Asianet Suvarna News Asianet Suvarna News

ಬೆಂಗಳೂರು ಬಿಟ್ಟು ಹೊರಟ ಸಚಿವ ಸೋಮಣ್ಣ.! ಚಾಮರಾಜನಗರ ಕ್ಷೇತ್ರದ ಮೇಲೆ ಕಣ್ಣು

ನಾನು ವರುಣಾ ಕ್ಷೇತ್ರಕ್ಕೆ ಹೋಗಲ್ಲ. ಆದರೆ, ವರಿಷ್ಠರು ಚಾಮರಾಜನಗರಕ್ಕೆ ಹೋಗಿ ಅಲ್ಲಿ ನೀವು ಸೆಟಲ್ ಆಗುವಂತೆ ಸೂಚನೆ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. 

Minister Somanna left Bengaluru eyes on Chamarajanagar constituency sat
Author
First Published Mar 21, 2023, 11:17 AM IST | Last Updated Mar 21, 2023, 11:17 AM IST

ಚಾಮರಾಜನಗರ (ಮಾ.21): ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡುವ ಕುರಿತ ತೀರ್ಮಾನ ಹೈಕಮಾಂಡ್ ಗೆ ಬಿಟ್ಟಿದ್ದು. ಈಗಾಗಲೇ ನನಗೆ ನನ್ನ ಕ್ಷೇತ್ರ ಇದೆ. ಅದಕ್ಕೂ ಮೀರಿ ಚಾಮರಾಜನಗರಕ್ಕೆ ಹೋಗಿ ಅಲ್ಲಿ ನೀವು ಸೆಟಲ್ ಆಗುವಂತೆ ನನಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನು ಬಿಟ್ಟು ಹೋಗುವ ಮುನ್ಸೂಚನೆ ನೀಡಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ದ ನೀವು ಸ್ಪರ್ಧೆ ಮಾಡ್ತಿರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಾನು ವರುಣಾ ಕ್ಷೇತ್ರಕ್ಕೆ ಯಾಕೆ ಹೋಗಲಿ.? ಮಾಧ್ಯಮಗಳು ಯಾಕೆ ನನ್ನ ವಿಷಯದಲ್ಲಿ ಮಲತಾಯಿ ಧೋರಣೆ ತೋರಿಸ್ತೀರಿ. ಸಿದ್ದರಾಮಯ್ಯ ರಾಜ್ಯದ ದೊಡ್ಡ ಲೀಡರ್. ಈ ಹಿಂದೆ ಚಾಮುಂಡೇಶ್ವರಿ ಬೈ ಎಲೆಕ್ಷನ್‌ಲ್ಲಿ ನಾನು ಕೆಲಸ ಮಾಡಿದ್ದೆನು. 42 ಬೂತ್ ಜವಬ್ದಾರಿ ತಗೊಂಡಿದ್ದೆ. ಸಿದ್ದರಾಮಯ್ಯಗೆ ಯಾವ ಕ್ಷೇತ್ರದಲ್ಲಿ ಟಿಕೆಟ್‌ ನೀಡೊದು ಬಿಡೋದು, ಅವರ ಹೈಕಮಾಂಡ್ ನಿರ್ಧಾರ ಮಾಡತ್ತದೆ. ಅದಕ್ಕಿಂತ ಮುಖ್ಯವಾಗಿ ಸಿದ್ದರಾಮಯ್ಯ ಒಬ್ಬ ರಾಜ್ಯದಲ್ಲಿ ಸರ್ವೋಚ್ಛ ನಾಯಕರು. ಅವರ ವಿರುದ್ದ ಸ್ಪರ್ಧೆ ಮಾಡುವ ಬಗ್ಗೆ ತೀರ್ಮಾನ ಮಾಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದರು.

ಬಸ್‌ ನಿಲ್ದಾಣ ಎಲ್ಲಾ ಕಡೆ ಕಟ್ಟಲಾಗಲ್ಲ, ಪುನಃ ಬಿಜೆಪಿ ಸರ್ಕಾರ ಬರುತ್ತೆ: ಸಚಿವ ಸೋಮಣ್ಣ

ಚಾಮರಾಜನಗರದಲ್ಲಿ ಸೆಟಲ್‌ ಆಗುವಂತೆ ಸೂಚನೆ: ನಾನು ಬೇರೆಯವರ ತರ ಏನೋ ಮಾತಾಡಲ್ಲ. ಅದರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ. ಈಗಾಗಲೇ ನನಗೆ ನನ್ನ ಕ್ಷೇತ್ರ ಇದೆ. ಅದಕ್ಕೂ ಮೀರಿ ಚಾಮರಾಜನಗರಕ್ಕೆ ಹೋಗಿ ಅಲ್ಲಿ ನೀವು ಸಟಲ್ ಆಗುವಂತೆ ನನಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ಹೀಗಿರುವಾಗ ನನ್ನನ್ನು ಯಾಕೆ ವರುಣಾಗೆ ತಂದು ಹಾಕುತ್ತೀರಿ. ಆ ರೀತಿಯ ಗೊಂದಲಗಳು ಬೇಡ. ನಮ್ಮ ಪಕ್ಷದಲ್ಲಿ ಸಾಕಷ್ಟು ಅಭ್ಯರ್ಥಿಗಳು ಇದ್ದಾರೆ. ಸಿದ್ದರಾಮಯ್ಯ ವಿರುದ್ಧ ತಕ್ಕ ಅಭ್ಯರ್ಥಿಯನ್ನು ನಮ್ಮ ಪಾರ್ಟಿ ಹಾಕುತ್ತದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಡಯಾಲಿಸಿಸ್ ಕೇಂದ್ರದ 'ಪ್ರಥಮ ವಾರ್ಷಿಕೋತ್ಸವ:  ಬಿಬಿಎಂಪಿ ವ್ಯಾಪ್ತಿಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರುತಿ ಮಂದಿರ ವಾರ್ಡ್‌ನಲ್ಲಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ 'ಪ್ರಥಮ ವಾರ್ಷಿಕೋತ್ಸವ' ಕಾರ್ಯಕ್ರಮಕ್ಕೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಚಾಲನೆ ನೀಡಿದರು.

ಈ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ 68 ಡಯಾಲಿಸಿಸ್ ಉಪಕರಣಗಳ ವ್ಯವಸ್ಥೆ ಮಾಡಲು ಸ್ಥಳಾವಕಾಶವಿದ್ದು, ಪ್ರಾರಂಭದಲ್ಲಿ 2 ಉಪಕರಣಗಳಿಂದ ಪ್ರಾರಂಭವಾಗಿ ಇದೀಗ 42 ಉಪಕರಣಗಳು ಕಾರ್ಯನಿರ್ವಹಿಸುತ್ತಿದೆ. ಇದುವರೆಗೆ 20,100 ಮಂದಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ನೀಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರು ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಎ.ಪಿ.ಎಲ್ ಕಾರ್ಡ್ ಹೊಂದಿರುವವರಿಗೆ 700 ರೂ. ತೆಗೆದುಕೊಳ್ಳಲಾಗುತ್ತಿದೆ ಎಂದು ಸೋಮಣ್ಣ ಮಾಹಿತಿ ನೀಡಿದರು.

ಸಚಿವ ಸೋಮಣ್ಣ, ಪ್ರಿಯಕೃಷ್ಣ ಬೆಂಬಲಿಗರ ಹೊಡೆದಾಟ: 3 ಪ್ರಕರಣ ದಾಖಲು

ಈ ಕಾರ್ಯಕ್ರಮದಲ್ಲಿ ಬಿಬಿಎಂಪಿಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ವಲಯ ಜಂಟಿ ಆಯುಕ್ತ ಲೋಕನಾಥ್, ಕ್ಲಿನಿಕಲ್‌ ವಿಭಾಗದ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ನಿರ್ಮಲ ಬುಗ್ಗಿ, ವಲಯ ಆರೋಗ್ಯಾಧಿಕಾರಿ ಡಾ. ಮನೋರಂಜನ್ ಹೆಗ್ಡೆ, ಇನ್ಸ್ ಟೊಟ್ಯೂಟ್ ಆಫ್  ನೆಫ್ರೋ ಯುರಾಲಜಿ ಸಂಸ್ಥೆಯ ನಿರ್ದೇಶಕ ಡಾ. ಕೇಶವಮೂರ್ತಿ ಇತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios