ಬಾಂಬೆ ಬಾಯ್ಸ್‌ ಬರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಅದನ್ನು ಪಕ್ಷದ ಹೈಕಮಾಂಡ್‌ ನೋಡಿಕೊಳ್ಳುತ್ತದೆ; ತೀರ್ಮಾನಿಸುತ್ತದೆ. ಆದರೆ, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಎರಡೂ ಪಕ್ಷಗಳು ಹತಾಶೆಗೊಂಡಿರುವುದಂತೂ ಸತ್ಯ. ಹೀಗಾಗಿ, ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್‌ನಲ್ಲಿ ಮಾತ್ರ ಭವಿಷ್ಯ ಇಲ್ಲದಂತಾಗಿದೆ ಎಂದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ

ಕೊಪ್ಪಳ(ಆ.17): ಬಾಂಬೆ ಬಾಯ್ಸ್‌ ಅಷ್ಟೇ ಅಲ್ಲ, ಸ್ವಲ್ಪ ತಡಿರಿ. ಬಿಜೆಪಿ, ಜೆಡಿಎಸ್‌ನಲ್ಲಿ ಭವಿಷ್ಯ ಇಲ್ಲ ಎನ್ನುವುದು ಗೊತ್ತಾಗಿದೆ. ಹೀಗಾಗಿ, ಅಲ್ಲಿ ಯಾವೊಬ್ಬ ಶಾಸಕರು ಇರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ತಾಲೂಕಿನ ಮುನಿರಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬೆ ಬಾಯ್ಸ್‌ ಬರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಅದನ್ನು ಪಕ್ಷದ ಹೈಕಮಾಂಡ್‌ ನೋಡಿಕೊಳ್ಳುತ್ತದೆ; ತೀರ್ಮಾನಿಸುತ್ತದೆ. ಆದರೆ, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಎರಡೂ ಪಕ್ಷಗಳು ಹತಾಶೆಗೊಂಡಿರುವುದಂತೂ ಸತ್ಯ. ಹೀಗಾಗಿ, ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್‌ನಲ್ಲಿ ಮಾತ್ರ ಭವಿಷ್ಯ ಇಲ್ಲದಂತಾಗಿದೆ ಎಂದರು.

ತುಂಗಭದ್ರಾ ಕಾಲುವೆಗೆ ನ.30ರವರೆಗೆ ನೀರು: ಸಚಿವ ಶಿವರಾಜ ತಂಗಡಗಿ

ಕುಮಾರಸ್ವಾಮಿ ಅವರಿಗೆ ಈ ಬಾರಿ ಆಟ ಆಡುವುದಕ್ಕೆ ಅವಕಾಶ ಇಲ್ಲದಂತಾಗಿದೆ. ಕಾಂಗ್ರೆಸ್‌ 136 ಸ್ಥಾನಗಳೊಂದಿಗೆ ಭರ್ಜರಿ ಜಯ ಸಾಧಿಸಿರುವುದರಿಂದ ಎಲ್ಲ ದಾರಿಗಳು ಮುಚ್ಚಿವೆ. ಇತರರಿಂದ ಅವರು ಹತಾಶೆಗೊಂಡು ಹೇಗೇಗೋ ಮಾತನಾಡುತ್ತಿದ್ದಾರೆ ಎಂದರು.