ಮೈಸೂರು, (ನ.04): ಸಂಪುಟ ವಿಸ್ತರಣೆ ಕುರಿತು ಮಾತನಾಡಿದರೆ, ನನ್ನ ಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂತ್ರಿಮಂಡಲ ವಿಸ್ತರಣೆ  ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರೆ ನನ್ನ ಮಂತ್ರಿ ಸ್ಥಾನವು ಹೋಗುತ್ತೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವುದಕ್ಕೆ ನನಗೆ ಅಧಿಕಾರ ಇಲ್ಲ, ಮಾಧ್ಯಮದವರು ನನಗೆ ಅಧಿಕಾರ ಕೊಡಿಸಿದರೆ ನಾನು ಮಾತನಾಡಬಹುದು. ನನಗೆ ಎಷ್ಟು ಅಧಿಕಾರ ಇದೆ ಅಷ್ಟಕ್ಕೆ ಮಾತ್ರ ಉತ್ತರಿಸುತ್ತೇನೆ ಹೇಳಿದರು.

ಮತ್ತೆ ಶುರುವಾಯ್ತು ಸಂಪುಟ ಕಸರತ್ತು, ಬೈ ಎಲೆಕ್ಷನ್ ನಂತ್ರ ಮಂತ್ರಿಯಾಗ್ತಿನಿ ಎಂದ MLC

ಪದೇ ಪದೇ ಮಂತ್ರಿಮಂಡಲದ ಪ್ರಶ್ನೆ ಕೇಳಿಬೇಡಿ. ಅದಕ್ಕೆ ನಾನು ಉತ್ತರ ಕೊಟ್ಟರೆ ಇರುವ ಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದರು.

ಇನ್ನು ಬೈ ಎಲೆಕ್ಷನ್‌ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರು ಗೆಲ್ಲುತ್ತಾರೆ. ಅಲ್ಲಿ ಶೇಕಡವಾರು ಕಡಿಮೆ ಆಗಿದೆ ಎಂದರೆ, ಮುಂಚೆ ಒಂದು ಜಮಾನ್ ಇತ್ತು. ಕಡಿಮೆ ಇದ್ದರೆ ಇನ್ನೊಂದು ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ.. ಆದರೆ ಕೊರೋನಾ ನಡುವೆಯೂ ಆರ್.ಆರ್ ನಗರದಲ್ಲಿ ಉತ್ತಮ ಮತ ಚಲಾವಣೆ ಆಗಿದೆ. ವಿದ್ಯಾವಂತರು ಬಂದು ಮತ ಹಾಕಿದ್ದಾರೆ. ಹಾಗಾಗಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಶಿರಾ ಉಪ ಚುನಾವಣೆಯ ಮತದಾನ ವಿಚಾರವಾಗಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಸೋಲು ಒಪ್ಪಿಕೊಂಡಿದ್ದಾರೆ. ಇವಿಎಂ ಮೇಲೆ ಅವರು ಆರೋಪ ಮಾಡಿದ್ದಾರೆ. ಅವರ ಸೋಲು ಮತ್ತು ಹತಾಶೆಯ ಸಂಕೇತವೆಂದರು. ಫಲಿತಾಂಶ ಬಂದ ಮೇಲೆ ಕಾರಣ ಕೊಡುವುದಕ್ಕಿಂತ, ಜಯಚಂದ್ರ ಅವರು ಮುಂಚೆಯೇ ಕಾರಣ ಹುಡುಕಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.