ST Somashekar Clarification: ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ಕೊಟ್ಟ ಎಸ್.ಟಿ ಸೋಮಶೇಖರ್

* ಕಾಂಗ್ರೆಸ್ ಸೇರ್ಪಡೆ ಸುದ್ದಿಗೆ ಸ್ಪಷ್ಟನೆ ಕೊಟ್ಟ ಸಚಿವ ಎಸ್‌ಟಿ ಸೋಮಶೇಖರ್
* ಬೆಳಗಾವಿಯಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟನೆ
* ಮುಂಬರುವ ಚುನಾವಣೆ ವೇಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹಬ್ಬಿತ್ತು

Minister ST Somashekar Gives Clarification about Join Congress rbj

ಬೆಳಗಾವಿ, (ಡಿ.24): ಮುಂಬರುವ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ನಾಯಕರುಗಳು ಭರ್ಜರಿ ತಯಾರಿಗಳು ನಡೆದಿವೆ. 

ಹೌದು...ಮಂದಿನ ರಾಜಕೀಯ ಭವಿಷ್ಯಕ್ಕೆ ಕೆಲ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಂಪ್ ಆಗುತ್ತಿದ್ದಾರೆ. ಅದರಲ್ಲೂ ಜೆಡಿಎಸ್ ನಾಯಕರು ಸಾಲುಗಟ್ಟಿ ನಿಂತಿದ್ದಾರೆ. ಇನ್ನು ಇದರ ಮಧ್ಯೆ ಸಚಿವ ಎಸ್‌ಟಿ ಸೋಮಶೇಖರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

Karnataka Politics : ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ -ಸಿಎಂ ಬದಲು

ಇಂದು(ಶುಕ್ರವಾರ) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆಗೆ ಇನ್ನೂ ಸಮಯವಿದೆ. ಕಾಂಗ್ರೆಸ್ ಸೇರುವ ಬಗ್ಗೆ ಏನೂ ಯೋಚಿಸಿಲ್ಲ. ಸದ್ಯ ಬಿಜೆಪಿಯಲ್ಲಿ ಇದ್ದೇನೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಗೆ ವಾಪಸ್ಸಾಗುವ ವದಂತಿ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಕೆ ಶಿವಕುಮಾರ್ ನಮ್ಮ ಹಳೆಯ ಸ್ನೇಹಿತರು. ರಾಜಕೀಯವೇ ಬೇರೆ, ಸ್ನೇಹವೇ ಬೇರೆ. ಕೆಲವೊಮ್ಮೆ ಮುಖಾಮುಖಿಯಾದಾಗ‌ ಪರಸ್ಪರ ಕುಶಲೋಪರಿ ಮಾತನಾಡುತ್ತೇವೆ. ಸದ್ಯಕ್ಕೆ ನಾನು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಗೆ ವಾಪಸ್ಸಾಗುವ ಪ್ರಶ್ನೆಯೇ ಇಲ್ಲ ಎಂದರು.

ನಾಯಕತ್ವ ಬದಲಾವಣೆ ವದಂತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರು ಆಗಾಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆಯಾಗುವುದಿಲ್ಲ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ. ಈಗಾಗಲೇ ಅಮಿತ್ ಶಾ ಕೂಡ ಇದನ್ನ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್‌ನಿಂದ ಬಿಜೆಪಿಗೆ
ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಎಸ್‌ಟಿ ಸೋಮೇಶಖರ್ ಅವರು ಬಿಜೆಪಿ ಸೇರಿದ್ದರು. ಬಳಿಕ ಉಪಚುನಾವಣೆ ಅಖಾಡಕ್ಕಿಳಿದು ಗೆಲುವು ಸಾಧಿಸಿದ್ದರು. 

ಬೊಮ್ಮಾಯಿ ಬದಲಾವಣೆಯಾಗುತ್ತಾ?
ಅನಾರೋಗ್ಯ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳುತ್ತಾರೆ. ಹೀಗಾಗಿ ” ಸಿಎಂ ಬದಲಾವಣೆ” ಗುಸು ಗುಸು ಶುರುವಾಗಿದೆ. ಒಂದು ವೇಳೆ ಬಸವರಾಜ ಬೊಮ್ಮಾಯಿ ಬದಲಾವಣೆ ಆಗಿದ್ದಲ್ಲಿ ಮುಂದಿನ ಸಿಎಂ ಯಾರು ಎನ್ನುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ.

ಒಂದು ಕಡೆ ಸಚಿವ ಮುರುಗೇಶ್ ನಿರಾಣಿ ಹೆಸರು ಕೇಳಿಬರುತ್ತಿದ್ದರೆ, ಮತ್ತೊಂದು ಗುಂಪಿನಿಂದ ಈಗಾಗಲೇ ಒಂದು ಬಾರಿ ಮುಖ್ಯಮಂತ್ರಿಯಾಗಿರುವ ಜಗದೀಶ್ ಶೆಟ್ಟರ್ ಹೆಸರು ಚಾಲ್ತಿಯಲ್ಲಿದೆ.

ಒಟ್ಟಿನಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶ ಮುಗಿಯುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗಳು ಆಗುವ ಲಕ್ಷಣಗಳು ಕಾಣುತ್ತಿವೆ, ಅದರಲ್ಲೂ ಆಡಳಿತ ಪಕ್ಷ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಗಳಿ ಎನ್ನಲಾಗಿದೆ.

Latest Videos
Follow Us:
Download App:
  • android
  • ios