ಬೆಂಗಳೂರು(ಜು.24): ಉಪಕಾರ ಸ್ಮರಣೆ ಇರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಡಾ. ಕೆ. ಸುಧಾಕರ್ ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ಮಾನ್ಯ ಸಿದ್ದರಾಮಯ್ಯನವರು ನಾನು ಅಧಿಕಾರದ ಅಹಂನಿಂದ ಮಾತನಾಡಿದ್ದೇನೆ, ನನಗೆ ಉಪಕಾರ ಸ್ಮರಣೆ ಇರಬೇಕು ಎಂದಿದ್ದಾರೆ. ಅವರು ಈ ಹಿಂದೆ ನೀಡಿರುವ ಸಹಕಾರ ಮತ್ತು ಮಾರ್ಗದರ್ಶನವನ್ನು ಸದಾ ಸ್ಮರಿಸುತ್ತೇನೆ. ನನ್ನ ಅಳಿಲು ಸೇವೆಯನ್ನು ಅವರೂ ಸಹ ಮರೆತಿಲ್ಲ ಅಂತಾ ಭಾವಿಸಿದ್ದೇನೆ ಎಂದು ತಿರುಗೇಟು ನೀಡಿದ್ಧಾರೆ.

ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

ಳೆದ 5 ತಿಂಗಳಿನಿಂದ ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತು ಕಾರ್ಯ ಕ್ಷಮತೆಯಿಂದ ಅವಿರತವಾಗಿ ಶ್ರಮಿಸುತ್ತಿರುವ ಸನ್ನಿವೇಶದಲ್ಲಿ ನನ್ನ ಇಲಾಖೆಯ ವಿರುದ್ಧ ಸತ್ಯಕ್ಕೆ ದೂರವಾದ ಅರೋಪಗಳು ಬಂದಾಗ ಜವಾಬ್ದಾರಿಯುತವಾಗಿ ವಾಸ್ತವಾಂಶವನ್ನು ಜನರ ಮುಂದಿಟ್ಟದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ನಿಂದನೆ ಅಥವಾ ಅಪಹಾಸ್ಯದ ಉದ್ದೇಶವಿಲ್ಲ ಎಂದಿದ್ದಾರೆ.