Asianet Suvarna News Asianet Suvarna News

ಬಿಜೆಪಿ ಸೇರಿದ ಜಗದೀಶ್‌ ಶೆಟ್ಟರ್‌ಗೆ ಒಳ್ಳೆಯದಾಗಲಿ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ತೊರೆದು ಬಿಜಿಪಿ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಒಳ್ಳೆಯದಾಗಲಿ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಿಪ್ಪಾಣಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 

Minister Satish Jarkiholi Slams On Jagadish Shettar At Belagavi gvd
Author
First Published Jan 26, 2024, 8:13 PM IST

ಬೆಳಗಾವಿ (ಜ.26): ಕಾಂಗ್ರೆಸ್‌ ತೊರೆದು ಬಿಜಿಪಿ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಒಳ್ಳೆಯದಾಗಲಿ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಿಪ್ಪಾಣಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್‌ ಬಿಟ್ಟು ಯಾರು ಹೋಗುತ್ತಾರೆ ಅವರಿಗೆ ಒಳ್ಳೆಯದಾಗಲಿ. ಒಬ್ಬರು ಹೋಗಿದ್ದಾರೆ. ಇದರಿಂದ ಪಕ್ಷಕ್ಕೆ ಏನೂ ಆಗುವುದಿಲ್ಲ. ಶೆಟ್ಟರ್‌ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ಲೋಕಸಭಾ ಚುನಾವಣೆ ಮೇಲೆಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ಸದ್ಯಕ್ಕೆ ಡಿಸಿಎಂಸ್ಥಾನದ ಕುರಿತು ಚರ್ಚೆಇಲ್ಲ. ಮೊದಲು ಚುನಾವಣೆ ಮಹತ್ವವಿದೆ. ಲೋಕಸಭಾ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಒಂದು ಕಡೆಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಎಲ್ಲಹಂತದಲ್ಲಿ ಕಾರ್ಯವನ್ನು ಮಾಡುತ್ತಿದ್ದೇವೆ. ಅಭ್ಯರ್ಥಿಗಳ ಬಗ್ಗೆ ಸರ್ವೆ ಆಗುತ್ತಿದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗುತ್ತದೆ ಎಂಬುದು ನೋಡೋಣ ಎಂದರು. ಕಾಂತರಾಜು ವರದಿ ಬಿಡುಗಡೆ ವಿಳಂಬ ವಿಚಾರಕ್ಕೆಪ್ರತಿಕ್ರಿಯಿಸಿದ ಅವರು ಕಾಂತರಾಜು ವರದಿ ಬಿಡುಗಡೆ ಆಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಆದಷ್ಟು ಬೇಗನೆ ಬಿಡುಗಡೆ ಆಗುತ್ತದೆ ಎಂದರು.

ರೈತರಿಗೆ ಕೂಡಲೇ ಪರಿಹಾರ ಹಣ ವಿತರಿಸಿ: ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ

ಸತೀಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಲು ಆಗ್ರಹ: ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಲೋಕಸಭಾ ಚುನಾವಣೆಗೂ ಮುನ್ನ ಉಪ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ದ್ಯಾವಪ್ಪ ನಾಯಕ ಎಚ್ಚರಿಸಿದರು. ಸತೀಶ್ ಜಾರಕಿಹೊಳಿ ಅವರು ರಾಜ್ಯದಲ್ಲಿ ಲೋಕೋಪಯೋಗಿ ಸಚಿವರಾಗಿ ಅತ್ಯುತ್ತಮವಾಗಿ ಅಭಿವೃದ್ಧಿ ಕೆಲಸ ನಿರ್ವಹಿಸುವ ಮೂಲಕ ಇಲಾಖೆಯನ್ನು ಸದೃಢಗೊಳಿಸಿದ್ದಾರೆ. ಅವರಿಗೆ ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು.

ಇಲ್ಲದಿದ್ದರೆ ಚುನಾವಣೆ ವೇಳೆ ತಕ್ಕ ಪಾಠ ಕಲಿಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ನಾಯಕ ಸಮುದಾಯ ಪಕ್ಷಕ್ಕೆ ಹೆಚ್ಚಿನ ಮತ ನೀಡಿರುವುದೂ ಕಾರಣ. ಈಗ ವಿಧಾನಸಭೆಯಲ್ಲಿ ನಾಯಕ ಸಮುದಾಯದ 17 ಮಂದಿಯಲ್ಲಿ 15 ಶಾಸಕರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಯಲ್ಲಿ ಸತೀಶ್ ಜಾರಕಿಹೊಳಿ ಅವರ ಕೊಡುಗೆ ಅಪಾರ. ಆದ್ದರಿಂದ ಉಪ ಮುಖ್ಯಮಂತ್ರಿ ಹುದ್ದೆ ನೀಡುವುದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಒಳಿತಾಗುವ ಎಲ್ಲಾ ಲಕ್ಷಣ ಇದೆ ಎಂದರು.

ಲೋಕಸಭಾ ಚುನಾವಣೆಗೆ ಸಚಿವರ ಸ್ಪರ್ಧೆ ಕಡ್ಡಾಯವಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಇದೇ ವೇಳೆ, ಕೆಲವು ದಿನ ಹಿಂದೆ ಕಾಂಗ್ರೆಸ್ ಕಾರ್ಯಕರ್ತರೆಂದು ಹೇಳಿಕೊಂಡ ಕೆಲವರು ಸತೀಶ್ ಜಾರಕಿಹೊಳಿ ಹಾಗೂ ಕೆ.ಎನ್. ರಾಜಣ್ಣ ಅವರು ತಮ್ಮ ಹಕ್ಕನ್ನು ಕೇಳಿದ ಕಾರಣಕ್ಕಾಗಿಯೇ ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಸಬೇಉಕ ಎಂದು ಕಾಂಗ್ರೆಸ್ ನಾಯಕರಿಗೆ ದೂರು ನೀಡಿರುವುದು ಖಂಡನೀಯ ಎಂದು ಅವರು ಹೇಳಿದರು.

Follow Us:
Download App:
  • android
  • ios