ನನ್ನ ಹೇಳಿಕೆಯಿಂದ ಜೆಡಿಎಸ್ ಕಾರ್ಯ ಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ನಾನು, ಕುಮಾರಸ್ವಾಮಿ ಆತ್ಮೀಯರಾಗಿದ್ದವರು. ಅವರು ನನ್ನನ್ನು ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಿದ್ದೆ. ಈಗ ಚುನಾವಣೆ ಹಿನ್ನೆಲೆಯಲ್ಲಿ ಅದನ್ನು ದೊರ ದೊಡ್ಡ ವಿಚಾರ ಮಾಡ್ತಾ ಇದ್ದಾರೆ ಎಂದ ಸಚಿವ ಜಮೀರ್‌ ‌ಅಹಮದ್ ಖಾನ್ 

ಮೈಸೂರು (ನ.13): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು 'ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ)' ಎಂದಿದ್ದ ಸಚಿವ ಜಮೀರ್‌ ‌ಅಹಮದ್ ಖಾನ್ ಅವರು ತಮ್ಮ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಕಮೆ ಕೋರಿದ್ದಾರೆ. 

ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯಿಂದ ಜೆಡಿಎಸ್ ಕಾರ್ಯ ಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದರು. 

ಕುಮಾರಸ್ವಾಮಿಗೆ 'ಕರಿಯ..' ಎಂದ ಜಮೀರ್‌, ಜನಾಂಗೀಯ ದ್ವೇಷದ ಮಾತಿಗೆ ಜೆಡಿಎಸ್‌ ಆಕ್ರೋಶ!

ನಾನು, ಕುಮಾರಸ್ವಾಮಿ ಆತ್ಮೀಯರಾಗಿದ್ದವರು. ಅವರು ನನ್ನನ್ನು ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಿದ್ದೆ. ಈಗ ಚುನಾವಣೆ ಹಿನ್ನೆಲೆಯಲ್ಲಿ ಅದನ್ನು ದೊರ ದೊಡ್ಡ ವಿಚಾರ ಮಾಡ್ತಾ ಇದ್ದಾರೆ ಎಂದು ಅವರು ಹೇಳಿದರು.