ಸಂಕಷ್ಟಕ್ಕೆ ನೆರವಾದ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್, ಸಚಿವ ಸುಧಾಕರ್ ಧನ್ಯವಾದ!
ಕೊರೋನಾ ಸಂಕಷ್ಟದ ಸಮಯದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ ಕಾರ್ಯಕ್ಕೆ ಆರೋಗ್ಯ ಸಚಿವ ಸುಧಾಕರ್ ಅವರು ಅಭಿನಂದನಗಳನ್ನ ತಿಳಿಸಿದ್ದಾರೆ.
ವಿಜಯಪುರ/ಬೆಂಗಳೂರು, (ಏ.23): ಮಾಜಿ ಸಚಿವ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೋನಾ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದ್ದಾರೆ. ಇದಕ್ಕೆ ಆರೋಗ್ಯ ಸಚಿವ ಸುಧಾಕರ್ ಅಭಿನಂದನೆಗಳು ಹೇಳಿದ್ದಾರೆ.
ಇದೇ ರೀತಿ ಆಸ್ಪತ್ರೆಗಳು, ವೈದ್ಯಕೀಯ ಸಂಸ್ಥೆಗಳು ಜನರ ಸಂಕಷ್ಟಕ್ಕೆ ಮಿಡಿಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ವಿಜಯಪುರದ ಬಿಎಲ್‌ಡಿಇ ಮೆಡಿಕಲ್ ಕಾಲೇಜಿನ ಮುಖ್ಯಸ್ಥರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕೊರೋನಾದಿಂದಾಗಿ ಬಾಧಿತರಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ರಾಜ್ಯ ಸರ್ಕಾರದಿಂದ ಖಾಸಗಿ ಆಸ್ಪತ್ರೆಗಳ ಶೇ.50 ರಷ್ಟು ಹಾಸಿಗೆಗಳನ್ನು ಕೋವಿಡ್‌ಗೆ ಮೀಸಲಿಡುವ ಕ್ರಮ ಹಾಗೂ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವಂತೆ ಎಂಬಿ ಪಾಟೀಲ್ ವೈದ್ಯರಿಗೆ ತಿಳಿಸಿದ್ದಾರೆ.
ರಾಜ್ಯದ ಜಿಂದಾಲ್ ಆಕ್ಸಿಜನ್ ಮಹಾರಾಷ್ಟ್ರಕ್ಕೆ: ಎಂ.ಬಿ.ಪಾಟೀಲ್ ಆಕ್ರೋಶ
ಎಂ.ಬಿ. ಪಾಟೀಲ್ ಅವರ ಈ ಕ್ರಮಕ್ಕೆ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದು, ವಿಜಯಪುರದ ಬಿ ಎಲ್ ಡಿಇ ಮೆಡಿಕಲ್ ಕಾಲೇಜಿನ ಮುಖ್ಯಸ್ಥರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕೊರೋನಾದಿಂದಾಗಿ ಬಾಧಿತರಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ರಾಜ್ಯ ಸರ್ಕಾರದಿಂದ ಖಾಸಗಿ ಆಸ್ಪತ್ರೆಗಳ ಶೇ.50 ರಷ್ಟು ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡುವ ಕ್ರಮ ಜಾರಿಯಲ್ಲಿದೆ. ಆದರೆ ಜನಪ್ರತಿನಿಧಿಯಾಗಿ ಜನರ ಸಮಸ್ಯೆಗಳನ್ನು ಅರಿತಿರುವ ಹಿರಿಯ ರಾಜಕಾರಣಿ ಎಂ.ಬಿ.ಪಾಟೀಲ್, ತಮ್ಮ ಆಸ್ಪತ್ರೆಯಲ್ಲಿ ಹಾಸಿಗೆಗಳ ದರವನ್ನು ಶೇ.70 ರಷ್ಟು ಕಡಿತಗೊಳಿಸಿದ್ದಾರೆ. ಜೊತೆಗೆ 500 ಹಾಸಿಗೆಗಳನ್ನು ಆರ್ಥಿಕವಾಗಿ ದುರ್ಬಲರಾದ ವರ್ಗಕ್ಕೆ ಮೀಸಲಿಟ್ಟಿದ್ದಾರೆ. ಈ ಜನಸ್ನೇಹಿ ಕ್ರಮ ಇಂತಹ ಕೋವಿಡ್ ಪರಿಸ್ಥಿತಿಗೆ ಬಹಳಷ್ಟು ನೆರವಾಗಿದೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.
ಇನ್ನೂ ಅನೇಕರು ಈ ರೀತಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಿದ್ದಾರೆ. ಡಾ.ಸಿ.ವಿ.ಮೋಹನ್ ಅವರು ಬೊಮ್ಮಸಂದ್ರದ ಚೇತನ ವಿಹಾರ ಎಲ್ಡರ್ ಕೇರ್ ಸೆಂಟರ್ ನ 200 ಹಾಸಿಗೆಗಳನ್ನು ಸ್ವಯಂಪ್ರೇರಿತರಾಗಿ ಕೋವಿಡ್ ಗೆ ಮೀಸಲಿಟ್ಟಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಕರೆಗೆ ಈ ರೀತಿ ತ್ವರಿತವಾಗಿ ಸ್ಪಂದಿಸಿರುವುದು ಶ್ಲಾಘನೀಯವಾಗಿದ್ದು, ಇವರಿಗೂ ಧನ್ಯವಾದಗಳು ಎಂದು ಸಚಿವರು ತಿಳಿಸಿದ್ದಾರೆ.
ರಾಷ್ಟ್ರೋತ್ಥಾನ ರಕ್ತ ನಿಧಿ ಕೇಂದ್ರದಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡವರ ರಕ್ತದಿಂದ ಪ್ಲಾಸ್ಮ ತೆಗೆದು ಚಿಕಿತ್ಸೆಗೆ ಒದಗಿಸಿಕೊಡುವ ಅಭಿಯಾನ ಆರಂಭವಾಗಿದೆ. ಇದು ಕೋವಿಡ್ ನಿಂದ ತೀವ್ರವಾಗಿ ಬಳಲುತ್ತಿರುವ ರೋಗಿಗಳಿಗೆ ಸಂಜೀವಿನಿ ನೀಡುವ ಉತ್ತಮ ಕ್ರಮವಾಗಿದೆ ಎಂದು ಸಚಿವರು ಹೇಳಿದ್ದಾರೆ.