Asianet Suvarna News Asianet Suvarna News

Congress Padayatre: ಕಾಂಗ್ರೆಸ್‌ ಪಾದಯಾತ್ರೆ ಹಿಂದಿನ ಕಾರಣ ಬಿಚ್ಚಿಟ್ಟ ಸಚಿವ ಸೋಮಣ್ಣ

* ಮೇಕೆದಾಟು ಯೋಜನೆ ಕಾಂಗ್ರೆಸ್ ಪಾದಯಾತ್ರೆ
* ಕಾಂಗ್ರೆಸ್ ಪಾದಯಾತ್ರೆ ಹಿಂದಿನ ಕಾರಣ ಬಿಚ್ಚಿಟ್ಟ ಸೋಮಣ್ಣ
* ಕ್ರೆಡಿಟ್ ಬಿಜೆಪಿಗೆ ಹೋಗುತ್ತದೆಯೋ ಎಂದು ಕಾಂಗ್ರೆಸ್ ಪಾದಯಾತ್ರೆ

Minister V Somanna Taunts To Congress Makedatu project Padayatre rbj
Author
Bengaluru, First Published Dec 28, 2021, 6:47 PM IST

ರಾಮನಗರ, (ಡಿ. 28): ಮೇಕೆದಾಟು ಯೋಜನೆ (Makedatu Project) ತಾರ್ಕಿಕ ಅಂತ್ಯಕ್ಕೆ ಬಂದಿದೆ. ಈಗ ಎಲ್ಲಿ ಯೋಜನೆಯ ಕ್ರೆಡಿಟ್ ಬಿಜೆಪಿಗೆ(BJP) ಹೋಗುತ್ತದೆಯೋ ಎಂದು ಕಾಂಗ್ರಸ್ ಪಾದಯಾತ್ರೆ (Congress Padayatre) ಹಮ್ಮಿಕೊಂಡಿದೆ ಎಂದು ವಸತಿ ಸಚಿವ ವಿ. ಸೋಮಣ್ಣ (V Somanna) ಟಾಂಗ್ ಕೊಟ್ಟಿದ್ದಾರೆ.

ರಾಮನಗರ(Ramanagara) ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡೂರು ಗ್ರಾಮದಲ್ಲಿ ಇಂದು(ಮಂಗಳವಾರ) ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುವ ಮೂಲಕ ರಾಜಕೀಯ ಮಾಡುತ್ತಿದೆ.  ಈ ಹಿಂದೆ ಅವರೇ ಸರ್ಕಾರದಲ್ಲಿ ಇದ್ದರು. ಈ ಯೋಜನೆ ಆರಂಭಿಸಲು ಕಾನೂನು ತೊಡಕು ಮುಗಿಸಿ, ತಾಂತ್ರಿಕ ಸಮಸ್ಯೆಗಳನ್ನು ಮುಗಿಸಿ ಒಂದು ಹಂತಕ್ಕೆ ಬಂದಿದೆ. ಇದನ್ನು ತಿಳಿದುಕೊಂಡು ಬಿಜೆಪಿ ಅವರಿಗೆ ಹೆಸರು ಬರಬಾರದು ಎಂದು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಆರೋಪಿಸಿದರು.

Night Curfew: ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ, ಕೊರೋನಾ ಇದ್ದಾಗ್ಲೇ ಬಿಜೆಪಿ ಜನಾಶೀರ್ವಾದ ಯಾತ್ರೆ ಮಾಡಿಲ್ವಾ?

ಕೆಪಿಸಿಸಿ ಅಧ್ಯಕ್ಷ ಡಿ. ‌ಕೆ. ಶಿವಕುಮಾರ್ (DK Shivakumar) ಕನಕಪುರ ತಾಲೂಕಿನವರು ಅವರ ಕರ್ತವ್ಯ ಮಾಡುತ್ತಿದ್ದಾರೆ. ಈ ಯೋಜನೆ ಆರಂಭಿಸುತ್ತೇವೆ ಎಂದು ಈಗಾಗಲೇ ಸಿಎಂ ಹೇಳಿದ್ದಾರೆ. ಹೀಗಾಗಿ ಈ ಯೋಜನೆ ಮಾಡುತ್ತೇವೆ. ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಸರ್ಕಾರ ಮಾಡುತ್ತದೆ ಎಂದು ಹೇಳಿದರು. 

ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಇದೆ, ಏನೋ ಮಾಡುತ್ತಿದ್ದಾರೆ. ಮೇಕೆದಾಟು ಯೋಜನೆ ನಿನ್ನೆ ಮೊನ್ನೆಯದ್ದಲ್ಲ. ಮಾಜಿ ಪ್ರಧಾನಿ ದೇವೇಗೌಡರು‌ ಸಿಎಂ ಆದಾಗಲಿಂದಲೂ ಇದೆ. ಇದೀಗ ಒಂದು ಹಂತಕ್ಕೆ ಬಂದಿದೆ. ಮೇಕೆದಾಟು ಯೋಜನೆ ಆಗಬೇಕು ಎಂಬುದು ಎಲ್ಲರ ಆಶಯವಾಗಿದೆ. ಕಾನೂನು ಚೌಕಟ್ಟಿನಲ್ಲಿ ಮಾಡಬೇಕಾಗಿದ್ದು, ಕಾನೂನು ಮೀರಲು ಯಾರಿಂದಲೂ ಸಾಧ್ಯವಿಲ್ಲ. ಇದೀಗ ಕಾಂಗ್ರೆಸ್‌ನವರಿಗೆ ಜ್ಞಾನೋದಯ ಆಗಿದೆ ಎಂದು ದೂರಿದರು.

ಇನ್ನು ನೈಟ್ ಕರ್ಫ್ಯೂ ಬಗ್ಗೆ ಪ್ರತಿಕ್ರಿಯಿಸಿದ ಸೋಮಣ್ಣ, ‌ರಾಜ್ಯದಲ್ಲಿ ನೈಟ್ ಕರ್ಫೂ ಇಂದಿನಿಂದ ಜಾರಿಯಾಗಲಿದೆ. ಸಾರ್ವಜನಿಕರು ಹಾಗೂ ವಿರೋಧ ಪಕ್ಷದವರು ಆಕ್ರೋಶ ವ್ಯಕ್ರಪಡಿಸುವುದು ಸಹಜ. ಎರಡನೇ ಅಲೆಯಲ್ಲಿ ಆದ ಘಟನೆಗಳು ಮೂರನೇ ಅಲೆಯಲ್ಲಿ ಆಗಬಾರದು ಎಂಬುದು ನಮ್ಮ ಚಿಂತನೆ ಎಂದರು.

ನೈಟ್ ಕರ್ಫ್ಯೂ ಜಾರಿ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ ಸಿ. ಟಿ. ರವಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ವಿ. ಸೋಮಣ್ಣ, ಸಿ. ಟಿ. ರವಿ ಅವರೂ ಯಾವ ರೀತಿ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಸಿಎಂ ಅವರೂ ಸರಿಯಾದ ಕ್ರಮ ತೆಗೆದುಕೊಂಡಿದ್ದಾರೆ. ಸಾರ್ವಜನಿಕರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.

ಸಿಎಂ ಬದಲಾವಣೆ ಬಗ್ಗೆ ಮಾತು
ಮುಖ್ಯಮಂತ್ರಿ ‌ಬದಲಾಗುತ್ತಾರೆ ಎಂಬುದುದ ಕೇವಲ ಊಹಾಪೋಹ. ಯಾರೂ ಹುಚ್ಚರು ಮಾತನಾಡುತ್ತಾರೆ ಅಷ್ಟೆ. ಸಿಎಂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಅರುಣ್ ಸಿಂಗ್ ಸಿಎಂ ಆಗಿ ಬಸವರಾಜ ಬೊಮ್ಮಯಿ ಮುಂದುವರೆಯಲಿದ್ದಾರೆ ಎಂದು ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿ ಎರಡು ಅಧಿವೇಶನ ನಡೆಸಿದ್ದಾರೆ. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. 2023ರ ಚುನಾವಣೆ ಕೂಡ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತದೆ ಎಂದು ಸೋಮಣ್ಣ ಸ್ಪಷ್ಟಪಡಿಸಿದರು.

Follow Us:
Download App:
  • android
  • ios