Asianet Suvarna News Asianet Suvarna News

ಪ್ರಧಾನಿ ಮೋದಿ ಉದ್ದಿಮೆದಾರರ ಪರ: ಸಚಿವ ಸಂತೋಷ್ ಲಾಡ್‌

ಈಗಾಗಲೇ ರಾಜ್ಯದಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಯಶಸ್ವಿಯಾಗಿದ್ದು, ಇದೇ 27ರಂದು ಗೃಹಲಕ್ಷ್ಮೇ ಹಾಗೂ ಎರಡು ತಿಂಗಳಲ್ಲಿ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು. 

Minister Santosh Lad Slams On PM Narendra Modi gvd
Author
First Published Aug 17, 2023, 5:19 PM IST

ಧಾರವಾಡ (ಆ.17): ಈಗಾಗಲೇ ರಾಜ್ಯದಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಯಶಸ್ವಿಯಾಗಿದ್ದು, ಇದೇ 27ರಂದು ಗೃಹಲಕ್ಷ್ಮೇ ಹಾಗೂ ಎರಡು ತಿಂಗಳಲ್ಲಿ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು. ಇಲ್ಲಿಯ ಸೃಜನಾ ರಂಗಮಂದಿರದಲ್ಲಿ ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಬುಧವಾರ ಆಯೋಜಿಸಿದ್ದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಪಂಚಯೋಜನೆಗಳು ತುಂಬ ಅನುಕೂಲವಾಗಿವೆ. ಆದರೆ, ಬಿಜೆಪಿ ಮುಖಂಡರು ಮಾತ್ರ ಸರ್ಕಾರದ ಯೋಜನೆಗಳ ಬಗ್ಗೆ ಅನವಶ್ಯಕ ಆರೋಪಗಳನ್ನು ಮಾಡುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವೇನಿಲ್ಲ ಎಂದರು. ಚುನಾವಣಾ ಪೂರ್ವ ನೀಡಿದ್ದ ಭರವಸೆಗಳನ್ನು ಈಡೇರಿಸಲು ಮೊದಲ ಆಧ್ಯತೆ ನೀಡಿದೆ. ಸುಮಾರು 60 ಸಾವಿರ ಕೋಟಿ ವೆಚ್ಚದಲ್ಲಿ ಪಂಚ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಬಡವರ ಪರ ಅಗತ್ಯವಿರುವ ಎಲ್ಲ ರೀತಿಯ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಬದ್ಧತೆ ಹೊಂದಿದ್ದೇವೆ. 

ಗ್ರಾಮಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಿ: ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್‌ ಸೂಚನೆ

ಈ ಮೂಲಕ ಸಾಮಾಜಿಕ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇವೆ. ಗೃಹಜ್ಯೋತಿ ಯೋಜನೆಯು ಧಾರವಾಡ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಗಳಿಸಿದ್ದು, ಉಳಿದ ಗ್ರಾಹಕರು ಸಹ ಗೃಹಜ್ಯೋತಿ ಯೋಜನೆಗೆ ನೊಂದಾಯಿಸಿಕೊಳ್ಳಲು ಹೆಸ್ಕಾಂ ಸೂಕ್ತ ಪ್ರಚಾರ ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಶಾಸಕ ಎನ್‌.ಎಚ್‌. ಕೋನರಡ್ಡಿ ಮಾತನಾಡಿ, ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ. ರೈತರಿಗೆ ಮತ್ತು ಗ್ರಾಹಕರಿಗೆ ತೊಂದರೆ ಆಗದಂತೆ ವಿದ್ಯುತ್‌ ಪೂರೈಕೆ ಮಾಡಬೇಕು ಮತ್ತು ಗೃಹಜ್ಯೋತಿ ಯೋಜನೆ ಯಶಸ್ವಿಗೊಳಿಸಬೇಕು. ಹೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿಗಳು ಇನ್ನಷ್ಟುಕ್ರಿಯಾಶೀಲವಾಗಿ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು.

ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ ರೋಷನ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಹೆಸ್ಕಾಂ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಗೃಹಜ್ಯೋತಿ ಯೋಜನೆಗೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ಏಳು ಜಿಲ್ಲೆಗಳಲ್ಲಿ ಈಗಾಗಲೇ ಶೇ.90 ರಷ್ಟುಮತ್ತು ಧಾರವಾಡ ಜಿಲ್ಲೆಯಲ್ಲಿ ಶೇ.80 ರಷ್ಟು ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯ ಸುಮಾರು 5.4 ಲಕ್ಷ ಆರ್‌.ಆರ್‌ ನಂಬರಗಳ ಪೈಕಿ 4.2 ಲಕ್ಷ ಗ್ರಾಹಕರು ಆಗಸ್ವ್‌ ತಿಂಗಳಲ್ಲಿ ಗೃಹಜ್ಯೋತಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ವಿವಿಧ ಗ್ರಾಹಕರಿಗೆ ಹೆಸ್ಕಾಂದಿಂದ ಝೀರೋ ಮೊತ್ತದ ಬಿಲ್ಲುಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಹೆಸ್ಕಾಂ ಗ್ರಾಹಕರ ಪರವಾಗಿ ಎಚ್‌.ಆರ್‌. ಕಮಡೊಳ್ಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. 

ಹೆಸ್ಕಾಂ ತಾಂತ್ರಿಕ ವಿಭಾಗದ ನಿರ್ದೇಶಕ ಶ್ರೀಕಾಂತ ಸಸಾಲಟ್ಟಿಸ್ವಾಗತಿಸಿದರು. ಮಾಯಾ ರಾಮನ್‌ ನಿರೂಪಿಸಿದರು. ಕಾರ್ಯಪಾಲಕ ಅಭಿಯಂತರ ಎಸ್‌.ಜಗದೀಶ ವಂದಿಸಿದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಸ್ಕಾಂನ ಹಣಕಾಸು ವಿಭಾಗದ ನಿರ್ದೇಶಕ ಪ್ರಕಾಶ ಪಾಟೀಲ, ಜಾಗೃತ ದಳದ ಪೊಲೀಸ್‌ ಅಧೀಕ್ಷಕ ಶಿರಕೋಳ ನಾಯಕ, ಮುಖ್ಯ ಅಭಿಯಂತರ ರಮೇಶ ಎಲ್‌ ಬೆಂಡಿಗೇರಿ ಹಾಗೂ ಕಾಂಗ್ರೆಸ್‌ ಮುಖಂಡರು ಇದ್ದರು. ಕಾರ್ಯಕ್ರಮ ವೇದಿಕೆಯಲ್ಲಿ ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಜನಜಾಗೃತಿಗಾಗಿ ಹೆಸ್ಕಾಂ ನೌಕರರ ತಂಡದವರು ಝೀರೊ ಬಿಲ್‌ ಕಿರುನಾಟಕ ಪ್ರದರ್ಶಿಸಿ, ಯೋಜನೆಯ ಪ್ರಯೋಜನೆ ಪಡೆಯುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಬೆಂಗಳೂರಲ್ಲಿ ಪೋಕ್ಸೋ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ: ಸ್ವಗ್ರಾಮಕ್ಕೆ ಮೃತದೇಹ!

ಮೋದಿ ಉದ್ದಿಮೆದಾರರ ಪರ: ಕಳೆದ ಒಂಭತ್ತು ವರ್ಷಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯನ್ನು ಪ್ರಶ್ನಿಸಿದ ಸಚಿವ ಲಾಡ್‌, ದೊಡ್ಡ ಉದ್ದಿಮೆದಾರರ .25 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇಲ್ಲಿ ವರೆಗೆ ರೈತರ ಸಾಲ ಮನ್ನಾವಲ್ಲದೇ ಅವರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಲಿಲ್ಲ. ಬರೀ ದೊಡ್ಡ ಉದ್ದಿಮೆದಾರರ ಬೆನ್ನು ಬಿದ್ದ ಅವರು ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಿಲ್ಲ. ಆದರೆ, ಕಾಂಗ್ರೆಸ್‌ ಸರ್ಕಾರ ಬಡ ಹಾಗೂ ಮಧ್ಯಮ ವರ್ಗಗಳ, ರೈತರ ಹಿತ ಕಾಪಾಡುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಲಾಡ್‌ ಹೇಳಿದರು.

Follow Us:
Download App:
  • android
  • ios