ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನ ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದು, ಇದಕ್ಕೆ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ..

ಬೆಳಗಾವಿ, (ನ.21): ಸಂಪುಟ ಕಸರತ್ತು ಜೋರಾದ ಹಿನ್ನೆಲೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನ ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚೆರ್ಚೆಗೆ ಗ್ರಾಸವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

ಅದು ಸಂಪುಟ ವಿಸ್ತರಣೆ ಸಂದರ್ಭದಲ್ಲಿ ದಿಲ್ಲಿಯಲ್ಲಿ ಮೊಕ್ಕಾಂ ಹೂಡಿದ್ದು, ಭಾರೀ ಕುತೂಹಲ ಮೂಡಿಸಿದ್ದು, ಹಲವು ಗುಸು-ಗುಸು ಸುದ್ದಿಗಳು ಹರಿದಾಡುತ್ತಿವೆ.

ಸಿಎಂಗಿಂತ ಮೊದಲೇ ಹೋಗಿ ಕುಂತ ಸಾಹುಕಾರ: ದಿಲ್ಲಿಯಲ್ಲಿ ಜಾರಕಿಹೊಳಿ ನಡೆ ಕುತೂಹಲ

ಇನ್ನು ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದು, ಬಿ ಎಲ್ ಸಂತೋಷ್ ನಮ್ಮ ಪಕ್ಷದ ದೊಡ್ಡ ನಾಯಕರು. ಅವರನ್ನು ಸಚಿವ ರಮೇಶ ಜಾರಕಿಹೊಳಿ ಭೇಟಿ ಮಾಡುವುದು ಅಪರಾಧವಲ್ಲ ಎಂದು ಎಂದದರು.

ಸಚಿವ ರಮೇಶ ಜಾರಕಿಹೊಳಿ‌ ದೆಹಲಿ ಭೇಟಿ ಸಾಮಾನ್ಯ.‌ ನೀರಾವರಿ ಇಲಾಖೆ ಸಂಬಂಧ ಭೇಟಿ ಮಾಡಿದ್ದಾರೆ. ಇಲಾಖೆಗೆ ಸಂಬಂಧಿಸಿದಂತೆ ಕೋರ್ಟ್ ಕೆಲಸ ಇರುತ್ತೆ ಹೀಗಾಗಿ ಭೇಟಿ ಆಗಿರಬಹುದು. ಅದಕ್ಕೆ ಬೇರೆ ಅರ್ಥವನ್ನು ಕಲ್ಪಿಸಬಾರದು. ನಮ್ಮ ಪಕ್ಷದ ಸಂಘಟನಾ ಕಾರ್ಯದರ್ಶಿಯವರನ್ನು ಭೇಟಿ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದರು.

ಎಂ.ಟಿ.ಬಿ ನಾಗರಾಜ್, ಆರ್. ಶಂಕರ, ಮುನಿರತ್ನ, ವಿಶ್ವನಾಥ್ ಗೆ ಸಚಿವ ಸ್ಥಾನ ಸಿಗುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಮಂತ್ರಿಗಳು ಆಗುವ ವಿಶ್ವಾಸವಿದೆ‌. ಸಿಎಂ ಈ ಬಗ್ಗೆ ಹಲವು ಸಲ ಸ್ಪಷ್ಟವಾಗಿ ಹೇಳಿದ್ದಾರೆ.‌ಸಿ ಎಂ ಯಡಿಯೂರಪ್ಪ ಮೇಲೆ ವಿಶ್ವಾಸವಿದೆ. ಉಪಚುನಾವಣೆ ಸೋತವರು ಎಂಎಲ್ ಸಿ ಆಗಿದ್ದಾರೆ. ಮುಂದೆ ಮಂತ್ರಿಗಳು ಆಗುವ ವಿಶ್ವಾಸವಿದೆ ‌ಎಂದು ಹೇಳಿದರು.