ಸಚಿವ ನಾಗೇಂದ್ರ ಅವರು ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದು, ಈ ವಿಚಾರ ಈಗ ಮುಕ್ತಾಯವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ, ಆದರೆ ಸಮಯ ಬಂದಾಗ ಎಲ್ಲವೂ ನಿರ್ಧಾರವಾಗಲಿದೆ ಎಂದರು.

 ಬೆಳಗಾವಿ (ಆ.30): ನಾಗೇಂದ್ರ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಜುಗರವಾಗಿದ್ದು ನಿಜ. ಆದರೆ, ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಈ ವಿಚಾರದ ಬಗ್ಗೆ ಮತ್ತಷ್ಟು ಚರ್ಚೆ ನಡೆಸುವುದು ಅನಾವಶ್ಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬಿ ನಾಗೇಂದ್ರ ರಾಜೀನಾಮೆ ನೀಡಿದ ಕಾರಣ ಏನು?

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗೇಂದ್ರ ಅವರ ಸ್ಥಾನವನ್ನು ಅವರ ಸಮಾಜದವರಿಗೇ ನೀಡಲಾಗುವುದು. ಆದರೆ, ಯಾವಾಗ ನೀಡಬೇಕು ಎಂಬುದನ್ನು ಸರ್ಕಾರ ನಿರ್ಧರಿಸಲಿದೆ. ನಾಗೇಂದ್ರ ಅವರು ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ವಿಚಾರ ಈಗ ಮುಕ್ತಾಯಗೊಂಡಿದೆ. ರಾಜ್ಯದಲ್ಲಿನ ನಮ್ಮ ಸರ್ಕಾರ ಸುಭದ್ರವಾಗಿದ್ದು, ಮುಂದೆಯೂ ಸುಭದ್ರವಾಗಿರಲಿದೆ ಎಂದರು.

ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಉಪಮುಖ್ಯಮಂತ್ರಿ ಸ್ಥಾನದ ವಿಚಾರ ಸದ್ಯ ಪಕ್ಷದಲ್ಲಿ ಎಲ್ಲಿಯೂ ಚರ್ಚೆಯಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮನಸು ಮಾಡಿದರೆ ತಾವು ಡಿಸಿಎಂ ಆಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲು ಒಬ್ಬರೇ ಡಿಸಿಎಂ ಇದ್ದರು. ಈಗಲೂ ಒಬ್ಬರೇ ಡಿಸಿಎಂ ಇದ್ದಾರೆ. ಡಿಸಿಎಂ ಸ್ಥಾನಕ್ಕೆ ಎಲ್ಲರೂ ಆಕಾಂಕ್ಷಿಗಳೇ. ಸಮಯ ಬಂದಾಗ ಎಲ್ಲವೂ ನಿರ್ಧಾರವಾಗಲಿದೆ. ಇನ್ನೂ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದೇವೆ. ನಾಲ್ಕೈದು ಮಂದಿಯನ್ನು ಡಿಸಿಎಂ ಮಾಡಿದರೆ ಆ ಹುದ್ದೆಯ ಮಹತ್ವವೇ ಇರುವುದಿಲ್ಲ ಎಂದು ಹೇಳಿದರು.

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಮಾಜಿ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಕುರಿತು ಪ್ರತಿಕ್ರಿಯಿಸಿ, ರಮೇಶ ಅವರು ಆರು ತಿಂಗಳಿಗೊಮ್ಮೆ ಸಿದ್ದರಾಮಯ್ಯ ಅ‍ವರನ್ನು ಭೇಟಿ ಮಾಡುತ್ತಾರೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದರು.