್ಷಗಳ ಅವಧಿಯಲ್ಲಾದ ಬೆಳವಣಿಗೆಗಳ ಬಗ್ಗೆ ಮಾತನಾಡಲಿ. ಕಾಂಗ್ರೆಸ್ ಎಲ್ಲ ಸಮುದಾಯದವರನ್ನು ಸಮನಾಗಿ ಕಾಣುತ್ತದೆ. ಕೇಂದ್ರ ಸರ್ಕಾರ ಹಲವಾರು ವಿಷಯಗಳಲ್ಲಿ ವಿಫಲವಾಗಿದೆ. ಮುಸ್ಲಿಂರ ವಿರುದ್ಧವಾಗಿ ಮಾತನಾಡುವ ಯತ್ನಾಳ ಪಿಎಂ ಮೋದಿಯನ್ನು ಯಾಕೆ ಪ್ರಶ್ನೆ ಮಾಡಲ್ಲ. ಪಿಎಂ ಮೋದಿ ಪಾಕಿಸ್ತಾನಕ್ಕೆ ಹೋಗಿ ಕೇಕ್ ತಿಂದು ಬಂದರಲ್ಲ. ಅವರು ಸರ್ಕಾರದ ಶಿಷ್ಟಾಚಾರ ಮುರಿದು ಅಲ್ಲಿಗೆ ಹೋಗಿಬಂದರು. ಸುಮ್ಮನೆ ಮಾತನಾಡಬೇಕು ಅಂತ ಮಾತನಾಡಬಾರದು.ಯತ್ನಾಳ ಸಾಹೇಬ್ರಿಗೆ ಕೈಮುಗಿದೆ ಕೇಳ್ತಿನಿ.ಇದನ್ನೆಲ್ಲಾ ಇಲ್ಲಿಗೆ ನಿಲ್ಲಿಸಬೇಕು ಎಂದರು.
ನಾನು ದೂರ ಹೋಗುವವರೆಗೆ ನನ್ನನ್ನ ನೋಡಿದ್ದರು: ಮೊದಲ ಬಾರಿಗೆ ಲೀಲಾವತಿ ಬಗ್ಗೆ ಮೊಮ್ಮಗ ಯುವರಾಜ್ ಪ್ರತಿಕ್ರಿಯೆ!
ರಾಜ್ಯದಲ್ಲಿ ಹೊಸದಾಗಿ ಸಾರಿಗೆ ಸೆಸ್ ವಿಧಿಸಲು ಚಿಂತನೆ: ‘ರಾಜ್ಯದಲ್ಲಿನ ಗ್ಯಾರೇಜ್ ಕಾರ್ಮಿಕರು ಸೇರಿದಂತೆ ಸಾರಿಗೆ ಕ್ಷೇತ್ರದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ರೂಪಿಸುವ ಸಲುವಾಗಿ ಮೋಟಾರು ವಾಹನಗಳ ಖರೀದಿ ಮೇಲೆ ಸಾರಿಗೆ ಸೆಸ್ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಇದರಿಂದ 25 ರಿಂದ 40 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಟೈಲರಿಂಗ್ ವೃತ್ತಿನಿರತ ಕಾರ್ಮಿಕರಿದ್ದಾರೆ.
ಅವರಿಗೆ ಕಾರ್ಮಿಕ ಇಲಾಖೆಯು ಯಾವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜತೆಗೆ ಕಟ್ಟಡ ಕಾರ್ಮಿಕರ ಸೆಸ್‌ನಿಂದ ಟೈಲರ್‌ಗಳು, ನೇಕಾರರಂತಹ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್, ಇ-ಶ್ರಮ್ ಪೋರ್ಟಲ್ ಮೂಲಕ 7.28 ಲಕ್ಷ ಟೈಲರ್ ಗಳು ಅಸಂಘಟಿತ ಕಾರ್ಮಿಕರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಇವರಿಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ವಿರೋಧ ಪಕ್ಷಗಳು ಹತಾಶರಾಗಿ ಗೂಬೆ ಕೂರಿಸುವ ಕೆಲಸ ಮಾಡುತ್ತಿವೆ: ಯತೀಂದ್ರ ಸಿದ್ದರಾಮಯ್ಯ
ಇನ್ನು ನೇಕಾರರಿಗೆ ನಮ್ಮ ಇಲಾಖೆಯಿಂದ ಕಟ್ಟಡ ಕಾರ್ಮಿಕರ ಸೆಸ್ ಹಣ ಬಳಸಿ ಕಾರ್ಯಕ್ರಮ ರೂಪಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಗಿಗ್ ಕಾರ್ಮಿಕರು, ಗ್ಯಾರೇಜ್ ಕಾರ್ಮಿಕರು ಸೇರಿದಂತೆ ಸಾರಿಗೆ ವಲಯದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಕಾರ್ಯಕ್ರಮಗಳನ್ನು ರೂಪಿಸಲು ಹೊಸದಾಗಿ ಸಾರಿಗೆ ಸೆಸ್ ಪ್ರಸ್ತಾಪಿಸಲಾಗುತ್ತಿದೆ. ಇದಕ್ಕೆ ಸದ್ಯದಲ್ಲೇ ಸಾರಿಗೆ ಇಲಾಖೆಯಿಂದ ಬಿಲ್ ಮಂಡಿಸಲು ಚಿಂತನೆ ನಡೆಸಲಾಗಿದೆ. ಇದಕ್ಕೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರೊಂದಿಗೂ ಚರ್ಚಿಸಲಾಗಿದೆ ಎಂದರು.