ದಾವಣಗೆರೆ, (ನ.16):  ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ನಮಗೆ ಮಾಹಿತಿ ಇರುವುದಿಲ್ಲ. ಎಂಟಿಬಿ ನಾಗರಾಜ್​, ಮುನಿರತ್ನ ಅವರಿಗೆ ಸಚಿವ ಸ್ಥಾನದ ಬಗ್ಗೆ ಚರ್ಚೆ ಮಾಡಿಲ್ಲ. ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದರು.

"

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ 17 ಜನರಿಗೆ ಸಚಿವ ಸ್ಥಾನ ನೀಡಬೇಕಿತ್ತು, ನೀಡಿದ್ದಾರೆ. ಸಿಎಂ ನುಡಿದಂತೆ ನಡೆದಿದ್ದಾರೆ. ಹೊಸದಾಗಿ ಬೇಡಿಕೆ, ಮನವಿ ಸಲ್ಲಿಸುವ ಅಗತ್ಯವಿಲ್ಲ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದು ಸಿಎಂ ಅವರಿಗೆ ಗೊತ್ತಿದೆ ಎಂದು ಸಚಿವ ಎಸ್​.ಟಿ ಸೋಮಶೇಖರ್ ಅವರು ಸಿಎಂ ಬಿಎಸ್​ವೈ ನಡೆಯನ್ನು ಸಮರ್ಥಿಸಿಕೊಂಡರು.

ಗ್ರಾಮ ಪಂಚಾಯತಿ ಚುನಾವಣೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಇನ್ನು ಇದೇ ವೇಳೆ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಬಿಜೆಪಿ ಸಿದ್ಧವಿಲ್ಲ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಬಗ್ಗೆ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು,  ಗ್ರಾಮ ಪಂಚಾಯಿತಿ ಎಲೆಕ್ಷನ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್​​ನವರಿಗೆ ಸತ್ಯ ಹೇಳಿ ಗೊತ್ತಿಲ್ಲ, ಜನವರಿ ತಿಂಗಳಲ್ಲಿ ಗ್ರಾ.ಪಂ. ಚುನಾವಣೆಗೆ ಸರ್ಕಾರ ನಿರ್ಧರಿಸಿತ್ತು ಎಂದು ಸ್ಪಷ್ಟಪಡಿಸಿದರು.

ಗ್ರಾ.ಪಂ, ತಾ.ಪಂ ಎರಡೂ ಒಟ್ಟಿಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ತೀರ್ಮಾನವಾಗಿತ್ತು. ನಾವು ಚುನಾವಣೆಗೆ ಸಿದ್ಧರಾಗಿದ್ದೇವೆ. ಈಗಾಗಲೇ ನ್ಯಾಯಾಲಯ ಆದೇಶ ನೀಡಿದೆ. ಆ ಆದೇಶವನ್ನು ಪಾಲನೆ ಮಾಡಲಾಗುವುದು ಎಂದು ಹೇಳಿದರು.