ಸಚಿವ ನಾಗೇಂದ್ರ ಅವರು ಅನುಮತಿ ಇಲ್ಲದೆ ದೆಹಲಿಗೆ ಹೋಗಿರುವುದು ತಪ್ಪು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ತಂದೆ ಸಿದ್ದರಾಮಯ್ಯನವರಿಗೆ ಸರ್ಕಾರದ ಬಗ್ಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರ (ಆ.10): ಸಚಿವ ನಾಗೇಂದ್ರ ಅವರು ಅನುಮತಿ ಇಲ್ಲದೆ ದೆಹಲಿಗೆ ಹೋಗಿದ್ದರೆ ಅದು ತಪ್ಪು. ನನಗೆ ಅದರ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಇದರಿಂದ ಅವರ ಜಾಮೀನು ರದ್ದಾಗುತ್ತೆ ಅನ್ನೋದು ಗೊತ್ತಿಲ್ಲ. ಅದನ್ನು ಅವರ ವಕೀಲರು ನೋಡ್ತಾರೆ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಡಿಕೆ ಶಿವಕುಮಾರ್ ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊಂದಿದ್ದಾರೆ ಎಂಬ ಆರೋಪ ವಿಚಾರವಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ‘ನಮ್ಮ ತಂದೆಗೆ ಸರ್ಕಾರದ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ಹೊಸ ಸಚಿವರ ಪ್ರಮಾಣ ವಚನ ದಿನ ಅವರ ಹುಟ್ಟುಹಬ್ಬದ ಕಾರಣ ಹೋಗಿಲ್ಲ. ಸಿದ್ದರಾಮಯ್ಯ ಅವರು ಖಾತೆ ಹಂಚಿಕೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ ಎಂದಿದ್ದಾರೆ’ ಎಂದು ಸ್ಪಷ್ಟಪಡಿಸಿದರು.
ಗಾಯತ್ರಿ ಶಾಂತೇಗೌಡ ಅವರ ವಿಷಯದಲ್ಲಿನ ಗೊಂದಲದ್ದ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೌದು, ಈ ವಿಚಾರದಲ್ಲಿ ನಮಗೆ ಗೊಂದಲವಾಗಿದೆ. ನಮ್ಮ ಸರ್ಕಾರದ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ನಾಗೇಂದ್ರ ಕೋರ್ಟ್ ಆದೇಶ ಉಲ್ಲಂಘನೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ,


