ಕೊರೋನಾ ಸೋಂಕಿನಿಂದಾಗಿ ಹೋಂ ಕ್ವಾರಂಟೈನ್‌ನಲ್ಲಿದ್ದ ಶಿಕ್ಷಣ ಸಚಿವ ಸುರೇಶ್ ಅವರನ್ನು ದಿಢೀರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಬೆಂಗಳೂರು, (ಅ.10): ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೂ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಕುಮಾರ್ ಅವರು ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. 

ಬಿಎಸ್‌ವೈ ಸಂಪುಟದ ಮತ್ತೋರ್ವ ಸಚಿವರೊಬ್ಬರಿಗೆ ಕೊರೋನಾ..!

ಆದ್ರೆ, ಇಂದು (ಶನಿವಾರ) ಸಂಜೆ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಜಯನಗರದ ಬಿಐಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.