ನಮ್ಮ ಜಿಲ್ಲೆಯಲ್ಲಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸುವುದು ನಮ್ಮ ಕೆಲಸ ಇದ್ದು, ಅದನ್ನು ಮಾಡುತ್ತೇವೆ. ಈಗಾಗಲೇ ಬೆಂಗಳೂರಿನಲ್ಲಿ ಒಂದು ಬಾರಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆಯಾಗಿದೆ. ಎರಡನೇ ಬಾರಿ ಆದಷ್ಟುಬೇಗ ಬೆಳಗಾವಿಯಲ್ಲಿ ಸಭೆ ಮಾಡಿ ಚರ್ಚೆ ಮಾಡುತ್ತೇವೆ ಎಂದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ(ಆ.06): ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಪಕ್ಷದ ಹೈಕಮಾಂಡ್‌ ಹೇಳಿಲ್ಲ. ಆದರೆ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಎಲ್ಲರಿಗೂ ಸೂಚನೆ ನೀಡಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸುವುದು ನಮ್ಮ ಕೆಲಸ ಇದ್ದು, ಅದನ್ನು ಮಾಡುತ್ತೇವೆ. ಈಗಾಗಲೇ ಬೆಂಗಳೂರಿನಲ್ಲಿ ಒಂದು ಬಾರಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆಯಾಗಿದೆ. ಎರಡನೇ ಬಾರಿ ಆದಷ್ಟುಬೇಗ ಬೆಳಗಾವಿಯಲ್ಲಿ ಸಭೆ ಮಾಡಿ ಚರ್ಚೆ ಮಾಡುತ್ತೇವೆ ಎಂದರು.

ಸತೀಶ್‌ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್‌ ಮಧ್ಯೆ ಕೋಲ್ಡ್‌ವಾರ್‌ ಇಲ್ಲ: ಚನ್ನರಾಜ

ಹೈಕಮಾಂಡ್‌ ನನಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಬೇಕೆಂದು ಸೂಚನೆ ನೀಡಿಲ್ಲ. ಆಕಾಂಕ್ಷಿ ಅಭ್ಯರ್ಥಿಗಳನ್ನು ಹುಡುಕಾಟ ನಡೆಸಬೇಕಿದೆ. ಹಾಲಿ ಹಾಗೂ ಮಾಜಿ ಸಚಿವರಿಗೆ ಸ್ಪರ್ಧೆ ಮಾಡಬೇಕೆಂದು ಎಲ್ಲಿಯೂ ಹೇಳಿಲ್ಲ. ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕಿ ಅವರಿಗೆ ಅವಕಾಶ ಕೊಡುತ್ತೇವೆ. ವಿಧಾನಸಭಾ ಚುನಾವಣೆಯ ಮಾದರಿಯಲ್ಲಿ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್‌ ಎದುರಿಸಲಿದೆ. ಆದರೆ ಈ ಚುನಾವಣೆಯಲ್ಲಿ ಹೆಚ್ಚಿನ ಜವಾಬ್ದಾರಿ ಇದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣದ ಕುರಿತು ಮಾಜಿ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರು ಇಂತಹ ಹೇಳಿಕೆ ನೀಡುತ್ತಿರುತ್ತಾರೆ. ಆ ಹೇಳಿಕೆಯನ್ನು ಅವರು ವಾಪಸ್‌ ಪಡೆದಿದ್ದಾರೆ. ಬಿಜೆಪಿಯವರು ಕ್ಷಮೆ ಕೇಳಿದ್ದಾರೆ. ಅದು ಮುಗಿದ ಹೋದ ಅಧ್ಯಾಯ ಎಂದರು.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಕುರಿತು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಚರ್ಚೆ ನಡೆಯಿತಾ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾಕಷ್ಟುವಿಚಾರಗಳು ಇವೆ. ಕಳೆದ 10 ವರ್ಷಗಳಿಂದ ಆಗದ ಕೆಲಸಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಆದಷ್ಟುಬೇಗ ನಮ್ಮ ರಾಜ್ಯಕ್ಕೆ ಪರಿಹಾರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೇ ಹೆಬ್ಬಾಳ್ಕರ ಹಾಗೂ ನಿಮ್ಮ ನಡುವೆ ಅಧಿಕಾರಿಗಳ ವರ್ಗಾವಣೆಯಲ್ಲಿ ಕೋಲ್ಡ… ವಾರ ನಡೆಯುತ್ತಿರುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಲ್ಲ ಆ ಸೀಟು ರಾಜು ಸೇಠ್‌ ಅವರಿಗೆ ಬಿಟ್ಟಿದ್ದು. ನಮಗೂ ಲಕ್ಷ್ಮೇ ಅವರಿಗೂ ಸಂಬಂಧ ಇಲ್ಲ. ಅವರವರ ಕ್ಷೇತ್ರದದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟಿದ್ದು. ಅವರು ಮೂರು ಪತ್ರ ಮೊದಲು ಕೊಟ್ಟಿರುತ್ತಾರೆ. ಅವರದ್ದು ಕೆಲಸ ಆಗುತ್ತದೆ. ಅಲ್ಲಿ ಆಗದಿದ್ದರೆ ನಮ್ಮ ಕಡೆ ಪತ್ರ ತೆಗೆದುಕೊಂಡು ಹೋಗುತ್ತಾರೆ. ಇದಕ್ಕೂ ನಮ್ಮಿಬ್ಬರ ನಡುವೆ ಕೋಲ್ಡ… ವಾರ ಇದೆ ಎನ್ನುವುದಕ್ಕೂ ಸರಿಯಲ್ಲ ಎಂದರು.

ಉದ್ಯಮಬಾಗ ಪೊಲೀಸರು ವಿಕಲಚೇತನನ ಮೇಲೆ ಹಲ್ಲೆ ಮಾಡಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಹಲ್ಲೆ ಮಾಡಿದ ವಿಡಿಯೋ ನೋಡಿದ್ದೇನೆ. ಈ ಕುರಿತು ನಗರ ಪೊಲೀಸರೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು.

ಕುಮಾರಸ್ವಾಮಿ ತಮ್ಮ ಆರೋಪ ಪ್ರೂವ್‌ ಮಾಡೋದು ಬಹಳ ಕಷ್ಟ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಸರ್ಕಾರದ ಬಗ್ಗೆ ಎರಡೂ ತಿಂಗಳಿನಿಂದ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅದನ್ನು ಪ್ರೋವ್‌ ಮಾಡುವುದು ಬಹಳ ಕಷ್ಟಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎರಡು ತಿಂಗಳಿನಿಂದ ಸರಣಿ ಆರೋಪ ಇದ್ದೆ ಇದೆ. ಹೇಳುವುದಷ್ಟೆ, ಅದಕ್ಕೆ ಯಾವುದೇ ದಾಖಲೆ ಸಿಗಲ್ಲ. ಪೂ›ವ್‌ ಮಾಡೋದು ಬಹಳ ಕಷ್ಟಇದೆ. ಈಗಾಗಲೇ ನಮ್ಮ ಸದಸ್ಯರು ಸದನದಲ್ಲಿ ದಾಖಲೆ ಕೊಡುವಂತೆ ಹೇಳಿದ್ದಾರೆ. ಇದನ್ನು ಪದೇ ಪದೇ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದರು.

ಸೌಜನ್ಯ ಹತ್ಯೆ ಕೇಸ್‌ನಲ್ಲಿ ಡಾ.ಹೆಗ್ಗಡೆ ಹೆಸರು ಕೆಡಿಸುವ ಹುನ್ನಾರ: ಸಿದ್ದಸೇನ ಮುನಿ ಮಹಾರಾಜರು

ನಮ್ಮ ಮುಂದೆ ಇನ್ನೂ ಐದು ವರ್ಷದ ಸರ್ಕಾರ ಇದೆ. ನಾವೆಲ್ಲರೂ ಅಭಿವೃದ್ಧಿ, ಆಡಳಿತ ಸೌಧಕ್ಕೆ ಕಡೆಗೆ ಗಮನ ಹರಿಸಬೇಕಿದೆ. ಇದರ ಮಧ್ಯೆ ಆರೋಪ ಬರ್ತಾನೆ ಇರ್ತವೆ. ಹೀಗಾಗಿ ಇದರ ಬಗ್ಗೆ ಹೆಚ್ಚು ಗಮನ ಕೊಡೋದು ಅವಶ್ಯಕತೆ ಇಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದರು.

ಪ್ರಧಾನಿ ಮೋದಿಗೆ ದೂರು ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಾಡಲಿ ಯಾರು ಬೇಡ ಅಂದವರು, ಅದೇನು ದೊಡ್ಡ ಸಮಸ್ಯೆ, ಆರೋಪ ಹೊತ್ತವರು ರಾಜೀನಾಮೆ ಕೊಡುತ್ತಾರೆ ಅಷ್ಟೆ. ಆರೋಪ ಸಾಬೀತಾದರೆ ರಾಜೀನಾಮೆ ಕೊಡುತ್ತಾರೆ. ಮನೆಗೆ ಹೋಗುತ್ತಾರೆ. ಇಷ್ಟೇ ಆಗೋದು. ಸರ್ಕಾರಕ್ಕೆ ಇದೊಂದು ದೊಡ್ಡ ಚಾಲೆಂಜ್‌ ಅಲ್ಲ. ಯಾರು ತಪ್ಪು ಮಾಡುತ್ತಾರೆ ಅವರು ಶಿಕ್ಷೆ ಅನುಭವಿಸುತ್ತಾರೆ ಎಂದರು.