Asianet Suvarna News Asianet Suvarna News

ಜಾಮೀನು ಅರ್ಜಿ ರದ್ದು, ಸಚಿವ ಸೋಮಣ್ಣಗೆ ಸಂಕಷ್ಟ

* ವಸತಿ ಸಚಿವ ವಿ ಸೋಮಣ್ಣಗೆ ಸಂಕಷ್ಟ
* ಸೋಮಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್
* ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಿಲುಕಿರುವ ಸೋಮಣ್ಣ

minister v somanna anticipatory bail plea dismissed In Da case rbj
Author
Bengaluru, First Published Apr 1, 2022, 8:38 PM IST | Last Updated Apr 1, 2022, 8:38 PM IST

ಬೆಂಗಳೂರು, (ಏ.01): ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಿಲುಕಿರುವ ವಸತಿ ಸಚಿವ ವಿ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ೯(Bail Plea Dismissed). ಈ ಹಿನ್ನೆಲೆಯಲ್ಲಿ ಸೋಮಣ್ಣಗೆ ಸಂಕಷ್ಟ ಎದುರಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣಗೆ((V Somanna) ಏಪ್ರಿಲ್ 16 ರಂದು ಖುದ್ಧು ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ಧ ಸಚಿವ ವಿ.ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಇಂದು(ಶುಕ್ರವಾರ) ಕೋರ್ಟ್ ವಜಾಗೊಳಿಸಿದೆ.

ಸಚಿವ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆಯನ್ನು ಬುಧವಾರ ನಡೆಸಿದ 110ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಹಾಗೂ ಹಾಲಿ ಮತ್ತು ಮಾಜಿ ಶಾಸಕ ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವುದಕ್ಕಾಗಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ ಜಯಂತ್ ಕುಮಾರ್ ಅವರು ಪಕ್ಷಕಾರರ ವಾದ ಆಲಿಸಿ ಆದೇಶವನ್ನು ಏಪ್ರಿಲ್‌ 1ಕ್ಕೆ ಕಾಯ್ದಿರಿಸಿದ್ದರು.

ಭ್ರ ಷ್ಟರ ಬೇಟೆ ಮಧ್ಯೆಯೇ ಮತ್ತೊಂದು ಬಿಗ್ ನ್ಯೂಸ್‌, ಕರ್ನಾಟಕದ ಹಾಲಿ ಸಚಿವರೊಬ್ಬರಿಗೆ ಸಂಕಷ್ಟ

 ಸೋಮಣ್ಣ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ (ಎಸಿಬಿ) ಸಲ್ಲಿಸಿರುವ ಬಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ತಿರಸ್ಕರಿಸಿದ್ದು, ಅವರ ವಿರುದ್ಧ ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಮಹತ್ವದ ಆದೇಶ ಮಾಡಿತ್ತು. ಅಲ್ಲದೇ, ಏಪ್ರಿಲ್ 16ರಂದು ಖುದ್ದು ಹಾಜರಾಗುವಂತೆ ಸಚಿವ ಸೋಮಣ್ಣ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಸೋಮಣ್ಣ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಸೆಕ್ಷನ್ 13(1)(ಬಿ) (ಡಿ) ಮತ್ತು (ಇ) ಜೊತೆಗೆ ಸೆಕ್ಷನ್ 13(2)ರ ಅಡಿ ಪ್ರಕರಣ ದಾಖಲಿಸಲು ನ್ಯಾಯಾಲಯವು ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸೋಮಣ್ಣ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದರು. 

ಮೂಡಲಪಾಳ್ಯದ ರಾಮಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನಲ್ಲಿಸೋಮಣ್ಣ ಮತ್ತು ಕುಟುಂಬದವರು ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ. ಮಾರ್ಗದರ್ಶಿ ಮೌಲ್ಯಕ್ಕಿಂತಲೂ ಕಡಿಮೆ ದರದಲ್ಲಿ ಜಮೀನು ಖರೀದಿಸಿದ್ದಾರೆ. ಎಸಿಬಿ ತನಿಖೆಯಲ್ಲಿ ಕೇವಲ ಅವರ ವೈಯಕ್ತಿಕ ಮತ್ತು ಖಾಸಗಿ ಸಾಲಗಳ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಸೋಮಣ್ಣ ಸಾರ್ವಜನಿಕ ಸೇವಕರಾಗಿ ಅಕ್ರಮ ಸಂಪಾದನೆ ಮಾಡುವ ಮೂಲಕ ಕ್ರಿಮಿನಲ್ ದುರ್ನಡತೆ ತೋರಿದ್ದಾರೆ. ಆದ್ದರಿಂದ, ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಕಲಂ 13(1)(ಬಿ) (ಡಿ) ಮತ್ತು (ಇ) ಕಲಂ 13(2)ರ ಅಡಿ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.

Latest Videos
Follow Us:
Download App:
  • android
  • ios