ಮಾಜಿ ಸಿಎಂ ಸಿದ್ದರಾಮಯ್ಯ(Former CM Siddaramaiah) ಹಾಗೂ ನನ್ನ ನಡುವೆ ಯಾವುದೇ ಗೊಂದಲ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ(Satish Jarkiholi) ಸ್ಪಷ್ಟಪಡಿಸಿದ್ದಾರೆ.

ನವದೆಹಲಿ (ಜು.18): ಮಾಜಿ ಸಿಎಂ ಸಿದ್ದರಾಮಯ್ಯ(Former CM Siddaramaiah) ಹಾಗೂ ನನ್ನ ನಡುವೆ ಯಾವುದೇ ಗೊಂದಲ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ(Satish Jarkiholi) ಸ್ಪಷ್ಟಪಡಿಸಿದ್ದಾರೆ. 

ದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮಿಬ್ಬರ ನಡುವೆ ಯಾವುದೇ ಗೊಂದಲ ಇಲ್ಲ. ಆದರೆ, ಕೆಲವು ಶಕ್ತಿಗಳು ನಮ್ಮ ನಡುವಿನ ಸ್ನೇಹಕ್ಕೆ ಹುಳಿ ಹಿಂಡುವ, ಅದರ ಲಾಭ ಪಡೆಯುವ ಯತ್ನ ನಡೆಸಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ. ನಮ್ಮದು 30 ವರ್ಷಗಳ ಸಂಬಂಧ ಎಂದರು. 

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ, ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ ಜೊತೆ ಚರ್ಚೆ ನಡೆಸಿದ್ದೇವೆ. ನಮ್ಮ ಅಭಿಪ್ರಾಯ ಹೇಳಿದ್ದೇವೆ. ಉಳಿದಂತೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಆದಷ್ಟು ಬೇಗ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದರು.

ಸಂಪುಟ ವಿಸ್ತರಣೆ ವೇಳೆ ಹೊಸಬರಿಗೆ ಅವಕಾಶ ಕೊಡುವುದು ಒಳ್ಳೆಯದು. ಮುಂದೆ ಅವರು ಪಕ್ಷಕ್ಕೆ ಆಸ್ತಿ ಆಗ್ತಾರೆ. ಬೆಳಗಾವಿ ಜಿಲ್ಲೆಗೆ ಮತ್ತೊಂದು ಸ್ಥಾನ ಕೊಡಲೇ ಬೇಕು ಎಂದು ಅವರು ಆಗ್ರಹಿಸಿದರು.